ಕನ್ನಡಪ್ರಭ ವಾರ್ತೆ ದಾವಣಗೆರೆ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂದು ಮನುಕುಲ ಕುಟುಂಬಕ್ಕೆ ಸಾರಿದವರು ಬ್ರಹ್ಮಶ್ರೀ ನಾರಾಯಣ ಗುರು. ಆ ಕಾಲದಲ್ಲಿ ಹಿಂದುಳಿದವರನ್ನು ಶೋಷಣೆ ಮಾಡಲಾಗುತ್ತಿತ್ತು. ಜೊತೆಗೆ ದೇವಸ್ಥಾನಗಳಿಗೆ ಪ್ರವೇಶವಿರಲಿಲ್ಲ. ಮೇಲು ಜಾತಿಯವರು ನಡೆಯುವ ದಾರಿಯಲ್ಲಿ ನಡೆಯುವಂತಿರಲಿಲ್ಲ. ಮಹಿಳೆಯರು ಕುಪ್ಪಸ ತೊಡುವಂತಿರಲಿಲ್ಲ. ಆಭರಣ ಧರಿಸುವಂತಿರಲಿಲ್ಲ. ಕಾಲಿಗೆ ಚಪ್ಪಲಿ ಹಾಕುವಂತಿರಲಿಲ್ಲ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಸುಧಾರಣೆಗಾಗಿ ಬಂದ ಗುರುಗಳು ಕಂದಾಚಾರ, ಮೂಢನಂಬಿಕೆಗಳನ್ನು ಹೋಗಲಾಡಿಸಿ ಸಾಮಾಜಿಕ ಕ್ರಾಂತಿ ಮಾಡಿದವರು ನಾರಾಯಣ ಗುರು ಎಂದು ಬಣ್ಣಿಸಿದರು.ವಿದ್ಯೆಯನ್ನು ಪಡೆದು ಸ್ವತಂತ್ರರಾಗಿರಿ, ಸಂಘಟನೆಯಿಂದ ಶಕ್ತಿವಂತರಾಗಿರಿ ಎಂಬ ಸಂದೇಶ ಸಾರಿದರು. ಮನುಷ್ಯ ಜಾತಿಯಿಂದ ದೊಡ್ಡವನಾಗುವುದಿಲ್ಲ. ಬದಲಾಗಿ ಆತ ಬದುಕಿನ ನೀತಿಯಿಂದ, ರೀತಿಯಿಂದ ದೊಡ್ಡವನಾಗುತ್ತಾನೆ ಎಂದು ತೋರಿಸಿಕೊಟ್ಟವರು ನಾರಾಯಣ ಗುರು ಎಂದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಮಾತನಾಡಿ, ಗುರು ಹಿರಿಯರು ಹಾಕಿಕೊಟ್ಟ ಸಲಹೆ-ಸೂಚನೆ, ಆಚಾರ-ವಿಚಾರ ಆ ಸಂಘ, ಸಮುದಾಯವಷ್ಟೇ ಅಲ್ಲದೇ ಎಲ್ಲಾ ಮನುಕುಲ ಪಾಲನೆ ಮಾಡಿ, ಅವರ ಆದರ್ಶಗಳನ್ನು ರೂಡಿಸಿಕೊಳ್ಳಿ ಎಂಬ ಉದ್ದೇಶದಿಂದ ಈ ಜಯಂತಿಗಳನ್ನು ಆಚರಿಸಲಾಗುತ್ತದೆ. ಸಮಾಜದಲ್ಲಿ ಇಂದಿಗೂ ಮೌಢ್ಯತೆ, ಮೂಢನಂಬಿಕೆ ಜೀವಂತವಾಗಿರುವುದು ನಾವು ಕಾಣಬಹಹುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ರವಿಚಂದ್ರ, ಈಡಿಗ ಸಮಾಜದ ಗೌರವಾಧ್ಯಕ್ಷ ಎಚ್.ಶಂಕರ್, ಕಾರ್ಯದರ್ಶಿ ದೇವೇಂದ್ರಪ್ಪ, ಉಪಾಧ್ಯಕ್ಷ ಶಾಂತರಾಮ್, ಲಕ್ಷ್ಮಿ ಸಮಾಜದ ಬಂಧುಗಳು ಇದ್ದರು.
ಕೆ.ಎಸ್.ಬಸವಂತಪ್ಪ, ಶಾಸಕ.