ಕನ್ನಡಪ್ರಭ ವಾರ್ತೆ ಬೇಲೂರು
ಪಟ್ಟಣದ ಶ್ರೀ ಚೆನ್ನಕೇಶವ ಸ್ವಾಮಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದ ಸಭೆಯಲ್ಲಿ ಮಾತನಾಡಿದ ಅವರು, ನಾನು ಧರ್ಮದರ್ಶಿ ಮತ್ತು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಮೂರು ವರ್ಷಗಳಾಗಿದ್ದು, ಇದಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಈ ಮೂರು ವರ್ಷಗಳ ಅವಧಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಕೋಮು ಸೌಹಾರ್ದಕ್ಕೆ ಧಕ್ಕೆ ಬರದಂತೆ ನಡೆದುಕೊಂಡು ಬಂದಿರಲು ಸಹಕರಿಸಿದ ಎಲ್ಲರಿಗೂ ನಾನು ಅಭಾರಿಯಾಗಿರುತ್ತೇನೆ ಎಂದರು.
ಕಳೆದ ಇಪ್ಪತ್ತೈದು ವರ್ಷಗಳಿಂದ ಬೇಲೂರಿನ ಸ್ಥಳೀಯರಿಗೆ ಮತ್ತು ಪ್ರವಾಸಿಗರಿಗೆ ತಲೆನೋವಾಗಿದ್ದ ಪಾರ್ಕಿಂಗ್ ಸಮಸ್ಯೆಯನ್ನು ದೇವಸ್ಥಾನದ ಹಿಂಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ವಾಹನಗಳನ್ನು ನಿಲ್ಲಿಸಲು ಅನುಕೂಲ ಮಾಡಿಕೊಟ್ಟಿರುತ್ತೇನೆ. ಹಾಗೂ ಹಲವು ವರ್ಷಗಳಿಂದ ಪಾಳು ಬಿದ್ದಿದ್ದ ಯಾತ್ರಿ ನಿವಾಸವನ್ನು ದುರಸ್ತಿ ಕಾರ್ಯ ಮಾಡಿಸಿ ಬಂದಂತಹ ಪ್ರವಾಸಿಗರಿಗೆ ಅನುಕೂಲ ಮಾಡಿಕೊಟ್ಟಿದ್ದೇನೆ. ಇದರಿಂದಲೂ ಕೂಡ ದೇವಸ್ಥಾನಕ್ಕೆ ಆದಾಯ ಬರುತ್ತಿದೆ. ದಾಸೋಹ ಭವನದ ಮುಂದೆ ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ನನ್ನ ಅವಧಿಯಲ್ಲಿ ಈ ಎಲ್ಲಾ ಕೆಲಸಗಳನ್ನು ಮಾಡಲು ನನ್ನ ಜೊತೆ ನಿಂತು ಸಹಕರಿಸಿದ ವ್ಯವಸ್ಥಾಪನಾ ಸಮಿತಿಯ ಎಲ್ಲಾ ಸದಸ್ಯರಿಗೆ ಮತ್ತು ಬೇಲೂರಿನ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ರವಿಶಂಕರ್, ಪ್ರಮೋದ್, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ತಾಲೂಕು ಅಧ್ಯಕ್ಷ ವಿ.ಎಸ್ ಭೋಜೇಗೌಡ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ತಾಲೂಕು ಅಧ್ಯಕ್ಷ ಚಂದ್ರಶೇಖರ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಬಿ.ಎಲ್ ಲಕ್ಷ್ಮಣ್, ಮಾನವ ಹಕ್ಕು ಆಯೋಗದ ಜಿಲ್ಲಾಧ್ಯಕ್ಷ ಎಂ.ಜಿ ನಿಂಗರಾಜು, ಇತರರು ಹಾಜರಿದ್ದರು.