ಪ್ರಸೂತಿ ತಜ್ಞ ಡಾ. ರಮೇಶ್ ಅಮೃತ ಮಹೋತ್ಸವ ಲಾಂಛನ ಬಿಡುಗಡೆ ಮಾಡಿದರು. ಮೂಡುಬಿದಿರೆ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಶ್ ಕೆ. ಪೂಜಾರಿ ಅಧ್ಯಕ್ಷತೆ ವಹಿಸಿದರು. ಸ್ಥಾಪಕ ಸದಸ್ಯ ಪಿ.ಕೆ. ರಾಜು ಪೂಜಾರಿ ಬಾಲ ಸಂಸ್ಕಾರ ಶಿಬಿರವನ್ನು ಉದ್ಘಾಟಿಸಿದರು.
ಮೂಡುಬಿದಿರೆ: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಅಮೃತ ಮಹೋತ್ಸವ ಸಂಭ್ರಮ- 2025 ಲಾಂಛನ ಬಿಡುಗಡೆ ಮತ್ತು ‘ಬಾಲ ಸಂಸ್ಕಾರ’ ವಿಶೇಷ ಕಾರ್ಯಕ್ರಮವು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಮಂಗಳವಾರ ಸಂಜೆ ನಡೆಯಿತು. ಉದ್ಯಮಿ ನಾರಾಯಣ ಪಿ.ಎಂ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಕುಚಿತ ಮನೋಭಾವವನ್ನು ಬಿಟ್ಟು ಎಲ್ಲರೂ ಒಟ್ಟುಗೂಡಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಸಬೇಕು ಎಂದರು.
ಪ್ರಸೂತಿ ತಜ್ಞ ಡಾ. ರಮೇಶ್ ಅಮೃತ ಮಹೋತ್ಸವ ಲಾಂಛನ ಬಿಡುಗಡೆ ಮಾಡಿದರು. ಮೂಡುಬಿದಿರೆ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಶ್ ಕೆ. ಪೂಜಾರಿ ಅಧ್ಯಕ್ಷತೆ ವಹಿಸಿದರು. ಸ್ಥಾಪಕ ಸದಸ್ಯ ಪಿ.ಕೆ. ರಾಜು ಪೂಜಾರಿ ಬಾಲ ಸಂಸ್ಕಾರ ಶಿಬಿರವನ್ನು ಉದ್ಘಾಟಿಸಿದರು.ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಜಗದೀಶ್ವಂದ್ರ ಡಿ.ಕೆ., ಅಧ್ಯಾಪಕಿ ಉಷಾ ಮಧುಕರ್, ಸೇವಾದಳದ ಅಧ್ಯಕ್ಷ ದಿನೇಶ್, ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ದಿನೇಶ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಗಿರೀಶ್ ಕುಮಾರ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಲಕ್ಷ್ಮಣ್ ಪೂಜಾರಿ ವಂದಿಸಿದರು. ಶ್ರೀರಾಜ್ ಸನಿಲ್ ಹಾಗೂ ಪ್ರಜ್ವಲ್ ಮಾರ್ನಾಡು ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.