ಕನ್ನಡಪ್ರಭ ವಾರ್ತೆ ಮೈಸೂರು
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಕಲಾ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಒಡೆಯರ್ ಆಡಳಿತ ದಾರಿಯು ಎಲ್ಲಾ ಕಾಲದಲ್ಲೂ ಜನರ ಪರವಾಗಿ, ಅಭಿವೃದ್ಧಿ ಪರವಾಗಿ, ಮಾನವನ ಸಂಪನ್ಮೂಲ ಮನರಂಜನೆ ಮತ್ತು ಅದರ ಸದುಪಯೋಗಕ್ಕಾಗಿ. ತಮ್ಮ ಆಡಳಿತದಲ್ಲಿ ದೊಡ್ಡ ಶಕ್ತಿಯಾಗಿ ದೇಶದ ಮುಂದೆ ಕಾಣಿಸುತ್ತಿದ್ದರು ಎಂದರು.ಮೈಸೂರು ಎಂದರೆ ಸ್ವತಂತ್ರ ಬರುವುದಕ್ಕಿಂತ ಮುಂಚೆ ಕತ್ತಲಲ್ಲಿ ಇದ್ದರೂ, ನಾಗರಿಕತೆಯ ಗುಣಲಕ್ಷಣಗಳು ಅಷ್ಟಾಗಿ ಗೊತ್ತಿರಲಿಲ್ಲ ಶಿಕ್ಷಣ ಇರಲಿಲ್ಲ, ಅಸಮಾನತೆ, ಅಸ್ಪೃಶ್ಯತೆ, ಮಹಿಳಾ ದೌರ್ಜನ್ಯ, ದೇವದಾಸಿ ಪದ್ಧತಿ ಜೀವಂತವಾಗಿದ್ದ ಕಾಲವದು. ಆದರೂ ನಾವು ಏಷ್ಯಾದಲ್ಲಿ ಮೊದಲನೆಯ ರಾಜ್ಯ ಹೈಡ್ರೋ ಎಲೆಕ್ಟ್ರಾನಿಕ್ ನಿಂದ ವಿದ್ಯುತ್ ಉತ್ಪಾದನೆ ಮಾಡಿದ ರಾಜ್ಯ. ಕತ್ತಲೆಯಿಂದ ಬೆಳಕಿನ ಕಡೆಗೆ ಹೋಗುವಂತದ್ದು, ಇಡೀ ಏಷ್ಯಾ ಖಂಡದಲ್ಲಿ ಮೈಸೂರಲ್ಲಿ ಮೊದಲಿಗೆ ಬೀದಿ ದೀಪ ಆಳವಡಿಸಲಾಯಿತು ಎಂದರು.
ಆಡಳಿತ ಮಾಡುವವರು ಪ್ರಜಾಪ್ರಭುತ್ವವಾದಿಗಳಾಗಿರಬೇಕು. ಪ್ರಜಾಪ್ರಭುತ್ವವಾದಿ ಜನರಿಗೋಸ್ಕರ, ಜನರ ಬದುಕಿ ಗೋಸ್ಕರ, ಅವರ ಏಳಿಗೆಗೋಸ್ಕರ ಸಮುದಾಯದ ಸೌಹಾರ್ದತೆಗಾಗಿ ಮತ್ತು ಅವರ ಸ್ವಾಭಿಮಾನ ಮತ್ತು ಸ್ವರಾಜ್ಯದ ಬದುಕಿಗಾಗಿ ಅವರು ತಮ್ಮ ಆಡಳಿತ ಕಾಲವನ್ನು ನಡೆಸಿದ್ದಾರೆ. ಇಡೀ ಆಡಳಿತ ಜೀವನದೂದ್ದಕ್ಕೂ ಅವರು ಮಾಡಿದ ಕೆಲಸಗಳು ಇಂದು ನಮ್ಮ ಕಣ್ಣ ಮುಂದೆ ಗೋಚರಿಸುತ್ತಿವೆ ಎಂದರು.
ಮೈಸೂರಿನ ವಿಶ್ವವಿದ್ಯಾನಿಲಯ, ಮಹಾರಾಜ ಕಾಲೇಜು, ಮಹಾರಾಣಿ ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ನಮ್ಮ ಕಣ್ಮುಂದೆ ಇದೆ. ದಲಿತರು, ಹಿಂದುಳಿದವರು, ಮಹಿಳೆಯರು ಎಲ್ಲರಿಗೂ ಶಿಕ್ಷಣವು ಸಿಗಬೇಕು ಎನ್ನುವ ಸಲುವಾಗಿ ಶಿಕ್ಷಣದ ಮಹತ್ವದ ಬಗ್ಗೆ ಅವರು ನಿಲುವನ್ನು ಪಡೆದರು ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ಎಸ್. ತಂಗಡಗಿ ಮಾತನಾಡಿ, ಇಡೀ ದೇಶವೇ ಮೈಸೂರಿನ ಕಡೆ ತಿರುಗಿ ನೋಡಿವ ಆಡಳಿತ ಮಾಡಿದಂತವರು ಯಾರಾದರೂ ಇದ್ದರೆ ಅವರು ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಎಂದರು.
ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕಿ ಡಾ.ಎಂ.ಎಸ್. ಅನಿತಾ ವಿಶೇಷ ಉಪನ್ಯಾಸ ನೀಡಿ, ಕನ್ನಡ ನಾಡಿನ ಪ್ರಾತಃ ಸ್ಮರಣೀಯ ವ್ಯಕ್ತಿಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಒಬ್ಬರು. ಆಧುನಿಕ ಕನ್ನಡ ನಾಡಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್. ಇಂದು ನಮ್ಮ ರಾಜ್ಯ ರಾಜಧಾನಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತದೆ. ವಿಶ್ವದಾದ್ಯಂತ ಬೆಂಗಳೂರು ಸಾಕಷ್ಟು ಪ್ರಸಿದ್ಧಿ ಪಡೆದಿದೆ. ದೇಶ ಯುವಜನರು ಉದ್ಯೋಗಾವಕಾಶಗಳನ್ನು ಅರಸುವಾಗ ಅವರ ಮನಸ್ಸಿನಲ್ಲಿ ಮೂಡುವುದು ಮೊದಲಿಗೆ ಬೆಂಗಳೂರಿನ ಹೆಸರು ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಕೂಡ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಪಂಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು ಎಂದರು.