ದಲಿತರಿಗೆ ಅರಮನೆ ಪ್ರವೇಶ ಕಲ್ಪಿಸಿದ ನಾಲ್ವಡಿ ಒಡೆಯರ್

KannadaprabhaNewsNetwork |  
Published : Jun 05, 2025, 11:46 PM IST
ಕವಿ ಹನುಸೋಗೆ ಸೋಮಶೇಖರ್ ಬಣ್ಣಿಸಿದರು. | Kannada Prabha

ಸಾರಾಂಶ

ಚಾಮರಾಜನಗರದಲ್ಲಿ ಪರಿವರ್ತನ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾ ದಸಾಪ ಏರ್ಪಡಿಸಿದ್ದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ 141ನೇ ಜಯಂತಿ ಸಮಾರಂಭವನ್ನು ಕವಿ ಹನುಸೋಗೆ ಸೋಮಶೇಖರ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರಜಾ ಪ್ರತಿನಿಧಿ ಸಭೆಯಲ್ಲಿ ಎಲ್ಲ ಜಾತಿ ವರ್ಗಗಳಿಗೆ ಪ್ರಾತಿನಿಧ್ಯ ನೀಡಿ, ದಲಿತರಿಗೆ ಅರಮನೆ ಪ್ರವೇಶ ಕಲ್ಪಿಸಿದ ಸಾಮಾಜಿಕ ಕಾನೂನುಗಳ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಕವಿ ಹನುಸೋಗೆ ಸೋಮಶೇಖರ್ ಬಣ್ಣಿಸಿದರು.

ಪರಿವರ್ತನ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ 141ನೆಯ ಜಯಂತಿ ಸಮಾರಂಭವನ್ನು ಮರೆಯೋದುಂಟೆ ಮೈಸೂರು ದೊರೆಯ..ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯ.. ಎಂಬ ತಾವೇ ಬರೆದ ಹಾಡನ್ನು ಹಾಡುವುದರ ಮೂಲಕ ಮೊಂಬತ್ತಿ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೈಸೂರು ಮಹಾ ಸಂಸ್ಥಾನದಲ್ಲಿ ಸುದೀರ್ಘ 38 ವರ್ಷಗಳ ಕಾಲ ತಮ್ಮ ಪ್ರಜೆಗಳ ನೆಮ್ಮದಿ ಬದುಕಿಗಾಗಿ ತಮ್ಮ ಇಡೀ ಜೀವನವನ್ನೇ ಮುಡುಪಿಟ್ಟಿದ್ದ ದಕ್ಷ ಆಡಳಿತಗಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಸಾಧಕರ ಸಾಧನೆಯನ್ನು ಮೊಬೈಲನ್ನು ನೋಡುವುದನ್ನು ಬಿಟ್ಟು ಪುಸ್ತಕ ಓದಿ ತಿಳಿದುಕೊಳ್ಳಬೇಕು ಎಂದರು.

ನಾಲ್ಕು ದಶಕಗಳ ನಾಲ್ವಡಿ ಕೃಷ್ಣರಾಜ ಒಡೆಯರ ಸುವರ್ಣ ಯುಗದ ಚಿತ್ರಣ ಕಟ್ಟಿಕೊಡುವ ಹೆಚ್ಚು ಪುಸ್ತಕಗಳು ಲಭ್ಯವಿಲ್ಲ. ಇತಿಹಾಸದ ಪುಟಗಳಲ್ಲಿ ನಾಲ್ವಡಿ ಅವರ ಸಾಧನೆಗಳನ್ನು ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ನಡೆದಿರುವುದು ಬೇಸರದ ಸಂಗತಿ ಎಂದರು. ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಪಿ.ದೇವರಾಜ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಸಂಸ್ಥಾನದ ಕೀರ್ತಿ ಹಿರಿಮೆಯನ್ನು ದೇಶದ ಉದ್ದಗಲಕ್ಕೂ ಹಬ್ಬಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ವಿಶ್ವ ಜ್ಞಾನಿಯಾಗಿದ್ದರು ಎಂದು ಸ್ಮರಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಭಿವೃದ್ಧಿಯ ಹರಿಕಾರರಾಗಿ, ಮೈಸೂರು ವಿಶ್ವವಿದ್ಯಾನಿಲಯ, ಮಹಾರಾಜ ಕಾಲೇಜು, ಯುವರಾಜ ಕಾಲೇಜು, ವಿಕ್ಟೋರಿಯಾ ಆಸ್ಪತ್ರೆ, ಕೆಆರ್ ಮಾರ್ಕೆಟ್, ನಿಮ್ಹಾನ್ಸ್ ಆಸ್ಪತ್ರೆ, ಕೆ ಆರ್ ಎಸ್ ಅಣೆಕಟ್ಟು ನಿರ್ಮಾಣ, ಬೆಂಗಳೂರು ಟೌನ್ ಹಾಲ್, ಮಂಡ್ಯ ಸಕ್ಕರೆ ಕಾರ್ಖಾನೆ, ಭದ್ರಾವತಿ ಕಬ್ಬಿಣ ಕಾರ್ಖಾನೆ, ಮೈಸೂರು ಮೆಡಿಕಲ್ ಕಾಲೇಜು, ಮೈಸೂರು ಲ್ಯಾಂಪ್ಸ್, ಪೇಪರ್ ಮಿಲ್ , ವಾಣಿವಿಲಾಸ ಮಕ್ಕಳ ಆಸ್ಪತ್ರೆ , ಕನ್ನಡ ಸಾಹಿತ್ಯ ಪರಿಷತ್ತು ರೈಲು ನಿಲ್ದಾಣಗಳ ನಿರ್ಮಾಣ, ಕಾವೇರಿ ನದಿಗೆ ಶಿವನ ಸಮುದ್ರದಲ್ಲಿ ಜಲವಿದ್ಯುತ್ ಕಾರ್ಯಾಗಾರ ಸ್ಥಾಪನೆ ಸಹಿತ ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.ಸೆಸ್ಕ್‌ ಲೆಕ್ಕಾಧಿಕಾರಿ ಎನ್.ಮಹೇಶ್ ಮಾತನಾಡಿ, ಕನ್ನಡ ನಾಡಿಗೆ ಅಪಾರ ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಜನಾನುರಾಗಿ ಮಹಾರಾಜರಾಗಿದ್ದರು ಎಂದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ದಸಾಪ ಅಧ್ಯಕ್ಷ ಸಿಎಂ ನರಸಿಂಹಮೂರ್ತಿ ಮಾತನಾಡಿ, ನೂರು ವರ್ಷಗಳ ಇತಿಹಾಸ ಇರುವ ಚಾಮರಾಜನಗರದ ರೈಲು ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನು ಇಡಬೇಕು ಎಂದು ಆಗ್ರಹಿಸಿದರು. ಪ್ರಜಾ ಪರಿವರ್ತನಾ ವೇದಿಕೆ ಜಿಲ್ಲಾಧ್ಯಕ್ಷ ಸಿಎಂ ಕೃಷ್ಣಮೂರ್ತಿ ಸೆಸ್ಕ್ ಕಿರಿಯ ಇಂಜಿನಿಯರ್ ಎಸ್.ಸಿದ್ದರಾಜಪ್ಪ, ಜಿಲ್ಲಾ ದಸಾಪ ಅಧ್ಯಕ್ಷ ಶಿವಕುಮಾರ್ ಸರಗೂರು, ಗುಂಡ್ಲುಪೇಟೆ ಅಧ್ಯಕ್ಷ ಕೆ. ಯೋಗೇಶ್, ಯಳಂದೂರು ಅಧ್ಯಕ್ಷ ಬಳೆಪೇಟೆ ಪ್ರಕಾಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!