ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಯಲ್ಲಿ ನಮಾಜ್ ಮಾಡಿದವರ ಮೇಲೆ ಸ್ವಯಂ ದೂರು ದಾಖಲಿಸಿದ ಪೊಲೀಸರ ಮೇಲೆಯೇ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗಾದರೆ ಸ್ವಯಂ ಕೇಸು ದಾಖಲಿಸಿದ್ದು ಯಾಕೆ, ಮತ್ತೆ ವಾಪಸ್ ಪಡೆದಿರುವುದು ಯಾಕೆ ಎಂದು ಪ್ರಶ್ನಿಸಿದರು.
ಶರಣ್ ಕೇಸ್ ವಾಪಸ್‌ಗೆ ಆಗ್ರಹ: ರಸ್ತೆ ನಮಾಜ್ ವಿರುದ್ಧ ಹೇಳಿಕೆ ನೀಡಿದ ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಮೇಲೂ ಕೇಸು ದಾಖಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಇಂತಹ ಘಟನೆಗಳು ಆರಂಭದಿಂದಲೂ ನಡೆಯುತ್ತಿದ್ದು, ಶರಣ್ ಪಂಪ್‌ವೆಲ್ ವಿರುದ್ಧದ ಕೇಸನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು.ರಾಜ್ಯದಲ್ಲಿ ಗೂಂಡಾ ರಾಜಕಾರಣ ನಡೆಯುತ್ತಿದ್ದು, ಕೋಮುಭಾವನೆ ಕೆರಳಿಸುವ ಮೂಲಕ ಭಯೋತ್ಪಾದನೆ ಸೃಷ್ಟಿಗೆ ಯತ್ನ ನಡೆಯುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಆರೋಪಿಸಿದರು.
ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಸ್ಪರ್ಧೆ ಕುರಿತಂತೆ ಉತ್ತರಿಸಿದ ನಳಿನ್ ಕುಮಾರ್, ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ನಿರಂತರ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದವರು. ಪಕ್ಷ ನಾಯಕರು ಎಲ್ಲ ಯೋಚನೆ ಮಾಡಿಯೇ ಡಾ.ಸರ್ಜಿ ಅವರನ್ನು ಕಣಕ್ಕೆ ಇಳಿಸಿದ್ದಾರೆ ಎಂದರು.