21 ಕಿ.ಮೀ. ಓಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟು । ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮನ್ ದೀಪ್ ಸಿಂಗ್ ಜಗಡೆ
ತಾಲೂಕಿನ ನಂದಿಗಿರಿಧಾಮದಲ್ಲಿ ಭಾನುವಾರ ನಡೆದ ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್ ವೇಳೆ ದುರಂತ ಸಂಭವಿಸಿದ್ದು, 21 ಕಿ.ಮೀ. ಓಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುವೊಬ್ಬರು ಓಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತನನ್ನು ಪಂಜಾಬ್ ಮೂಲದ ಅಮನ್ ದೀಪ್ ಸಿಂಗ್ ಜಗಡೆ (31) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಅಮನ್ ದೀಪ್ ಸಿಂಗ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.ಭಾನುವಾರ ನಡೆದ ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ 10 ಕಿಲೋಮೀಟರ್ ಹಾಗೂ 21 ಕಿಲೋಮೀಟರ್ ವಿಭಾಗಗಳಲ್ಲಿ ಈ ಮ್ಯಾರಥಾನ್ ನಡೆದಿದ್ದು, 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ಕರ್ನಾಟಕ ಸರ್ಕಾರ, ಯುವಜನ ಕ್ರೀಡಾ ಮತ್ತು ಸೇವಾ ಇಲಾಖೆ ಹಾಗೂ ಜಿಲ್ಲಾಡಳಿತ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಪೈಕಿ ಅಮನ್ ದೀಪ್ ಸಿಂಗ್ ಅವರು 21 ಕಿ.ಮೀ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದರು. ನಂದಿ ಬೆಟ್ಟದ ಅರ್ಧ ಭಾಗದಷ್ಟು ಓಟವನ್ನು ಪೂರ್ಣಗೊಳಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ.
ಸಿಕೆಬಿ-1 ಮೃತ ಅಮನ್ ದೀಪ್ ಸಿಂಗ್ ಜಗಡೆ