ಕನ್ನಡಪ್ರಭ ವಾರ್ತೆ ಪಾಂಡವಪುರ
ಶ್ರೀಕುಕ್ಕೆ ಸುಬ್ರಹ್ಮಣ್ಯ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಆರ್.ಎ.ನಾಗಣ್ಣ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಶುಭ ಹಾರೈಸಿದರು. ಬೆಂಗಳೂರು ವಿಶ್ವ ವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್ ಸದಸ್ಯೆ, ಬ್ಯಾಟರಾಯನಪುರ ಶಾರದಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ಹೊಂಬಾಳೆ ಕಾರ್ಯಕ್ರಮ ಉದ್ಘಾಟಿಸಿದರು. ಮಂಡ್ಯದ ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಬಿ.ಸಿ.ಹೇಮಂತ್ ಕುಮಾರ್ ಅವರು ಮಕ್ಕಳಿಗೆ ಬಹುಮಾನ ವಿತರಣೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮೈಸೂರಿನ ಜಿಲ್ಲಾ ಆಸ್ಪತ್ರೆಯ ರೇಡಿಯೋಲಜಿ ವಿಭಾಗದ ಇಮೇಜಿಂಗ್ ಅಧಿಕಾರಿ ಪುಟ್ಟರಾಜು ಬೆಳತೂರ್, ನಂದಗೋಕುಲ ಸಂಸ್ಥೆಯ ಕಾರ್ಯದರ್ಶಿ ಡಾ.ಆರ್.ಎನ್.ರಶ್ಮಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಎಲ್ಲಾ ಮಕ್ಕಳ ತಮ್ಮ ಅಮೋಘ ನೃತ್ಯ ಪ್ರದರ್ಶನದ ಮೂಲಕ ಎಲ್ಲರ ಮನಸೂರೆಗೊಂಡರು.
ಕನ್ನಡಪ್ರಭ ವಾರ್ತೆ ಮಂಡ್ಯ
ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಎಂ.ವಿನಯ್ ಕುಮಾರ್ ಮಾತನಾಡಿ, ನನ್ನ ಜನ್ಮದಿನದ ಅಂಗವಾಗಿ ಸಮಾಜಮುಖಿ ಕಾರ್ಯಕ್ರಮ ಮಾಡುವ ಉದ್ದೇಶದಿಂದ ಇಂದು ಕಾಳೇಗೌಡ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಿದ್ದು 36ನೇವರ್ಷದ ಜನ್ಮದಿನ ಅಂಗವಾಗಿ 36 ಸಮಾಜಮುಖಿ ಸೇವೆ ಮಾಡಿ ಸಾರ್ಥಕತೆ ಜೀವನ ನಡೆಸುತ್ತೇನೆ ಎಂದರು.