ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲು ನಂದಗೋಪಾಲ್‌ ಬೈಕ್‌ ಯಾನ!

KannadaprabhaNewsNetwork |  
Published : Oct 19, 2025, 01:02 AM IST
ತಮ್ಮ ಬೈಕ್‌ನೊಂದಿಗೆ ರಾಜ್ಯಾದ್ಯಂತ ಸಂಚರಿಸಲು ಸಿದ್ಧರಾದ ನಂದಗೋಪಾಲ್‌. | Kannada Prabha

ಸಾರಾಂಶ

‘ಡ್ರೀಮ್ಸ್ ಆನ್ ವೀಲ್ಸ್’ ಎಂಬ ವಿಶಿಷ್ಟ ಯೋಜನೆಯೊಂದಿಗೆ ಆರಂಭವಾಗಿರುವ ಈ ಪ್ರಯಾಣದ ವೇಳೆ ಅವರು ಕರ್ನಾಟಕದ ವಿವಿಧ ಸರ್ಕಾರಿ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಕೌಶಲ ವೃದ್ಧಿ, ಪರೀಕ್ಷಾ ಸಿದ್ಧತೆ ಮತ್ತು ವೃತ್ತಿ ಬದುಕಿನ ಅವಕಾಶಗಳು ಎಂಬ ವಿಷಯವಾಗಿ ಸಂವಾದ- ಸಂವಹನ ನಡೆಸಲಿದ್ದಾರೆ.

ರಾಜ್ಯದ 31 ಜಿಲ್ಲೆಗಳ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳನ್ನು ತಲುಪುವ ಗುರಿಕನ್ನಡಪ್ರಭ ವಾರ್ತೆ ಮಂಗಳೂರು

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಸಮಸ್ಯೆಗಳನ್ನು ಎದುರಿಸಲು ಸದೃಢರನ್ನಾಗಿಸುವ ಆಶಯದೊಂದಿಗೆ ಮಾಜಿ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ ರಾಜ್ಯಾದ್ಯಂತ ಸಂಚರಿಸುವ ಯಾನ ಆರಂಭಿಸುತ್ತಿದ್ದಾರೆ.

‘ಡ್ರೀಮ್ಸ್ ಆನ್ ವೀಲ್ಸ್’ ಎಂಬ ವಿಶಿಷ್ಟ ಯೋಜನೆಯೊಂದಿಗೆ ಆರಂಭವಾಗಿರುವ ಈ ಪ್ರಯಾಣದ ವೇಳೆ ಅವರು ಕರ್ನಾಟಕದ ವಿವಿಧ ಸರ್ಕಾರಿ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಕೌಶಲ ವೃದ್ಧಿ, ಪರೀಕ್ಷಾ ಸಿದ್ಧತೆ ಮತ್ತು ವೃತ್ತಿ ಬದುಕಿನ ಅವಕಾಶಗಳು ಎಂಬ ವಿಷಯವಾಗಿ ಸಂವಾದ- ಸಂವಹನ ನಡೆಸಲಿದ್ದಾರೆ.

ಆಸಕ್ತಿಯ ವಿಷಯವೆಂದರೆ, ರಾಜ್ಯದ ಮೂಲೆ ಮೂಲೆಗಳಿಗೆ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ, ಆತ್ಮವಿಶ್ವಾಸದ ಕೊರತೆಯೊಂದಿಗೆ ಪಿಯುಸಿ ಹಂತವನ್ನು ಪ್ರವೇಶಿಸುವ ಅವಕಾಶ ವಂಚಿತ ವಿದ್ಯಾರ್ಥಿಗಳಲ್ಲಿ ಹೊಸ ಅಭಿಪ್ರೇರಣೆ ತುಂಬುವಲ್ಲಿ ನೆರವಾಗುವ ಈ ವಿನೂತನ ಯೋಜನೆಯನ್ನು ಸಾಕಾರಗೊಳಿಸುವುದಕ್ಕಾಗಿ ಅವರು ತನ್ನ ಹೋಂಡಾ ಸಿಬಿ 350 ಬೈಕ್‌ನಲ್ಲಿ ಸಂಚರಿಸಲಿದ್ದಾರೆ.

30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಗುರಿ:

ಮುಂದಿನ 3 ತಿಂಗಳ ಅವಧಿಯಲ್ಲಿ ರಾಜ್ಯದ 31 ಜಿಲ್ಲೆಗಳ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ತಲಾ 90 ನಿಮಿಷಗಳ 62 ಸಂವಾದ ಕಾರ್ಯಕ್ರಮವನ್ನು ನಡೆಸುವ ಮೂಲಕ ಸುಮಾರು 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪುವ ಯೋಜನೆಯಿದೆ ಎಂದು ನಂದಗೋಪಾಲ್ ಮಾಹಿತಿ ನೀಡಿದ್ದಾರೆ.

ಈ ಯೋಜನೆಯ ಉದ್ದೇಶವು ಸಂವಾದ ಕಾರ್ಯಕ್ರಮದ ಪರಿಧಿಯ ಆಚೆಗೆ ವಿಸ್ತರಿಸಿಕೊಂಡಿರುವಂಥದ್ದು. ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳ ಪ್ರಸಕ್ತ ಸನ್ನಿವೇಶ, ಶೈಕ್ಷಣಿಕ ಸಂರಚನೆ ಹಾಗೂ ಅಧ್ಯಾಪಕರ ಸಾಮರ್ಥ್ಯಗಳ ವಿಮರ್ಶಾತ್ಮಕ ಅಧ್ಯಯನ ಮತ್ತು ಮೌಲ್ಯಮಾಪನದ ಉದ್ದೇಶವೂ ಇದೆ ಎಂದವರು ತಿಳಿಸಿದರು.16 ವರ್ಷಗಳ ಹಿಂದೆ, ನಂದಗೋಪಾಲ್ ಮತ್ತು ಅವರ ಪತ್ನಿ ಸಚಿತಾ ದಂಪತಿ ತಮ್ಮ ಉದ್ಯೋಗವನ್ನು ತೊರೆದು, ಮಕ್ಕಳ ಸಹಜ ಕಲಿಕೆಯನ್ನು ಉತ್ತೇಜಿಸುವ ‘ಸೆಂಟರ್ ಫಾರ್ ಇಂಟಗ್ರೇಟೆಡ್ ಲರ್ನಿಂಗ್’ ಎಂಬ ಲಾಭರಹಿತ ಸಂಸ್ಥೆಯೊಂದನ್ನು ಮುನ್ನಡೆಸುತ್ತಿದ್ದಾರೆ. ಪ್ರಸಕ್ತ ಶಿಕ್ಷಣ ವ್ಯವಸ್ಥೆಯನ್ನು ಮೌಲಿಕವಾಗಿಸುವ ತರಬೇತಿ ಮಾಡ್ಯೂಲ್‌ಗಳು, ಅಭಿಯಾನಗಳು, ಶೈಕ್ಷಣಿಕ ಕಾರ್ಯಕ್ರಮಗಳು ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಕೆಶಿ ಸಿಎಂ ಆದರೆ ನನಗೆ ಸಚಿವ ಸ್ಥಾನವೇ ಬೇಡ : ರಾಜಣ್ಣ
ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌