ಸಮಾನತೆಯ ಕನಸು ಕಂಡಿದ್ದ ನಾರಾಯಣ ಗುರು

KannadaprabhaNewsNetwork |  
Published : Aug 21, 2024, 12:37 AM IST
20ಕೆಆರ್ ಎಂಎನ್ 2.ಜೆಪಿಜಿರಾಮನಗರದ ಕಂದಾಯ ಭವನದ ಸಭಾಂಗಣದಲ್ಲಿ  ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಿಸಲಾಯಿತು. | Kannada Prabha

ಸಾರಾಂಶ

ರಾಮನಗರ: ಸಾಮಾಜಿಕ ಪಿಡುಗಾದ ಜಾತಿ ಪದ್ಧತಿ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿ ಸಮಾಜದಲ್ಲಿ ಸಮಾನತೆಯನ್ನು ನಿರ್ಮಿಸುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು.

ರಾಮನಗರ: ಸಾಮಾಜಿಕ ಪಿಡುಗಾದ ಜಾತಿ ಪದ್ಧತಿ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿ ಸಮಾಜದಲ್ಲಿ ಸಮಾನತೆಯನ್ನು ನಿರ್ಮಿಸುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು.

ನಗರದ ಕಂದಾಯ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಉದ್ಫಾಟಿಸಿ ಮಾತನಾಡಿದ ಅವರು, ಕೇರಳದಲ್ಲಿ ದಲಿತರು ಮತ್ತು ಮಹಿಳೆಯರ ಮೇಲೆ ನಡೆಯುತ್ತಿದ್ದ ದೌರ್ಜನ್ಯ ವಿರೋಧಿಸಿ ಸಮಾನತೆಯ ಚಳವಳಿ ರೂಪಿಸಿದರು. ಶಿಕ್ಷಣದಿಂದ ಮಾತ್ರ ದಲಿತರು ಮತ್ತು ಹಿಂದುಳಿದ ವರ್ಗದವರು ಅಭಿವೃದ್ಧಿ ಹೊಂದಲು ಸಾಧ್ಯ ಎಂಬುವುದನ್ನು ಅರಿತು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದ ಬ್ರಹ್ಮಶ್ರೀ ನಾರಾಯಣ ಗುರು ಅವರು ಈ ಯುಗದ ಧಾರ್ಮಿಕ ಸಂತರೆನಿಸಿದ್ದಾರೆ ಎಂದು ತಿಳಿಸಿದರು.

ಬ್ರಹ್ಮಶ್ರೀ ನಾರಾಯಣ ಗುರು ಅವರು ಕೇರಳಾದ್ಯಂತ ಕರಕುಶಲ ಕೇಂದ್ರಗಳನ್ನು ತೆರೆದು ದಲಿತರಿಗೆ ತರಬೇತಿ ನೀಡುವ ಮುಖಾಂತರ ಸ್ವಾಭಿಮಾನದಿಂದ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದ್ದರು. ಶಿಕ್ಷಣವನ್ನು ಪಡೆಯುವ ಮುಖಾಂತರ ನಾವೆಲ್ಲರೂ ಅಸಮಾನತೆಯ ವಿರುದ್ಧ ಹೋರಾಡೋಣ ಎಂದು ನಾಡಿನಾದ್ಯಂತ ಸಂಚರಿಸಿ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದರು ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಬಾಬು, ಬ್ರಹ್ಮಶ್ರೀ ನಾರಾಯಣ ಗುರು ಅವರು ಬಸವಣ್ಣನ ನಂತರದ ಸಾಮಾಜಿಕ ಸುಧಾರಣೆಯನ್ನು ತುಂಬಾ ವ್ಯಾಪಕವಾಗಿ ಮಾಡಿದವರಲ್ಲಿ ಮೊದಲಿಗರು. ಅವರ ಆದರ್ಶ ಗುಣಗಳನ್ನು ಇಂದಿನ ತಲೆಮಾರಿನ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಸ್.ಸತೀಶ್ ಸದ್ಭಾವನಾ ಪ್ರತಿಜ್ಞೆ ಬೋಧಿಸಿದರು. ಇದೇ ವೇಳೆ ಜಿಲ್ಲಾ ಈಡಿಗ ಸಮುದಾಯದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ 17 ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರು. ಪ್ರೋತ್ಸಾಹ ಧನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಚಂದ್ರಯ್ಯ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಮಂಜುನಾಥ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಕುಮಾರ್, ಜಿಲ್ಲಾ ಗ್ರಂಥಪಾಲಕ ಅಧಿಕಾರಿ ಚನ್ನಕೇಶವ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ಬಾಬು, ಸಮುದಾಯದ ಮುಖಂಡರಾದ ಸುಧೀರ್, ಲಕ್ಷ್ಮಿಪತಿ, ರವಿಕುಮಾರ್, ಸೂರ್ಯ ನಾರಾಯಣ, ನಾಗೇಶ್, ನಾಗರಾಜು, ಚಂದ್ರಶೇಖರ್, ಲಿಂಗರಾಜು, ಆರ್‌.ರಮೇಶ್, ಗೋಪಾಲಸ್ವಾಮಿ, ಎಮ್.ಜಿ.ಗೋಪಾಲ್, ಜಗನ್ನಾಥ್, ರಾಮರಾಜು ಉಪಸ್ಥಿತರಿದ್ದರು.

20ಕೆಆರ್ ಎಂಎನ್ 2.ಜೆಪಿಜಿ

ರಾಮನಗರದ ಕಂದಾಯ ಭವನದ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಿಸಲಾಯಿತು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...