ನಾಪೋಕ್ಲು ಕೊಡವ ಸಮಾಜ ಸಮಾಜಮುಖಿ ಕಾರ್ಯ: ಮುಂಡಂಡ ನಾಣಯ್ಯ

KannadaprabhaNewsNetwork |  
Published : Apr 09, 2026, 03:00 AM IST
6-ಎನ್ ಪಿ ಕೆ-3.ನಾಪೋಕ್ಲು ಕೊಡವ ಸಮಾಜ ಮತ್ತು ಗೋಣಿಕೊಪ್ಪದ ಲೋಪಾಮುದ್ರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ  ಸೋಮವಾರ ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದಕಣ್ಣಿನ ಉಚಿತ ತಪಾಸಣಾ ಶಿಬಿರ ಉದ್ಘಾಟನೆ ಯನ್ನು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ .ಸಿ ನಾಣಯ್ಯ ಕಣ್ಣಿನ ತಪಾಸನೆ ಮಾಡಿಸಿಕೊಳ್ಳುವುದರ ಮೂಲಕ ಚಾಲನೆನೀಡಿದರು .6-ಎನ್ ಪಿ ಕೆ-4.ನಾಪೋಕ್ಲು ಕೊಡವ ಸಮಾಜ ಮತ್ತು ಗೋಣಿಕೊಪ್ಪದ ಲೋಪಾಮುದ್ರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ  ಸೋಮವಾರ ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದಕಣ್ಣಿನ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ .ಸಿ ನಾಣಯ್ಯಮಾತನಾಡಿದರು. | Kannada Prabha

ಸಾರಾಂಶ

ಗ್ರಾಮೀಣ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಕಣ್ಣಿನ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಎಲ್ಲರೂ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಇಲ್ಲಿನ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ ಹೇಳಿದರು.

ಕನ್ನಡಪ್ರಭವಾರ್ತೆ ನಾಪೋಕ್ಲು

ಗ್ರಾಮೀಣ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಕಣ್ಣಿನ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಎಲ್ಲರೂ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಇಲ್ಲಿನ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ ಹೇಳಿದರು.

ನಾಪೋಕ್ಲು ಕೊಡವ ಸಮಾಜ ಮತ್ತು ಗೋಣಿಕೊಪ್ಪದ ಲೋಪಾಮುದ್ರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಸೋಮವಾರ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜ ಹತ್ತುಹಲವು ಕಾರ್ಯ ಚಟುವಟಿಕೆಗಳನ್ನುಹಮ್ಮಿಕೊಳ್ಳುತ್ತಿದ್ದು ಸಾಮಾಜಿಕ ಕಳಕಳಿಯನ್ನು ಇರಿಸಿ ಸಮಾಜದ ಜನರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ನಾಲ್ಕು ನಾಡು ವ್ಯಾಪ್ತಿಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಲೋಪಾಮುದ್ರೆ ಆಸ್ಪತ್ರೆಯ ಹರ್ಷಿತ್ ಕರುಂಬಯ್ಯ ಮಾತನಾಡಿ ಮನುಷ್ಯನಿಗೆ ಆರೋಗ್ಯ ಮುಖ್ಯ. ಕಣ್ಣಿನ ಬಗ್ಗೆ ಎಚ್ಚರ ವಹಿಸಬೇಕು ಸಮಸ್ಯೆ ಉಲ್ಪಣಿಸಿದ ನಂತರ ಪರಿಹಾರ ಕಂಡುಕೊಳ್ಳುವುದು ಕಷ್ಟ ಸಮಸ್ಯೆಯನ್ನು ಆರಂಭದ ಹಂತದಲ್ಲಿ ಗುರುತಿಸಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದರು. ಆಸ್ಪತ್ರೆಯಲ್ಲಿ ಇರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಲ್ಲರೂ ಇದರವನು ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು

ಬಳಿಕ ಕಣ್ಣಿನ ತಪಾಸಣೆ ಆಯೋಜಿಸಲಾಗಿದ್ದು ಸಾರ್ವಜನಿಕರ ಇದರ ಸದುಪಯೋಗವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ಪದಾಧಿಕಾರಿಗಳಾದ ಕಾರ್ಯದರ್ಶಿ ಕುಲ್ಲೆಟಿರ ಅಜಿತ್ ಅಜಿತ್ ನಾಣಯ್ಯ, ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳಿಯಡ ನಿಶಾ ಮೇದಪ್ಪ, ಕೊಡವ ಸಮಾಜದ ನಿರ್ದೇಶಕ, ಚೌರಿರ ಉದಯ, ಲೋಪಾಮುದ್ರೆ ಆಸ್ಪತ್ರೆಯ ಸಿಬ್ಬಂದಿ ವರ್ಗ, ಕೊಡವ ಸಮಾಜದ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೂ. 23 ರಂದು ಕುಶಾಲನಗರದಲ್ಲಿ ಜಿಲ್ಲಾ ಪ್ರಥಮ ಸಾಹಿತ್ಯ ಸಮ್ಮೇಳನ
ಮಾದಕ ವಸ್ತು ವ್ಯಸನ ನಿರ್ಮೂಲನೆಗೆ ಪ್ರತಿಯೊಬ್ಬರು ಪಣ: ಡಾ.ಮಂತರ್‌