ಬಳ್ಳಾರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಕನ್ನಡಪ್ರಭ ವಾರ್ತೆ ಬಳ್ಳಾರಿ
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ. ರಾಜ್‍ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಳ್ಳಾರಿಯ ಆಕಾಶವಾಣಿ ಎಫ್ಎಂ ಕೇಂದ್ರದ ಉದ್ಘೋಷಕ ಬಸವರಾಜ ಅಮಾತಿ ವಿಶೇಷ ಉಪನ್ಯಾಸ ನೀಡಿ, ಕೇರಳದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ನಾರಾಯಣ ಗುರು ಎಂಬ ಒಬ್ಬ ಸಮಾಜ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ತಮ್ಮ ಇಡೀ ಜೀವನ ಮುಡಿಪಾಗಿಟ್ಟರು.ಜಗತ್ತಿನಲ್ಲಿರುವುದು ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂಬ ಸತ್ಯವಾಕ್ಯವನ್ನು ಗುರುಗಳು ಪ್ರತಿಪಾದಿಸಿದ ತತ್ವವಾಗಿತ್ತು. ಅದ್ವಿತೀಯ ಪಂಡಿತರಾಗಿದ್ದ ಅವರು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯ ಕಂಡುಕೊಂಡರು ಎಂದು ಅಮಾತಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಆರ್ಯ ಈಡಿಗ ಗೌನ ಮಹಾಜನ ಸಂಘದ ಜಿಲ್ಲಾಧ್ಯಕ್ಷ ಎಚ್.ಆರ್. ಶ್ರೀನಾಥ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.