ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರಬ್ರಹ್ಮಶ್ರೀ ನಾರಾಯಣ ಗುರುಗಳು ಸಮ ಸಮಾಜ ಕಟ್ಟಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಪ್ರಾಧ್ಯಾಪಕ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.
-ಯುವಶಕ್ತಿಯ ಪ್ರೇರಕ
-ಬ್ರಹ್ಮಶ್ರೀ ನಾರಾಯಣಗುರು, ಮಾಜಿ ಸಿಎಂ ದಿ.ದೇವರಾಜ ಅರಸು, ಮಾಜಿ ಪಿಎಂ ರಾಜೀವ್‌ಗಾಂಧಿ ಜನ್ಮದಿನ
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಬ್ರಹ್ಮಶ್ರೀ ನಾರಾಯಣ ಗುರುಗಳು ಸಮ ಸಮಾಜ ಕಟ್ಟಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಪ್ರಾಧ್ಯಾಪಕ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.
ಆರ್.ಎರ್.ಜೆ.ಐ.ಟಿ ಕ್ಯಾಂಪಸ್‌ನಲ್ಲಿ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು, ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸು ಹಾಗೂ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹುಟ್ಟಿನ ಜಾತಿಯ ಕಾರಣಕ್ಕೆ ವ್ಯಕ್ತಿ ಶ್ರೇಷ್ಠ ಅಥವಾ ಕನಿಷ್ಠವಾಗುವುದಿಲ್ಲ, ಆ ರೀತಿ ಭಾವಿಸಿದರೆ ಅದು ಧರ್ಮ ವಿರೋಧಿಯಾಗುತ್ತದೆ. ಅಸ್ಪೃಶ್ಯತೆ ಎಂಬ ರೋಗ ಮಾನವ ಸೃಷ್ಟಿ. ದೇವರ ಸೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂಬುದನ್ನು ತಮ್ಮದೇ ಆದ ಆಲೋಚನಾಕ್ರಮದ ಮೂಲಕ ನಾರಾಯಣ ಗುರುಗಳು ಪ್ರತಿಪಾದಿಸಿ, ಜ್ಞಾನಮಾರ್ಗ ಮತ್ತು ಕರ್ಮಮಾರ್ಗಗಳಿಂದ ಶ್ರೇಷ್ಠತೆ ಸಾಧಿಸಬಹುದೆಂದು ತಿಳಿಸಿದ್ದಾರೆ ಎಂದು ಸ್ಮರಿಸಿದರು.
ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಉಳುವವನೇ ಭೂಮಿ ಒಡೆಯ ಎಂಬ ಘೋಷ ವಾಕ್ಯದಡಿ ಭೂ ಒಡೆತನವನ್ನು ಶೋಷಿತವರ್ಗಗಳಿಗೆ ನೀಡಿದರು. ಎಲ್.ಜಿ.ಹಾವನೂರ್ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿ, ಪ್ರಬಲ ಸಮುದಾಯಗಳ ನಡುಗೆ ಹಿಂದುಳಿದ ವರ್ಗಗಳಿಗೂ ಅವಕಾಶ ಮತ್ತು ಸಮಾನತೆ ಒದಗಿಸುವ ಸಂಕಲ್ಪ ಮಾಡಿದರು ಎಂದು ತಿಳಸಿದರು.
ಯುವ ಜನರ ಶಕ್ತಿಯಾಗಿದ್ದ ರಾಜೀವ್‌ಗಾಂಧಿ ಡಿಜಿಟಲ್ ಇಂಡಿಯಾದ ಪರಿಕಲ್ಪನೆ ಜಾರಿಗೆ ತರುವ ಸಾಹಸ ಮಾಡಿದವರು. ಆರಂಭಿಕ ಕಾಲಘಟ್ಟದಲ್ಲಿ ದೂರ ಸಂಪರ್ಕ ಕ್ರಾಂತಿಗೆ ಮುನ್ನುಡಿ ಬರೆದ ಅವರು, ಮತದಾನದ ಹಕ್ಕು ವಯೋಮಿತಿಯನ್ನು 18 ವರ್ಷಕ್ಕೆ ಇಳಿಸುವ ಮೂಲಕ ಯುವಶಕ್ತಿಯ ಪ್ರೇರಕರಾದರು. ಅವರ ಜನ್ಮದಿನದ ಸಂದರ್ಭದಲ್ಲಿ ಸದ್ಭಾವನಾ ದಿನಾಚರಣೆ ಆಚರಿಸುತ್ತಿರುವುದು ಅರ್ಥಪೂರ್ಣ ಎಂದರು.
ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಮೂವರು ಮಹನೀಯರು ತಮ್ಮ ಕಾರ್ಯವ್ಯಾಪ್ತಿ ಮತ್ತು ಆಲೋಚನಾ ಬದ್ಧತೆಯಿಂದ ದೇಶದ ಭವಿಷ್ಯವನ್ನು ಸದೃಢಗೊಳಿಸಿದ್ದಾರೆ. ಹಿಂದುಳಿದ ವರ್ಗಗಳ ದನಿಯಾಗಿ, ಯುವಜನರ ಆಶೋತ್ತರಗಳನ್ನು ಪ್ರಭಾವಿಸಿದ್ದು, ಅವರ ಆದರ್ಶಗಳು ಪಾಲಿಸಬೇಕು ಎಂದು ಹೇಳಿದರು.
ಇದೇ ವೇಳೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್ ಕಾರ್ತಿಕ್, ಮಾನವ ಸಂಪನ್ಮೂಲ ನಿರ್ದೇಶಕ ಬಾಬು ರೆಡ್ಡಿ ನಾಗಸಂದ್ರ, ಪದವಿ ಕಾಲೇಜು ಪ್ರಾಂಶುಪಾಲ ಡಾ.ನಾಗರಾಜ್, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಪ್ರೊ.ನರಸಿಂಹರೆಡ್ಡಿ, ಐಟಿಐ ಕಾಲೇಜು ಪ್ರಾಂಶುಪಾಲ ರವಿಕುಮಾರ್, ಪಿಯು ಕಾಲೇಜು ಪ್ರಾಂಶುಪಾಲ ಮಹಂತೇಶಪ್ಪ, ಪ್ರೌಢಶಾಲೆ ಮುಖ್ಯಶಿಕ್ಷಕ ಜಿಯಾವುಲ್ಲಾಖಾನ್, ವಸತಿ ಶಾಲೆ ಪ್ರಾಂಶುಪಾಲ ಧನಂಜಯ್, ಎಸ್‌ಡಿಯುಐಎಂ ಆಡಳಿತಾಧಿಕಾರಿ ಐ.ಎಂ.ರಮೇಶ್‌ಕುಮಾರ್ ಇತರರಿದ್ದರು.ಫೋಟೋ-20ಕೆಡಿಬಿಪಿ2-
ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಬ್ರಹ್ಮಶ್ರೀ ನಾರಾಯಣಗುರು, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಮತ್ತು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಜನ್ಮದಿನಾಚರಣೆ ಆಚರಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.