ಅಂಬಲಪಾಡಿಯ ಬಿಲ್ಲವ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯು ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಭಜನಾ ಸೇವೆಯೊಂದಿಗೆ ನೆರವೇರಿತು.
ಉಡುಪಿ: ಅಂಬಲಪಾಡಿಯ ಬಿಲ್ಲವ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯು ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಭಜನಾ ಸೇವೆಯೊಂದಿಗೆ ನೆರವೇರಿತು.
ಮಹಾಪೂಜೆಯ ಬಳಿಕ ಸಂಘದ ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಉತ್ತಮ ಅಂಕಗಳಿಸಿದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಿವದಾಸ್ ಪಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸಿದ್ದರು.ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಮುದ್ದಣ್ಣ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕ್ರಿಶ್ಚಿಯನ್ ಪಿ.ಯು. ಕಾಲೇಜು ಪ್ರಾಂಶುಪಾಲೆ ಶ್ವೇತಾ ಶ್ರೀನಿವಾಸ್, ಸಂಘದ ಆಡಳಿತ ಸಮಿತಿ ಸದಸ್ಯ ರಾಜೇಂದ್ರ ಪಂದುಬೆಟ್ಟು, ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಚಾಲಕಿ ಗೋಧಾವರಿ ಎಮ್. ಸುವರ್ಣ, ಸಂಘದ ಮಾಜಿ ಕೋಶಾಧಿಕಾರಿ ಸುರೇಶ್ ಎ., ಆಡಳಿತ ಸಮಿತಿ ಸದಸ್ಯರಾದ ಗುರುರಾಜ್ ಪೂಜಾರಿ, ಸತೀಶ್ ಜಿ. ಪೂಜಾರಿ ವಿದ್ಯಾರ್ಥಿ ವೇತನ ವಿತರಿಸಿದರು.ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಆಡಳಿತ ಸಮಿತಿ ಸದಸ್ಯರಾದ ಸುಧಾಕರ ಎ., ರಮೇಶ್ ಕೋಟ್ಯಾನ್, ಭಾಸ್ಕರ ಅಂಚನ್, ಕುಶಲ ಕುಮಾರ್ ಎ., ಭಾಸ್ಕರ ಕೋಟ್ಯಾನ್, ನಿತಿನ್ ಕುಮಾರ್, ಜನಾರ್ದನ ಪೂಜಾರಿ, ಚೆನ್ನಕೇಶವ, ಗೌರವ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಶಂಕರ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿ ಸಂಚಲ ಶಶಿಕಾಂತ್, ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ, ಸಮಿತಿ ಸದಸ್ಯೆಯರು, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್ ಸಹಿತ ಸಂಘದ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಸಾಮೂಹಿಕ ಸಂತರ್ಪಣೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.