ನಾಪೋಕ್ಲು: 4ರಂದು ಬಿಲ್ಲವ ಸಮಾಜದಿಂದ ಆಟಿಡೊಂಜಿ ದಿನ ಆಚರಣೆ

KannadaprabhaNewsNetwork |  
Published : Aug 02, 2024, 12:47 AM IST
ಪತ್ರಿಕಾಗೋಷ್ಠಿಯಲ್ಲಿ ನಾಪೋಕ್ಲು ಬಿಲ್ಲವ ಸಮಾಜದ ಪ್ರಮುಖರು ಹಾಜರಿದ್ದರು. | Kannada Prabha

ಸಾರಾಂಶ

ನಾಪೋಕ್ಲು ಬಿಲ್ಲವ ಸಮಾಜದ ವತಿಯಿಂದ 4ರಂದು ಆಟಿಡೊಂಜಿ ದಿನ -2024, ಕಾರ್ಯಕ್ರಮ ಇಲ್ಲಿನ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ. ಪ್ರತೀಪ ಹೇಳಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬಿಲ್ಲವ ಸಮಾಜದ ಸಂಘದ ಉದ್ಘಾಟನೆ ನಡೆಯಲಿದೆ ಎಂದರು.

ಕನ್ನಡಪ್ರಭ ವಾರ್ತೆ ನಾಪೋಕ್ಲುನಾಪೋಕ್ಲು ಬಿಲ್ಲವ ಸಮಾಜದ ವತಿಯಿಂದ 4ರಂದು ಆಟಿಡೊಂಜಿ ದಿನ -2024, ಕಾರ್ಯಕ್ರಮ ಇಲ್ಲಿನ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ. ಪ್ರತೀಪ ಹೇಳಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬಿಲ್ಲವ ಸಮಾಜದ ಸಂಘದ ಉದ್ಘಾಟನೆ ನಡೆಯಲಿದೆ.ಆ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದೆ. ಬಳಿಕ ಬಿಲ್ಲವ ಸಮಾಜದ ಮಹಾಸಭೆ ನಡೆಯಲಿದೆ ಎಂದರು.

ನಾಪೋಕ್ಲು ಹೋಬಳಿ ಮಟ್ಟದಲ್ಲಿ ಸಮಾಜ ಬಾಂಧವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಆಟಿಡೊಂಜಿ ದಿನ-2024 ಕಾರ್ಯಕ್ರಮ ಆಯೋಜಿಸಲಾಗಿದ್ದು 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಆಟಿ ಮಾಸದಲ್ಲಿ ತಯಾರಿಸುವ ವಿಶೇಷ ಖಾದ್ಯಗಳ ತಿನಿಸುಗಳ ಪ್ರದರ್ಶನ ಹಾಗೂ ಊಟೋಪಚಾರ ಹಮ್ಮಿಕೊಳ್ಳಲಾಗಿದೆ. ಕನಿಷ್ಠ 50 ಯೂನಿಟ್ ರಕ್ತ ಸಂಗ್ರಹಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.

ಮಧ್ಯಾಹ್ನ ಬಿಲ್ಲವ ಸಮಾಜದ ವಾರ್ಷಿಕ ಮಹಾಸಭೆ ನಡೆಯಲಿದ್ದು ಸಮಾಜ ಬಾಂಧವರಿಗಾಗಿ ಮನೋರಂಜನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಸಭಾ ಕಾರ್ಯಕ್ರಮ ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ ಪ್ರತೀಪ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್. ಪೊನ್ನಣ್ಣ , ರಕ್ತ ನಿಧಿ ಅಧಿಕಾರಿ ಡಾ. ಕರಂಬಯ್ಯ ,ಮಡಿಕೇರಿ ಬಿಲ್ಲವ ಸಮಾಜದ ಅಧ್ಯಕ್ಷೆ ಲೀಲಾವತಿ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ, ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ , ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಇ., ನೋಟರಿ ವಕೀಲ ದಯಾ ಹೊನ್ನಪ್ಪ , ಮೂರ್ನಾಡು ಉದ್ಯಮಿ ಸುರೇಶ್ ಮುತ್ತಪ್ಪ, ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಅನಿಲ್ , ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಪೂವಪ್ಪ, 50ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ರಾಮಪ್ಪ ಪೊಲೀಸ್, ಸಿವಿಲ್ ಕಂಟ್ರಾಕ್ಟರ್ ಗೋಪಾಲ ಮೂರ್ನಾಡು, ನಿವೃತ್ತ ಪೊಲೀಸ್ ಅಧಿಕಾರಿ ಲಿಂಗಪ್ಪ ಮೂರ್ನಾಡು ಪಾಲ್ಗೊಳ್ಳಲಿರುವರು ಎಂದರು.ಬಿಲ್ಲವ ಸಮಾಜದ ಕಾರ್ಯದರ್ಶಿ ರೋಹಿತ್, ಸಂಘಟನಾ ಕಾರ್ಯದರ್ಶಿ ಬಿ.ಎಸ್ ನಾಗರಾಜ್ , ಖಜಾಂಚಿ ಬಿ.ಡಿ ದೀಪಕ್. ಸದಸ್ಯರಾದ ಪುನೀತ್, ಸದಸ್ಯ ಬಿ.ಎಸ್ ದಿಲೀಪ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌
ಖಮೇನಿ ಆತ್ಮಕ್ಕೆ ಶಾಂತಿ ದೊರೆಯಲಿ, ಅಮೆರಿಕ ದಾಳಿ ಖಂಡನಾರ್ಹ: ಸಿಎಂ