ಸರ್ಕಾರಿ ಯೋಜನೆ ಅರ್ಹರಿಗೆ ತಲುಪಿಸಿ: ಪೊನ್ನಣ್ಣ ಕರೆ

KannadaprabhaNewsNetwork |  
Published : Nov 23, 2026, 02:45 AM IST
ನಾಪೋಕ್ಲು ಬ್ಲಾಕ್ ಹಾಗೂ ವಿರಾಜಪೇಟೆ ವಲಯ ಮತ್ತು ಬೂತ್ ಅಧ್ಯಕ್ಷರ ಸಭೆ ವಿರಾಜಪೇಟೆಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಜರುಗಿತು.20- ಎನ್ ಪಿ ಕೆ-4.ನಾಪೋಕ್ಲು ಬ್ಲಾಕ್ ಹಾಗೂ ವಿರಾಜಪೇಟೆ ವಲಯ ಮತ್ತು ಬೂತ್ ಅಧ್ಯಕ್ಷರ ಸಭೆ ಸಭೆಯಲ್ಲಿ ಉಪಸ್ಥಿತರಿದ್ದಪದಾಧಿಕಾರಿಗಳು ಹಾಗೂ ಸದಸ್ಯರು ,ಕಾರ್ಯಕರ್ತರು . | Kannada Prabha

ಸಾರಾಂಶ

ವಿರಾಜಪೇಟೆ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಹಾಗೂ ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ವಲಯ ಮತ್ತು ಬೂತ್ ಅಧ್ಯಕ್ಷರ ಸಭೆ

ನಾಪೋಕ್ಲು: ಸರ್ಕಾರದಿಂದ ಬಿಡುಗಡೆಯಾಗುವ ಅನುದಾನಗಳು ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳುವುದರ ಜೊತೆಗೆ, ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ತಿಳಿಸಿದರು.

ವಿರಾಜಪೇಟೆ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಹಾಗೂ ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ವಲಯ ಮತ್ತು ಬೂತ್ ಅಧ್ಯಕ್ಷರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನಗೊಳ್ಳುವಲ್ಲಿ ಪಕ್ಷದ ಮುಖಂಡರು ಮುತುವರ್ಜಿ ವಹಿಸಬೇಕು. ಪಕ್ಷದಲ್ಲಿ ಜವಾಬ್ದಾರಿಯುತ ಹುದ್ದೆಗಳನ್ನು ಹೊಂದಿರುವ ಪ್ರತಿಯೊಬ್ಬರೂ ತಮ್ಮ ಹೊಣೆಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಸರ್ಕಾರದ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಶ್ರಮಿಸಬೇಕು. ಜನಸಾಮಾನ್ಯರಿಗೆ ಅನುಕೂಲವಾಗುವ ಆಡಳಿತದ ಅನುಷ್ಠಾನದಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಶಾಸಕರು ಕರೆ ನೀಡಿದರು.

ಕಾವೇರಿ ಜಲಾನಯನ ಪ್ರದೇಶ ಅಭಿವೃದ್ಧಿ ಮಂಡಳಿ ನಿರ್ದೇಶಕ ಸೂರಜ್ ಹೊಸೂರು, ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಅರವಿಂದ್ ಕುಟ್ಟಪ್ಪ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಕೆ ಎ ಇಸ್ಮಾಯಿಲ್ ನಾಪೋಕ್ಲು , ಮಡಿಕೇರಿ ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ನಾಪೋಕ್ಲು , ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಆಲಿ, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೆಟೀರ ಬೋಪಣ್ಣ, ವಿರಾಜಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನ ಶೈಲಿ ಬದಲಾವಣೆಯಿಂದ ಮಧುಮೇಹ
ನಿಗಧಿತ ಅವಧಿಯಲ್ಲಿ ಜನರ ಕೆಲಸಗಳನ್ನು ಮಾಡಿಕೊಡಿ