ಕನಕಪುರ: ತಾಲೂಕಿನ ಕಸಬಾ ಹೋಬಳಿಯ ಚಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡ ನಾರಾಯಣಗೌಡ ಅವರು ಸುಂಡಘಟ್ಟ ಗ್ರಾಮದ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಕುಟುಂಬದ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರೊಂದಿಗೆ ತೆರೆಳಿ ಪೂಜೆ ಸಲ್ಲಿಸಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಮನೆಮನೆಗಳಲ್ಲಿ ಮತಯಾಚನೆ ಮತ್ತು ಪ್ರಚಾರಕ್ಕೆ ಚಾಲನೆ ನೀಡಿದರು.
ಬಳಿಕ ಸ್ಥಳೀಯ ಮುಖಂಡರೊಂದಿಗೆ ಚುನಾವಣಾ ಪ್ರಚಾರದ ಬಗ್ಗೆ ಚರ್ಚಿಸಿ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಡಿ.ಕೆ.ಸುರೇಶ್ ಅವರು ಸಂಸದರಾಗಿ ಆಗಿ ಆಯ್ಕೆ ಆಗಬೇಕು. ಆ ನಿಟ್ಟಿನಲ್ಲಿ ಈ ಭಾಗದ ಮುಖಂಡರು ಪ್ರತಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಕಳೆದ 10 ವರ್ಷದ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಸ್ಥಳೀಯವಾಗಿ ಜನರಿಗೆ ತಮ್ಮ ಸಮಸ್ಯೆಗಳನ್ನ ಬಗೆಹರಿಸಿಕೊಳ್ಳಲು ಸಿಗುವ ಏಕೈಕ ಅಭ್ಯರ್ಥಿ ಎಂದರೆ ಅದು ಸುರೇಶ್ ಮಾತ್ರ, ಈ ಚುನಾವಣೆಯಲ್ಲಿ ಅವರು ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.
ಸುರೇಶ್ ಅವರ ಗೆಲುವಿಗಾಗಿ ಗ್ರಾಮದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದ್ದು, ಶನಿವಾರದಿಂದ ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ ಮತ್ತು ಮರಳವಾಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿ ಮನೆಮನೆಗಳಿಗೂ ತೆರಳಿ ಮತದಾರರನ್ನು ಭೇಟಿ ಮಾಡಿ ಸುರೇಶ್ ಅವರ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಅವರಿಗೆ ಮತ ನೀಡುವಂತೆ ಮತದಾರರ ಮನವೊಲಿಸಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲೂ ಅತಿ ಹೆಚ್ಚು ಲೀಡ್ ತಂದು ಕೊಟ್ಟು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಡಿಕೆ ಸುರೇಶ್ ಅವರನ್ನು ಆಯ್ಕೆಯಾಗಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.ಈ ಸಂದಭರ್ದಲ್ಲಿ ಮುಖಂಡರಾದ ಅಭಿ, ಮಹೇಶ್, ಸುಂಡಘಟ್ಟ ಗ್ರಾಮದ ಚಿಕ್ಕ ಸಿದ್ದೇಗೌಡ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕೆ ಕೆ ಪಿ ಸುದ್ದಿ 01:ತಾಲೂಕಿನ ಕಸಬಾ ಹೋಬಳಿಯ ಚಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಮುಖಂಡ ನಾರಾಯಣಗೌಡ ಮತ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.