ಕನ್ನಡಪ್ರಭ ವಾರ್ತೆ ಮಡಿಕೇರಿ
ಸಮಾನತೆ ಮತ್ತು ಮೌಲ್ಯವನ್ನು ಬೋಧಿಸಿದ ಮಹಾ ಸಂತ ಹಾಗೂ ತತ್ವಜ್ಞಾನ ಮತ್ತು ಸಮಾಜ ಸುಧಾರಣೆಗಾಗಿ ನಾರಾಯಣ ಗುರು ಅವರು ಶ್ರಮಿಸಿದ್ದಾರೆ ಎಂದು ಉಪ ವಿಭಾಗ ಅಧಿಕಾರಿ ನಿತಿನ್ ಚಕ್ಕಿ ಹೇಳಿದರು.
ಕರ್ನಾಟಕ ರೇಷ್ಮೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ನಾರಾಯಣ ಗುರುಗಳು ಕೇರಳದ ತಿರುವನಂತಪುರ ಬಳಿಯ ಚೆಂಬಳಂತಿ ಎಂಬ ಗ್ರಾಮದಲ್ಲಿ ಜನಿಸಿದರು ಎಂದು ತಿಳಿಸಿದರು.ಕೇರಳ ರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ''''''''''''''''ನಾರಾಯಣ ಗುರು ಅವರು ಒಬ್ಬ ಸಮಾಜದ ಸುಧಾರಕ ಉದಯಿಸಿ, ಸಮಾಜದ ತಾರತಮ್ಯ ಹೋಗಲಾಡಿಸಲು ಪ್ರಯತ್ನಿಸಿದರು ಎಂದರು.
ದುರ್ಬಲರಿಗೆ ಆಸ್ಪತ್ರೆ, ಶಾಲೆ, ಶಿಕ್ಷಣ, ದೇವಾಲಯಗಳನ್ನು ಸ್ಥಾಪಿಸಲು ಶಕ್ತಿಯುತವಾಗಿ ನಿಂತರು ಎಂದು ತಿಳಿಸಿದರು.
ಬಿಲ್ಲವ ಸಮಾಜದ ಜಿಲ್ಲಾಧ್ಯಕ್ಷರು ಹಾಗೂ ನಿವೃತ್ತ ಪೊಲೀಸ್ ಉಪ ಅಧೀಕ್ಷಕರಾದ ಬಿ.ಆರ್.ಲಿಂಗಪ್ಪ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಪಾಲನೆ ಮಾಡುವುದರಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದರು.
ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಸ್ವಾಗತಿಸಿದರು.
ಪ್ರಮುಖರಾದ ದಿವಾಕರ, ಹಿಂದುಳಿದ ವರ್ಗದ ತಾಲೂಕು ಅಧಿಕಾರಿ ಮೋಹನ್ ಕುಮಾರ್, ಸಿಂಚನ ಇತರರು ಇದ್ದರು.