ಕನ್ನಡಪ್ರಭ ವಾರ್ತೆ ಕಿಕ್ಕೇರಿ
12 ನಿರ್ದೇಶಕರ ಬಲದ ಸಂಘದ ಮುಂದಿನ 5 ವರ್ಷದ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೋಟಹಳ್ಳಿ ನಂಜೇಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಗೂಡೆಹೊಸಹಳ್ಳಿ ಲೋಕೇಶ್ ಹೊರತುಪಡಿಸಿ ಉಳಿದ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಸಿಡಿಓ ಭರತ್‌ಕುಮಾರ್ ಕಾರ್ಯನಿರ್ವಹಿಸಿದರು.ನೂತನ ಅಧ್ಯಕ್ಷ ಕೆ.ನಂಜೇಗೌಡ ಮಾತನಾಡಿ, ಶಾಸಕ ಎಚ್.ಟಿ.ಮಂಜು, ರಾಜ್ಯ ಮಾರಾಟ ಮಹಾ ಮಂಡಳಿ ನಿರ್ದೇಶಕ ಚೋಳೇನಹಳ್ಳಿ ಪುಟ್ಟಸ್ವಾಮಿಗೌಡ ಹಾಗೂ ಬಿ.ಎಂ.ಕಿರಣ್ ಮಾರ್ಗದರ್ಶನದಂತೆ ಸಂಘದ ಸರ್ವ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಸಂಘದ ಅಭಿವೃದ್ಧಿ, ರೈತರ ಸಮಸ್ಯೆಗೆ ಸ್ಪಂದಿಸಿ ಉತ್ತಮ ಸೊಸೈಟಿಯಾಗಿ ಮಾಡಲು ಶ್ರಮಿಸುವುದಾಗಿ ತಿಳಿಸಿದರು.
ಶಾಸಕರಿಂದ ಜನರ ದಾರಿ ತಪ್ಪಿಸುವ ಕೆಲಸ: ರಮೇಶ್
ಕೆ.ಆರ್.ಪೇಟೆ:ರಾಜ್ಯ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎಂದು ಹೇಳುವ ಮೂಲಕ ಶಾಸಕ ಎಚ್.ಟಿ.ಮಂಜು ತಾಲೂಕಿನ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಾಲೂಕು ಕಾಂಗ್ರೆಸ್ ಉಸ್ತುವಾರಿ ಚಿನಕುರಳಿ ರಮೇಶ್ ದೂರಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸರ್ಕಾರ ಪಕ್ಷಾತೀತವಾಗಿ ಕೆಲಸ ಮಾಡುತ್ತಿದೆ. ರಾಜ್ಯ ಎಲ್ಲಾ ಶಾಸಕರಿಗೂ ಸಮಾನವಾಗಿ ಅನುದಾನದ ಹಂಚಿಕೆ ಮಾಡಿದೆ. ಸರ್ಕಾರ ಅನುದಾನ ನೀಡದೆ ಇವರು ಗುದ್ದಲಿ ಪೂಜೆ ಮಾಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.ಸರ್ಕಾರದ ವಿರುದ್ಧ ಅನಗತ್ಯ ಟೀಕೆ ಮಾಡುವ ಬದಲು ತಮ್ಮ ಸ್ವ-ಪ್ರಯತ್ನದ ಮೂಲಕ ಸರ್ಕಾರದೊಂದಿಗೆ ಸೌಹಾರ್ದ ಸಂಬಂಧ ಬೆಳೆಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ತರುವ ಪ್ರಯತ್ನ ಮಾಡಲಿ ಎಂದು ಆಗ್ರಹಿಸಿದ್ದಾರೆ.