ನಾಪೋಕ್ಲು: ಉಚಿತ ರೈನ್ ಕೋಟು ವಿತರಣೆ

KannadaprabhaNewsNetwork |  
Published : Jul 30, 2026, 02:45 AM IST
ಮಡಿಕೇರಿ ರೊಟರಿ ಸಂಸ್ಥೆಯ ವತಿಯಿಂದ ಭಾಗಮಂಡಲ ಪೊಲೀಸ್ ಠಾಣೆಗೆ22 ರೈನ್ ಕೋಟುಗಳನ್ನು ಉಚಿತವಾಗಿ ನೀಡಲಾಯಿತು. | Kannada Prabha

ಸಾರಾಂಶ

ಮಡಿಕೇರಿ ರೋಟರಿ ಸಂಸ್ಥೆಯ ವತಿಯಿಂದ ಭಾಗಮಂಡಲ ಪೊಲೀಸ್ ಠಾಣೆಗೆ 22 ರೈನ್ ಕೋಟುಗಳನ್ನು ಉಚಿತವಾಗಿ ನೀಡಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಮಡಿಕೇರಿ ರೋಟರಿ ಸಂಸ್ಥೆಯ ವತಿಯಿಂದ ಭಾಗಮಂಡಲ ಪೊಲೀಸ್ ಠಾಣೆಗೆ 22 ರೈನ್ ಕೋಟುಗಳನ್ನು ಉಚಿತವಾಗಿ ನೀಡಲಾಯಿತು.

ರೋಟರಿ ವುಡ್ಸ್ ವತಿಯಿಂದ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪ್ರಭಾರ ಸಬ್ ಇನ್ಸ್ಪೆಕ್ಟರ್ ದಿನೇಶ್ ರೈ ರೈನ್ ಕೋಟು ಗಳನ್ನು ಸ್ವೀಕರಿಸಿದರು. ನಂತರ ಮಾತನಾಡಿದ ಅವರು ಜನಪರ ಕಾರ್ಯಗಳು ಶ್ಲಾಘನೀಯ. ಇಂತಹ ಸೇವೆ ಸಮಾಜದ ಎಲ್ಲ ವರ್ಗಗಳಿಗೂ ತಲುಪಲಿ ಎಂದರು.

ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಮಾತನಾಡಿ ಈ ಸಾಲಿನಲ್ಲಿ ರೋಟರಿ ವುಡ್ಸ್ ಹಲವು ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದರು.

ರೋಟರಿ ವುಡ್ಸ್ ಅಧ್ಯಕ್ಷೆ ಪ್ರಮೀಳಾ ಶೆಟ್ಟಿ, ವಲಯ ಸೇನಾನಿ ವಸಂತ್ ಕುಮಾರ್, ಕ್ಲಬ್ ಕಾರ್ಯದರ್ಶಿ ಸ್ಮಿತಾ ಚೆಂಗಪ್ಪ, ದಿವಾಕರ್, ಲೀಲಾವತಿ, ರವಿಕುಮಾರ್ , ಮನೋಹರ್ ಸುವರ್ಣ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಸಿಹಿತ್ಲು ಭಜನಾ ಮಂದಿರ ಸಮೀಪ ಕಡಲ್ಕೊರೆತ ಆರ್ಭಟ ತೀವ್ರ
ಪಕ್ಷ ಬಲಪಡಿಸಲು ‘ಸಂಘಟನ್ ಸೃಜನ್’ ಅಭಿಯಾನ: ಜಯಂತ್