ದೇಶದ ಶೇ.15 ರಷ್ಟು ಮತದಾರರ ಹೆಸರು ಡಿಲಿಟ್‌

KannadaprabhaNewsNetwork |  
Published : Nov 06, 2026, 03:15 AM IST
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಡಾ.ಬಿ.ಆರ್‌.ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಡಾ.ಬಿ.ಆರ್‌.ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ, ರಾಷ್ಟ್ರದಲ್ಲಿ ಎಸ್ಐಆರ್‌ ಮುಖಾಂತರ ಕಾಂಗ್ರೆಸ್‌ ಮತಗಳನ್ನು ತೆಗೆದು ಹಾಕಿರುವುದು ಸಾಕ್ಷಿ ಸಮೇತ ಸಿಕ್ಕಿವೆ. ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ ಗಾಂಧಿಯವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. 2024ರ ಲೋಕಸಭಾ ಚುನಾವಣೆಯ ಬಳಿಕ ಭಾರತದ ಶೇ.15 ರಷ್ಟು ಮತದಾರರ ಹೆಸರನ್ನು ಅಳಿಸಿ ಹಾಕಲಾಗಿದೆ. ಅಂದರೆ ಆಗಲೂ ಅಕ್ರಮ, ಕಳವು ನಡೆದಿದೆ ಎಂದರ್ಥ ಎಂದರು.

ಕೆಪಿಸಿಸಿ ಸದಸ್ಯ ಅಬ್ದುಲ್‌ ಹಮೀದ ಮುಶ್ರೀಫ ಮಾತನಾಡಿ, ವಿಜಯಪುರದಲ್ಲಿ ಸುಮಾರು 29000 ಮತಗಳ್ಳತನ ಆಗಿದೆ. ಮತದಾರರು ಇದ್ದರೂ ನಿಧನರಾಗಿದ್ದಾರೆಂದು ಸುಳ್ಳು ದಾಖಲೆ ಸಲ್ಲಿಸಿ ಮತದಾರರ ಯಾದಿಯಲ್ಲಿ ಹೆಸರನ್ನು ತೆಗೆದುಹಾಕಲಾಗಿದೆ. ಸುತ್ತಮುತ್ತಲಿನ ಹಳ್ಳಿಗಳ ಮತದಾರರ ಹೆಸರನ್ನು ವಿಜಯಪುರ ನಗರ ಮತಕ್ಷೇತ್ರದಲ್ಲಿ ಹೆಸರು ನೋಂದಾಯಿಸಿದ್ದಾರೆ. ಕಾಂಗ್ರೆಸ್ ಮತದಾರರ ಹೆಸರನ್ನು ತೆಗೆದುಹಾಕಿದ ಉದಾಹರಣೆಗಳಿವೆ, ಹೀಗೆ ದೇಶದಲ್ಲಿ ಕಾಂಗ್ರೆಸ್ ಮತದಾರರ ಹೆಸರನ್ನು ತೆಗೆದು ಹಾಕಲಾಗಿದೆ ಎಂದು ವಿವರಿಸಿದರು.

ಈ ವೇಳೆ ಮಾರುತಿ ಬಂಡಿ, ಇಂಡಿಯಾ ಒಕ್ಕೂಟದ ಸಿಪಿಐಎಂ ಪಕ್ಷದ ಸುರೇಶ.ಜಿ.ಬಿ, ಬಿ.ಎಸ್.ಪಾಟೀಲ ಯಾಳಗಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಶಕೀಲ ಬಾಗಮಾರೆ, ಶ್ರೀದೇವಿ ಉತ್ಲಾಸಕರ, ಸುರೇಶ ಹಾರಿವಾಳ, ವಿದ್ಯಾವತಿ ಅಂಕಲಗಿ, ಶಬ್ಬೀರ ಜಾಗಿರದಾರ, ಬಿ.ಸಿ.ಸಾವುಕಾರ, ಆರತಿ ಶಾಹಪುರ ಮಾತನಾಡಿದರು.

ಈ ಸಂಧರ್ಭದಲ್ಲಿ ಮುಖಂಡರಾದ ಜಮೀರ ಬಕ್ಷಿ, ಚಾಂದಸಾಬ ಗಡಗಲಾವ, ಸಯ್ಯದ ಆಫ್ತಾಬಕಾದ್ರಿ ಇನಾಮದಾರ, ಎಂ.ಎಂ.ಮುಲ್ಲಾ, ವಸಂತ ಹೊನಮೋಡೆ, ಜಾಕೀರಹುಸೇನ ಮುಲ್ಲಾ, ಕಾಂಗ್ರೆಸ್ ಪದಾಧಿಕಾರಿಗಳು, ಇಂಡಿಯಾ ಒಕ್ಕೂಟದ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದುಗಳು ಜಾಗೃತಿವಾದರೆ ಅದೇ ದೊಡ್ಡ ಶಕ್ತಿ
ರಾಮಮಂದಿರ ಪೇಜಾವರ ಶ್ರೀಗಳ ಕನಸಾಗಿತ್ತು