ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾಡಳಿತ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವವನ್ನು ಜಿಲ್ಲೆಯಾದ್ಯಂತ ಆ.20 ರಂದು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.ನಗರದ ಡಿಸಿ ಕಚೇರಿ ಸಭಾಂಗಣದಲ್ಲಿಡೆ ಎಡಿಸಿ ಶರಣಬಸಪ್ಪ ಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಕ್ಕೆ ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಜಯಂತಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲಾ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ-ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ ವರದಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರದಿ ಸಲ್ಲಿಸಬೇಕು ಎಂದರು.ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಯಾ ಸಂಘಟನೆಗಳಿಂದ ಏರ್ಪಡಿಸಲಾಗುವ ಮೆರವಣಿಗೆ, ಮಾರ್ಗದ ಕುರಿತು ಪೂರ್ವಭಾವಿಯಾಗಿ ಸಂಬಂಧಿಸಿದ ಇಲಾಖೆಗೆ ತಿಳಿಸಬೇಕು ಎಂದು ಅವರು ಸೂಚಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ್, ಡಿಎಚ್‌ಒ ಡಾ.ಮಲ್ಲಿಕಾರ್ಜುನ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸಮಾಜದ ಜಿಲ್ಲಾಧ್ಯಕ್ಷ ಮಹೇಂದ್ರಕುಮಾರ ಅನಪುರ, ಮಾಜಿ ಜಿಲ್ಲಾಧ್ಯಕ್ಷ ನಾಗರಾಜಗೌಡ ಮಾನಸಗಲ್, ಜಿಲ್ಲಾ ಉಪಾಧ್ಯಕ್ಷ ದೇವಪ್ಪಗೌಡ ಗುತ್ತೇದಾರ ರಾಚನಹಳ್ಳಿ, ಜಿಲ್ಲಾ ಕಾರ್ಯದರ್ಶಿ ಮಲ್ಲಯ್ಯ ಗುತ್ತೇದಾರ ಗುಂಡಗುರ್ತಿ, ಜಿಲ್ಲಾ ಕಾರ್ಯಾಧ್ಯಕ್ಷ ಸೂರ್ಯಕಾಂತ ಕಟ್ಟಿಮನಿ ಯರಗೋಳ, ಜಿಲ್ಲಾ ಖಜಾಂಚಿ ವೆಂಕಟೇಶ ಕಲಾಲ ಬದ್ದೆಪಲ್ಲಿ, ಜಿಲ್ಲಾ ಸಹ ಕಾರ್ಯದರ್ಶಿ ನಂದುಕುಮಾರ ಜಲಾಲಪುರ, ಚಂದ್ರಶೇಖರ ಕಲಾಲ ಮಾದ್ವಾರ, ರಾಘವೇಂದ್ರ ಕಲಾಲ ಸೈದಾಪೂರ, ಶಾಂತಗೌಡ ಗುತ್ತೇದಾರ ಹೆಗ್ಗಣಗೇರಾ, ಶರಣು ಗುತ್ತೇದಾರ ಮಳ್ಳಳ್ಳಿ ಇತರರಿದ್ದರು.