ನಾಪೋಕ್ಲು: ವಿವಿಧ ಕಾಮಗಾರಿಗಳಿಗೆ ಸಾಂಕೇತಿಕ ಚಾಲನೆ

KannadaprabhaNewsNetwork | Published : Mar 13, 2024 2:01 AM

ಸಾರಾಂಶ

ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರು. 1.75 ಕೋಟಿ ಅನುದಾನದ ಹಲವು ಕಾಮಗಾರಿಗಳಿಗೆ ಮಂಗಳವಾರ ಸಾಂಕೇತಿಕವಾಗಿ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತವು ದೇವಾಲಯದ ಆವರಣದಲ್ಲಿ ವಿರಾಜಪೇಟೆ ಶಾಸಕ ಎ.ಎಸ್‌.ಪೊನ್ನಣ್ಣ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.

ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರು. 1.75 ಕೋಟಿ ಅನುದಾನದ ಹಲವು ಕಾಮಗಾರಿಗಳಿಗೆ ಮಂಗಳವಾರ ಸಾಂಕೇತಿಕವಾಗಿ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತವು ದೇವಾಲಯದ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಸದ್ಯದಲ್ಲಿಯೇ ಲೋಕಸಭಾ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇರುವುದರಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಆ ಬಳಿಕ ಕಾಮಗಾರಿಗಳಿಗೆ ಚಾಲನೆ ನೀಡಲು ಸಾಧ್ಯವಾಗುವುದಿಲ್ಲ. ಜೊತೆಯಲ್ಲಿ ಮಳೆಗಾಲ ಆರಂಭಗೊಂಡರೆ ಕಾಮಗಾರಿಗಳು ಸ್ಥಗಿತಗೊಳ್ಳಲಿವೆ. ಶೀಘ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು. ಗ್ರಾಮ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರಬೇಕು ಹಾಗೂ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು. ಇದಕ್ಕೆ ಸಾರ್ವಜನಿಕರ ಸಂಪೂರ್ಣ ಸಹಕಾರ ಅಗತ್ಯ. ಸಾರ್ವಜನಿಕರ ಸಹಕಾರದಿಂದ ಅಭಿವೃದ್ದಿ ಸಾಧ್ಯ ಎಂದರು.

ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರ್. ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್, ವಲಯಾದಕ್ಷ , ಪಂಚಾಯತಿ ಸದಸ್ಯರಾದ ಮಾಚೆಟ್ಟಿರ ಕುಶು ಕುಶಾಲಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಸಾಬಾ, ಕಟ್ಟಿ, ಲಲಿತ, ಮಹಮ್ಮದ್, ಗ್ರಾಮದ ಪ್ರಮುಖರಾದ ಬಿದ್ದಾಟಂಡ ತಮ್ಮಯ್ಯ , ರಾಜ್ಯ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಹಾರೀಸ್ ಕೊಳಕೇರಿ, ಜಿಲ್ಲಾ ಕೆಪಿಸಿಸಿ ಉಪಾಧ್ಯಕ್ಷ ಎಂ.ಎಚ್ ಅಬ್ದುಲ್ ರಹಿಮಾನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ನಾಪೊಕ್ಲು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿರಾಜ್, ಬಾಚಮಂಡ ಲವ ಚಿಣ್ಣಪ್ಪ, ಕಲಿಯಂಡ ಸಂಪತ್, ಕೊಂಡಿರ ಸುರೇಶ್, ಕೊಂಡಿರ ರಾಜಪ್ಪ, ಕೊಂಡಿರ ನಂದ, ಚೋಕಿರ ಪ್ರವೀಣ್, ಕುಟ್ಟಂಚೆಟ್ಟೀರ ಸುರೇಶ್, ಅಪ್ಪಚೆಟ್ಟೋಳಂಡ ನವೀನ್, ಶಿವಾಜಿ ಯೂತ್ ಕ್ಲಬ್ ಅಧ್ಯಕ್ಷ ದೀಪು ದೇವಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Share this article