ಸೆ. 28ರಂದು ಶಿರಾಲಿಯಲ್ಲಿ ನಾರಾಯಣ ಗುರು ಜಯಂತಿ

KannadaprabhaNewsNetwork |  
Published : Sep 27, 2025, 12:01 AM IST
ಫೋಠೋ ಪೈಲ್ : 26ಬಿಕೆಲ್1 | Kannada Prabha

ಸಾರಾಂಶ

ಭಟ್ಕಳ ತಾಲೂಕಿನ ಶಿರಾಲಿಯ ಸಾರದಹೊಳೆಯ ಹಳೇಕೋಟೆ ಹನುಮಂತ ದೇವಸ್ಥಾನದ ಸಭಾಂಗಣದಲ್ಲಿ ಸೆ. 28ರಂದು ಸಾರದೊಳೆ ನಾಮಧಾರಿ ಅಭಿವೃದ್ಧಿ ಸಂಘ, ಭಟ್ಕಳದ ಗುರುಮಠ ಮತ್ತು ನಾರಾಯಣ ಗುರು ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವ ಆಚರಿಸಲಾಗುತ್ತದೆ.

ಭಟ್ಕಳ: ಶಿರಾಲಿಯ ಸಾರದಹೊಳೆಯ ಹಳೇಕೋಟೆ ಹನುಮಂತ ದೇವಸ್ಥಾನದ ಸಭಾಂಗಣದಲ್ಲಿ ಸೆ. 28ರಂದು ಸಾರದೊಳೆ ನಾಮಧಾರಿ ಅಭಿವೃದ್ಧಿ ಸಂಘ, ಭಟ್ಕಳದ ಗುರುಮಠ ಮತ್ತು ನಾರಾಯಣ ಗುರು ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವ ಆಚರಿಸಲಾಗುತ್ತದೆ ಎಂದು ಹಳೇಕೋಟೆ ಹನುಮಂತ ದೇವಸ್ಥಾನದ ಅಧ್ಯಕ್ಷ ಆರ್.ಕೆ. ನಾಯ್ಕ ಹೇಳಿದರು.

ಆಸರಕೇರಿಯ ಗುರುಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣ ಗುರು ಜಯಂತ್ಯುತ್ಸವದ ಅಂಗವಾಗಿ ಸೆ. 28ರಂದು ಬೆಳಗ್ಗೆ 9.30ಕ್ಕೆ ಶಿರಾಲಿಯ ಹಾದಿಮಾಸ್ತಿ ದೇವಸ್ಥಾನದಿಂದ ಹಳೆಕೋಟೆ ಹನುಮಂತ ದೇವಸ್ಥಾನದ ವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ ಎಂದರು.

ಗುರು ಮಠದ ಅಧ್ಯಕ್ಷ ಅರುಣ ನಾಯ್ಕ ಮಾತನಾಡಿ, ವರ್ಷಂಪ್ರತಿಯಂತೆ ಈ ಸಲವೂ ನಾರಾಯಣ ಗುರು ಜಯಂತ್ಯುತ್ಸವವನ್ನು ಅದ್ಧೂರಿಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಗೌರವಾಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ ಮಾತನಾಡಿ, ನಾರಾಯಣ ಗುರು ತತ್ವ ಸಿದ್ಧಾಂತ, ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಾರಾಯಣ ಗುರುಗಳ ಜಯಂತ್ಯುತ್ಸವದಲ್ಲಿ ಅವರು ಆಗಿನ ಕಾಲದಲ್ಲಿ ನಡೆಸಿದ ಹೋರಾಟದ ಬಗ್ಗೆ ತಿಳಿವಳಿಕೆ ನೀಡಲಾಗುತ್ತದೆ ಎಂದರು. ನಾರಾಯಣ ಗುರು ಸಮಿತಿಯ ತಾಲೂಕು ಅಧ್ಯಕ್ಷ ಮನಮೋಹನ ನಾಯ್ಕ ಮಾತನಾಡಿ, ಸೆ. 28ರಂದು ಕಾರ್ಯಕ್ರಮವನ್ನು ಸಾರದಹೊಳೆ ನಾಮಧಾರಿ ಸಮಾಜದ ಅಭಿವೃದ್ಧಿ ಸಂಘದ ಅಧ್ಯಕ್ಷ ಆರ್.ಕೆ. ನಾಯ್ಕ ಮತ್ತು ಆಸರಕೇರಿ ಗುರುಮಠದ ಅಧ್ಯಕ್ಷ ಅರುಣ ನಾಯ್ಕ ಉದ್ಘಾಟಿಸಲಿದ್ದಾರೆ. ಹಳೇಕೋಟೆ ಹನುಮಂತ ದೇವಸ್ಥಾನದ ಮೊಕ್ತೇಸರ ಸುಬ್ರಾಯ ಜೆ. ನಾಯ್ಕ ಉಪಸ್ಥಿತರಿರುವರು. ನಾರಾಯಣ ಗುರು ಸಮಿತಿಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮುಖ್ಯ ವಕ್ತಾರರಾಗಿ ಆಗಮಿಸಲಿದ್ದಾರೆ. ನಾರಾಯಣ ಗುರು ಸಮಿತಿಯ ತಾಲೂಕು ಅಧ್ಯಕ್ಷ ಮನಮೋಹನ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಆರ್‌.ಎನ್‌. ನಾಯ್ಕ, ಶಿವಾನಂದ ನಾಯ್ಕ, ಮಾಜಿ ಶಾಸಕರಾದ ಜೆ.ಡಿ. ನಾಯ್ಕ, ಸುನೀಲ ನಾಯ್ಕ, ಗುರು ಮಠದ ಉಪಾಧ್ಯಕ್ಷ ಎಂ.ಕೆ. ನಾಯ್ಕ, ಹಳೇಕೋಟೆ ಹನುಮಂತ ದೇವಸ್ಥಾನದ ಉಪಾಧ್ಯಕ್ಷ ನಾಗೇಂದ್ರ ಡಿ. ನಾಯ್ಕ ಪಾಲ್ಗೊಳ್ಳಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಡಿ.ಎಲ್. ನಾಯ್ಕ, ಎಂ.ಕೆ. ನಾಯ್ಕ, ಶ್ರೀಧರ ನಾಯ್ಕ, ದೀಪಕ ನಾಯ್ಕ, ಮಹೇಶ ನಾಯ್ಕ ಮುಂತಾದವರಿದ್ದರು.

PREV

Recommended Stories

ಹತ್ತು ವರ್ಷವಾದ್ರೂ ನೇಕಾರರ ಮನೆಗಳಿಗಿಲ್ಲ ಮುಕ್ತಿ
ಭೀಮಾನದಿ ನೀರಿನ ಹರಿವು ಮತ್ತೆ ಏರಿಕೆ