ತಲಕಾವೇರಿ: ಕಾವೇರಿ ತೀರ್ಥೋದ್ಭವಕ್ಕೆ ಭರದ ಸಿದ್ಧತೆ

KannadaprabhaNewsNetwork |  
Published : Oct 15, 2026, 02:45 AM IST
13.ಎನ್ ಪಿ ಕೆ-4. ಭಾಗಮಂಡಲದ ತ್ರಿವೇಣಿಸಂಗಮ ದಲ್ಲಿರುವ ಮರಳುಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿವಿಸ್ತರಿಸುತ್ತಿರುವುದು.13.ಎನ್ ಪಿ ಕೆ-5ತಲಕಾವೇರಿಯಲ್ಲಿ ಪೂರ್ವ ತಯಾರಿ ಕಾಮಗಾರಿಗಳು ಪ್ರಗತಿಯಲ್ಲಿ.13.ಎನ್ ಪಿ ಕೆ-6.ತಲಕಾವೇರಿ , ಭಾಗಮಂಡಲಕ್ಕೆ  ಭೇಟಿ ನೀಡಿ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಅಪಾರ ಜಿಲ್ಲಾಧಿಕಾರಿನಿರಂಜನ್ ಎಂ ಎನ್ ಅವರು ದೇವರಿಗೆ ಪೂಜೆ ಸಲ್ಲಿಸಿದರು. | Kannada Prabha

ಸಾರಾಂಶ

ಪವಿತ್ರ ಕಾವೇರಿ ತೀರ್ಥೋದ್ಭವದ ಧಾರ್ಮಿಕ ಆಚರಣೆಯು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ತಲಕಾವೇರಿಯ ಕಾವೇರಿ ಉಗಮ ಸ್ಥಾನ ಹಾಗೂ ಭಾಗಮಂಡಲದ ಶ್ರೀ ಭಗಂಡೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಕ್ತಾದಿಗಳಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಬರುವ ಅ. 17 ರಂದು ರಾತ್ರಿ 7.50 ಗಂಟೆಗೆ ಕಾವೇರಿ ತೀರ್ಥೋದ್ಭವ ಜರುಗಲಿದೆ.

ನಾಪೋಕ್ಲು: ಪವಿತ್ರ ಕಾವೇರಿ ತೀರ್ಥೋದ್ಭವದ ಧಾರ್ಮಿಕ ಆಚರಣೆಯು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ತಲಕಾವೇರಿಯ ಕಾವೇರಿ ಉಗಮ ಸ್ಥಾನ ಹಾಗೂ ಭಾಗಮಂಡಲದ ಶ್ರೀ ಭಗಂಡೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಕ್ತಾದಿಗಳಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಬರುವ ಅ. 17 ರಂದು ರಾತ್ರಿ 7.50 ಗಂಟೆಗೆ ಕಾವೇರಿ ತೀರ್ಥೋದ್ಭವ ಜರುಗಲಿದೆ.

ಶಾಸಕ ಎ.ಎಸ್. ಪೊನ್ನಣ್ಣ ನಿರ್ದೇಶನ ಮತ್ತು ಸೂಚನೆ ಮೇರೆಗೆ ಎಲ್ಲ ಕಾಮಗಾರಿಗಳು ಪ್ರಗತಿಯಲ್ಲಿವೆ. ಭಾಗಮಂಡಲದ ತ್ರಿವೇಣಿ ಸಂಗಮ ದಲ್ಲಿರುವ ಮರಳುಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿ ವಿಸ್ತಾರಗೊಳಿಸಲಾಗುತ್ತಿದೆ. ಮತ್ತು ತಲಕಾವೇರಿಯಲ್ಲಿ ತೀರ್ಥೋದ್ಭವದ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳ ಸುಗಮ ಓಡಾಟಕ್ಕೆ ಅನುಕೂಲವಾಗುವಂತೆ ವಿಶೇಷ ಪಾದಚಾರಿ ಮಾರ್ಗಗಳನ್ನು ಸಿದ್ಧಪಡಿಸಲಾಗುತ್ತಿದೆ. ದೇವಸ್ಥಾನದ ಒಳಾಂಗಣದ ನೆಲಹಾಸು ಹಾಗೂ ನೂತನ ಹೊಡಿಕೆಗಳನ್ನು ಅಳವಡಿಸುವ ಮೂಲಕ ದೇವಸ್ಥಾನದ ಒಟ್ಟಾರೆ ಸೌಂದರ್ಯವನ್ನು ಹೆಚ್ಚಿಸುವ ಕೆಲಸಗಳು ಭರದಿಂದ ನಡೆಯುತ್ತಿವೆ.

ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲಿಸಿದ ಅಪಾರ ಜಿಲ್ಲಾಧಿಕಾರಿ ನಿರಂಜನ್ ಎಂ.ಎನ್. ಅವರು ದೇವಾಲಯದ ಕಾರ್ಯನಿರ್ವಹಣಾ ಅಧಿಕಾರಿ ಚಂದ್ರಶೇಖರ್ ಹಾಗೂ ಪಾರು ಪತ್ತೆದಾರ ಕೆ.ಪಿ ಪೊನ್ನಣ್ಣ ಅವರಿಗೆ ಸೂಕ್ತ ನಿರ್ದೇಶನ ಮತ್ತು ಸೂಚನೆ ನೀಡಿದರು.-----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನರೂರು ಕ್ಷೇತ್ರ ಬ್ರಹ್ಮಕಲಶ ಲಾಂಛನ ಬಿಡುಗಡೆ
ಕುಂಟಿಕಾನಮಠ ದೇವಸ್ಥಾನದಲ್ಲಿ ನವರಾತ್ರಿ ಆಚರಣೆ