ಕನ್ನಡಪ್ರಭ ವಾರ್ತೆ ಔರಾದ್
ಅವರು ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಔರಾದ್ (ಬಿ) ಪಟ್ಟಣದಲ್ಲಿ ಅ.10ರಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಮಾತನಾಡಿ, ಶಶೀಲ್ ನಮೋಶಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಕರ ಸಮಸ್ಯೆಗಳು, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಶೈಕ್ಷಣಿಕ ಗುಣಮಟ್ಟ ವೃದ್ಧಿ, ಸೇವಾ ಭದ್ರತೆ, ವೇತನ, ಬಡ್ತಿ, ನಿವೃತ್ತಿ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನಿರಂತರ ಶ್ರಮಿಸುತ್ತಿದ್ದಾರೆ. ಶಿಕ್ಷಕರ ಹಕ್ಕುಗಳು, ಸೇವಾ ಸಮಸ್ಯೆಗಳು ಹಾಗೂ ಸರ್ಕಾರಿ ನೌಕರರ ಬೇಡಿಕೆಗಳ ಕುರಿತು ಯಶಸ್ವಿಯಾಗಿ ಧ್ವನಿ ಎತ್ತುತ್ತಿದ್ದಾರೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರು ಮತ್ತು ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕತ್ವದ ಅಗತ್ಯವಿದೆ. ನಮ್ಮ ಶಿಕ್ಷಕರು ಬಹಳಷ್ಟು ಬುದ್ದಿವಂತ ರಿದ್ದಾರೆ. ನಮ್ಮ ಅಭ್ಯರ್ಥಿ ಎಲ್ಲರಿಗೂ ನೆಚ್ಚಿನ ವ್ಯಕ್ತಿಯಾಗಿದ್ದು, ಎಲ್ಲ ಕಡೆಗಳಲ್ಲಿ ಎನ್‌ಡಿಎ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರ ಅಲೆ ಎದ್ದು ಕಾಣುತ್ತಿದೆ. ಇವರ ಅನುಭವ ಮತ್ತು ಸೇವೆಯೇ ವರದಾನವಾಗಿ ಪರಿಣಮಿಸಲಿದೆ ಎಂದರು.ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ ಮಾತನಾಡಿ, ಚುನಾವಣೆಯಲ್ಲಿ ಪಕ್ಷದ ಸಂಘಟನೆಯೇ ಪ್ರಮುಖ ಶಕ್ತಿಯಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಜವಾಬ್ದಾರಿಯನ್ನು ಅರಿತು, ಒಗ್ಗಟ್ಟಿನಿಂದ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಮತದಾರರನ್ನು ಸಂಪರ್ಕಿಸಿ ಪಕ್ಷದ ಬೆಂಬಲಿತ ಅಭ್ಯರ್ಥಿಯ ಸಾಧನೆಗಳು ಮತ್ತು ಶಿಕ್ಷಕರ ಪರವಾಗಿ ಮಾಡಿರುವ ಕೆಲಸಗಳ ಬಗ್ಗೆ ಪರಿಣಾಮಕಾರಿಯಾಗಿ ತಿಳಿಸಬೇಕು. ಎನ್‌ಡಿಎ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲರೂ ಸಂಘಟಿತವಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಪೀರಪ್ಪ ಔರಾದೆ ಮಾತನಾಡಿದರು. ಸಭೆಯಲ್ಲಿ ಮುಖಂಡರಾದ ಕಿರಣ ಪಾಟೀಲ, ಅರಹಂತ ಸಾವಳೆ, ರಾಜಶೇಖರ ನಾಗಮೂರ್ತಿ, ಚಂದು ಪಾಟೀಲ, ರಾಮಶೆಟ್ಟಿ ಪನ್ನಾಳೆ, ಖಂಡೋಬಾ ಕಂಗಟೆ, ಶಿವಾಜಿರಾವ್ ಪಾಟೀಲ್ ಮುಂಗನಾಳ, ಧನಾಜಿ ರಾಠೋಡ, ಅಶೋಕ ಅಲ್ಮಾಜೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.