ತುಮಕೂರು ವಿವಿಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಿ: ಶಾಸಕ ಸುರೇಶ್ ಗೌಡ ಒತ್ತಾಯ

KannadaprabhaNewsNetwork |  
Published : Aug 20, 2025, 01:30 AM IST
ಡಾ.ಶಿವಕುಮಾರ ಸ್ವಾಮೀಜಿ | Kannada Prabha

ಸಾರಾಂಶ

ಡಾ.ಶಿವಕುಮಾರ ಸ್ವಾಮೀಜಿಗಳು ಸಿದ್ಧಗಂಗಾ ಮಠದಲ್ಲಿ ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ, ಅಕ್ಷರ ನೀಡಿ ಅವರು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದಾರೆ.

ತುಮಕೂರು: ತುಮಕೂರು ವಿಶ್ವವಿದ್ಯಾಲಯಕ್ಕೆ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಗಳ ಹೆಸರು ಇಡಬೇಕು ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡರು ಮಂಗಳವಾರ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಡಾ.ಶಿವಕುಮಾರ ಸ್ವಾಮೀಜಿಗಳು ಸಿದ್ಧಗಂಗಾ ಮಠದಲ್ಲಿ ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ, ಅಕ್ಷರ ನೀಡಿ ಅವರು ಬದುಕು ಕಟ್ಟಿಕೊಳ್ಳಲು ನೆರವಾಗಿದ್ದಾರೆ. ಅವರು ಹಾಕಿಕೊಟ್ಟ ಹಾದಿಯಲ್ಲೇ ಇಂದೂ ಸಿದ್ಧಗಂಗಾ ಮಠದಲ್ಲಿ ಹತ್ತು ಸಾವಿರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಡಾ.ಶಿವಕುಮಾರ ಸ್ವಾಮೀಜಿಗಳ ಸೇವಾ ಕಾರ್ಯಕ್ಕೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಇಂತಹ ಮಹನೀಯರ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ಇಡುವುದರಿಂದ ವಿ.ವಿ.ಯ ಘನತೆ, ಗೌರವ ಹೆಚ್ಚುತ್ತದೆ ಹಾಗೂ ಬಡ ಮಕ್ಕಳ ಶಿಕ್ಷಣ ಸೇವೆ ಒದಗಿಸಿದ ಪೂಜ್ಯರ ಸೇವೆಯನ್ನು ಶಾಶ್ವತವಾಗಿ ಸ್ಮರಿಸುವಂತಾಗುತ್ತದೆ ಎಂದು ಸುರೇಶ್‌ಗೌಡರು ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರಿಗೆ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌