ಉಡುಪಿ: ದೇಶ ಸೇವೆಯೇ ಈಶ ಸೇವೆ ಎಂದು ನಂಬಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಹಾಗೂ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಅನಾಥಾಲಯದಲ್ಲಿ ಹಮ್ಮಿಕೊಂಡಿರುವ ಅನ್ನದಾನ ಮತ್ತು ಸಹ ಭೋಜನ ಒಂದು ಮನಮುಟ್ಟುವ ಮಾದರಿ ಕಾರ್ಯಕ್ರಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.
ಈ ಸಂದರ್ಭದಲ್ಲಿ ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ ಡಿ.ಬಿ. ಕುಂದಾಪುರ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಎಸ್.ಸಿ. ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಕೈಪುಂಜಾಲು, ಉಪಾಧ್ಯಕ್ಷರಾದ ಹಿರಿಯಣ್ಣ ಅಮ್ಮುಂಜೆ, ಅನಿತಾ ಸಾಲ್ಯಾನ್, ಮಾಜಿ ಜಿಲ್ಲಾಧ್ಯಕ್ಷ ಗೋಪಾಲ ಕಳಂಜೆ, ಜಿಲ್ಲಾ ಕಾರ್ಯದರ್ಶಿಗಳಾದ ಸದಾನಂದ ಚಾಂತಾರು, ಸುರೇಶ ಮೂಡುಬಗೆ, ಸುಂದರ ಬಿ.ಕಾರ್ಕಳ, ಬಿಜೆಪಿ ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ದೇವಾನಂದ ನಾಯಕ್, ಮಹಿಳಾ ಮೋರ್ಚಾ ಉಡುಪಿ ಗ್ರಾಮಾಂತರ ಅಧ್ಯಕ್ಷೆ ರಮ್ಯಾ ರಾವ್, ಎಸ್.ಸಿ. ಮೋರ್ಚಾ ಬೈಂದೂರು ಅಧ್ಯಕ್ಷ ಅಶೋಕ್ ಎನ್.ಡಿ., ಉಪಾಧ್ಯಕ್ಷ ಪ್ರವೀಣ್ ಗುಡ್ಡೆಯಂಗಡಿ, ಪ್ರಧಾನ ಕಾರ್ಯದರ್ಶಿ ಅಕ್ಷಯ್, ಎಸ್.ಸಿ. ಮೋರ್ಚಾ ಕುಂದಾಪುರ ಅಧ್ಯಕ್ಷ ಮಂಜುನಾಥ್ ಬಳ್ಕೂರು, ಎಸ್.ಸಿ. ಮೋರ್ಚಾ ಉಡುಪಿ ಗ್ರಾಮಾಂತರ ಉಪಾಧ್ಯಕ್ಷ ಪುಷ್ಪರಾಜ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು