ಡಾ.ಎಂ.ಎನ್.ರಾಜೇಂದ್ರ ಕುಮಾರ್‌ಗೆ ‘ನಮ್ಮ ಕುಡ್ಲ’ ಗೌರವ

KannadaprabhaNewsNetwork |  
Published : Sep 01, 2026, 03:15 AM IST
ಡಾ.ಎಂ.ಎನ್.ರಾಜೇಂದ್ರ ಕುಮಾರ್‌ಗೆ ‘ನಮ್ಮ ಕುಡ್ಲ’ ಗೌರವ ಸಲ್ಲಿಸಲಾಯಿತು  | Kannada Prabha

ಸಾರಾಂಶ

ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ‘ನಮ್ಮ ಕುಡ್ಲ’ ವಾಹಿನಿಯ ವತಿಯಿಂದ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸನ್ಮಾನಿಸಲಾಯಿತು.

ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ‘ನಮ್ಮ ಕುಡ್ಲ’ ವಾಹಿನಿಯ ವತಿಯಿಂದ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸನ್ಮಾನಿಸಲಾಯಿತು.ಜಿಲ್ಲೆಯ ಪ್ರಥಮ ತುಳು ವಾರ್ತಾ ವಾಹಿನಿಯಾದ ‘ನಮ್ಮ ಕುಡ್ಲ’ ವತಿಯಿಂದ ಇತ್ತೀಚೆಗೆ ‘ನಮ್ಮ ಕುಡ್ಲ ಕಂಬಳ ಪ್ರಶಸ್ತಿ-2026’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಂಬಳದ ಪ್ರೇಮಿ ಹಾಗೂ ಪ್ರೋತ್ಸಾಹಕರಾಗಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಗೌರವಿಸಲಾಯಿತು.

ಕರಾವಳಿ ಕರ್ನಾಟಕದ ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕಂಬಳ ಸೇರಿದಂತೆ ತುಳುನಾಡಿನ ಕಲೆ, ಸಂಸ್ಕೃತಿ ಹಾಗೂ ಜಾನಪದ ಪರಂಪರೆಯ ಪ್ರೋತ್ಸಾಹಕರಾಗಿ ಗುರುತಿಸಿಕೊಂಡಿದ್ದಾರೆ. ಅವರ ಕಂಬಳ ಪ್ರೋತ್ಸಾಹವನ್ನು ಗುರುತಿಸಿ ‘ನಮ್ಮ ಕುಡ್ಲ ಕಂಬಳ ಪ್ರಶಸ್ತಿ–2026’ರ ಪ್ರಯುಕ್ತ ಈ ಸನ್ಮಾನ ನೆರವೇರಿಸಲಾಯಿತು.

‘ನಮ್ಮ ಕುಡ್ಲ’ ವಾಹಿನಿಯ ಮುಖ್ಯಸ್ಥ ಲೀಲಾಕ್ಷ ಕರ್ಕೇರ ಅವರು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಿದರು. ಉದ್ಯಮಿಗಳಾದ ಜಯಪ್ರಕಾಶ್ ತುಂಬೆ, ಪುಷ್ಪರಾಜ್ ಜೈನ್, ‘ನಮ್ಮ ಕುಡ್ಲ’ ವಾಹಿನಿಯ ಮಾರ್ಕೆಟಿಂಗ್ ಮ್ಯಾನೇಜರ್ ಸುದರ್ಶನ್ ಕೋಟ್ಯಾನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಐತಿಹಾಸಿಕ ಮೂಲನಂದೀಶ್ವರ ಜಾತ್ರೆಯ ಪಲ್ಲಕ್ಕಿ ಮಹೋತ್ಸವ
ಅಜೆಕಾರು: ಸಾರಥಿ ಆಂಬುಲೆನ್ಸ್ ಲೋಕಾರ್ಪಣೆ