ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿರುವ ಸಚಿವರ ಗೃಹ ಕಚೇರಿಯಲ್ಲಿ ಕಾರ್ಖಾನೆ ಹಿತರಕ್ಷಣೆ ಕುರಿತು ರೈತರೊಂದಿಗೆ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆ ಉಳಿವಿಗೆ ಎನ್‌ಸಿಡಿಸಿ ಯೋಜನೆಯಡಿ ಸಾಲ ಒದಗಿಸುವಂತೆ ನಾನು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಆದ್ಯತೆಯ ಆಧಾರದ ಮೇಲೆ ಕಾರ್ಖಾನೆಯ ಮನವಿಯನ್ನು ಪರಿಗಣಿಸಿ ನೆರವು ನೀಡುವಂತೆ ಕೋರಿದ್ದೇನೆ. ಇನ್ನು ಮುಂದೆ ಸಚಿವರಾದ ಎಚ್.ಕೆ.ಪಾಟೀಲ, ಶಿವಾನಂದ ಪಾಟೀಲ, ಶಾಸಕ ಜೆ.ಟಿ.ಪಾಟೀಲ ಮತ್ತು ನಾನಾ ಮುಖಂಡರೊಂದಿಗೆ ಸಿಎಂ ಭೇಟಿ ಮಾಡಿ ನೆರವು ನೀಡುವಂತೆ ವಿನಂತಿ ಮಾಡುವುದಾಗಿ ತಿಳಿಸಿದರು.
ಇಂದು ಕೂಡ ನಾನು ಸಿಎಂ ಕಚೇರಿಗೆ ಕರೆ ಮಾಡಿ ಭೇಟಿಗೆ ದಿನಾಂಕ ನಿಗದಿಪಡಿಸಲು ಕೇಳಿದ್ದೇನೆ. ಒಂದು ವಾರದಲ್ಲಿ ದಿನಾಂಕ ನಿಗದಿಯಾಗಲಿದ್ದು, ಈ ಸಭೆಗೆ ಸಂಬಂಧಿಸಿದ ಎಲ್ಲ ಮುಖಂಡರು ಬರಬೇಕು. ವಿಜಯಪುರ ಮತ್ತು ಕಾರ್ಖಾನೆಗೆ ಸಂಬಂಧಿಸಿದ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿದಿಗಳನ್ನೂ ಸಭೆಗೆ ಆಹ್ವಾನಿಸಲಾಗುವುದು ಎಂದು ಸಚಿವರು ಹೇಳಿದರು.ಒಂದು ಕಾಲದಲ್ಲಿ ದೇಶದಲ್ಲಿಯೇ ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿ ಮೊದಲ ಸ್ಥಾನದಲ್ಲಿದ್ದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅನೇಕ ಪ್ರಶಸ್ತಿ ಮತ್ತು ಪ್ರಶಂಸೆಗಳನ್ನು ಪಡೆದಿತ್ತು. ಆದರೆ, ವಿಸ್ತರಣೆ ಯೋಜನೆ ಕೈಗೊಂಡ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿದೆ. ನಾನು ಈ ಹಿಂದೆ ನೀಡಿದ ಭರವಸೆಯಂತೆ ಷೇರುಗಳನ್ನು ಪಡೆಯುತ್ತೇನೆ. ಅಲ್ಲದೇ, ಕಾರ್ಖಾನೆಯನ್ನು ಗತವೈಭವಕ್ಕೆ ತರಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.
------
ಒಂದು ಕಾಲದಲ್ಲಿ ದೇಶದಲ್ಲಿಯೇ ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿ ಮೊದಲ ಸ್ಥಾನದಲ್ಲಿದ್ದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅನೇಕ ಪ್ರಶಸ್ತಿ ಮತ್ತು ಪ್ರಶಂಸೆಗಳನ್ನು ಪಡೆದಿತ್ತು. ಆದರೆ, ವಿಸ್ತರಣೆ ಯೋಜನೆಯನ್ನು ಕೈಗೊಂಡ ಹಿನ್ನೆಲೆಯಲ್ಲಿ ಇದೀಗ ಸಂಕಷ್ಟದಲ್ಲಿದೆ. ನಾನು ಈ ಹಿಂದೆ ನೀಡಿದ ಭರವಸೆಯಂತೆ ಷೇರುಗಳನ್ನು ಪಡೆದು ಕಾರ್ಖಾನೆಯನ್ನು ಮತ್ತೆ ಗತವೈಭವಕ್ಕೆ ತರಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ.