ನರೇಗಾ: ಮೊದಲ ಸ್ಥಾನಕ್ಕೆ ತುಮಕೂರು ಜಿಲ್ಲೆ

KannadaprabhaNewsNetwork |  
Published : Jan 06, 2024, 02:00 AM IST
ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ | Kannada Prabha

ಸಾರಾಂಶ

ನರೇಗ ಯೋಜನೆಯಲ್ಲಿ ತುಮಕೂರು ಮೊದಲ ಸ್ಥಾನ ಪಡೆದುಕೊಂಡಿದೆ.

ಕನ್ನಡಪ್ರಭ ವಾರ್ತೆ ತುಮಕೂರು

ರಾಜ್ಯದ ಹಲವು ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆಗಳೆಂದು ಘೋಷಣೆ ಮಾಡಲಾಗಿದೆ. ಈ ಸಾಲಿನಲ್ಲಿ ತುಮಕೂರು ಜಿಲ್ಲೆಯು ಕೂಡ ಸೇರಿದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಬೇಡಿಕೆ ಹೆಚ್ಚಿದೆ. ಇದೇ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಉದ್ಯೋಗವಕಾಶವನ್ನು ನೀಡಿ ವಲಸೆ ತಪ್ಪಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯಿತಿಯು ಹಲವು ರೀತಿಯ ಶ್ರಮಗಳನ್ನು ಹಾಕಿದ ಫಲವಾಗಿ ಮಾನವ ದಿನಗಳ ಸೃಜನೆಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದೆ.

ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ನರೇಗಾ ಯೋಜನೆ ಪ್ರಗತಿ ಸಾಧಿಸುವ ಉದ್ದೇಶದಿಂದ ಪ್ರತಿದಿನ ಶ್ರಮ ಹಾಕಲಾಗಿದೆ. ಇದರ ಫಲವಾಗಿ ಕಳೆದ ಮೂರು ತಿಂಗಳಿನಿಂದಲೂ ತುಮಕೂರು ಜಿಲ್ಲೆ ನರೇಗಾ ಯೋಜನೆಯಡಿ ಮಾನವ ದಿಗಳ ಸೃಜನೆಯಲ್ಲಿ ಮೊದಲನೇ ಸ್ಥಾನದಲ್ಲಿದೆ.

ಬರ ಪರಿಹಾರದ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಕೂಲಿ ಆಧಾರಿತ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬರ ತಡೆಗಟ್ಟುವ ನಿಟ್ಟಿನಲ್ಲಿ ಬದು ನರ್ಮಾಹಣ ಕಾಮಗಾರಿ, ಕೂಲಿ ಆಧಾರಿತ ಸಮುದಾಯ ಕಾಮಗಾರಿಗಳಾದ ಕೆರೆ ಹೂಳು ತೆಗೆಯುವ ಕಾಮಗಾರಿಗಳು, ರೈತರ ವೈಯಕ್ತಿಕ ಜಮೀನುಗಳಲ್ಲಿ ಸಸಿ ನೆಡುವ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದರ ಫಲವಾಗಿ ಜಿಲ್ಲೆಯಲ್ಲಿ ಬರ ನಿರ್ವಹಣೆಯ ಜೊತೆಗೆ ನರೇಗಾ ಪ್ರಗತಿಯಲ್ಲಿ ರಾಜ್ಯದಲ್ಲಿಯೇ ತುಮಕೂರು ಜಿಲ್ಲೆ ಮೊದಲ ಸ್ಥಾನಕ್ಕೆ ಜಿಗಿದಿದೆ.

ತುಮಕೂರು ಜಿಲ್ಲೆಯಲ್ಲಿ ಜ.5 ರವರೆಗೆ 2.22 ಲಕ್ಷ ಕುಟುಂಬಗಳು ನರೇಗಾ ಉದ್ಯೋಗ ಚೀಟಿಯನ್ನು ಹೊಂದಿರುವ ಕುಟುಂಬಗಳಿವೆ. ಅಲ್ಲದೆ ಒಟ್ಟು 4.27 ಲಕ್ಷ ಕ್ರಿಯಾಶೀಲ ನರೇಗಾ ಕೂಲಿ ಕರ್ಮಿಹಕರು ಜಿಲ್ಲೆಯಲ್ಲಿದ್ದಾರೆ.

ತುಮಕೂರು ಜಿಲ್ಲೆಗೆ ನರೇಗಾ ಯೋಜನೆ ಅನುಷ್ಠಾನ ಮಾಡುವ ಉದ್ದೇಶದಿಂದ 42 ಲಕ್ಷ ಮಾನವ ದಿನಗಳ ಗುರಿಯನ್ನು ನಿಗದಿ ಮಾಡಲಾಗಿತ್ತು. ಡಿಸೆಂಬರ್ ಅಂತ್ಯದ ವೇಳೆಗೆ 84 ಲಕ್ಷ ಮಾನವ ದಿನಗಳ ಸೃಜನೆ ಮಾಡಿ ತುಮಕೂರು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ.

ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಹಿನ್ನೆಲೆಯಲ್ಲಿ ಸೆಪ್ಟಂಬರ್ ನಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾದ್ಯಕ್ಷರು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ವಿಶೇಷ ಕರ್ಯಾ ಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯುಕ್ರಮದಲ್ಲಿ ಕೂಲಿ ಆಧಾರಿತ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಜಿಲ್ಲೆಯ ರೈತರು ನರೇಗಾ ಯೋಜನೆ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿತ್ತು. ಈ ಕಾರ್ಯಕ್ರಮವನ್ನು ಗೃಹ ಸಚಿವರು, ಸಹಕಾರ ಸಚಿವರು ಸೇರಿದಂತೆ ಜಿಲ್ಲೆಯ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಸದಸ್ಯರು ಉದ್ಘಾಟಿಸಿದ್ದರು. ಒಟ್ಟಾರೆಯಾಗಿ 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ನರೇಗಾ ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿ ಯೋಜನೆಯ ಅನುಕೂಲಗಳು ಗ್ರಾಮೀಣ ಭಾಗದ ಜನರಿಗೆ ಸಿಗಲು ದಾಪುಗಾಲಿಟ್ಟಿದೆ ಎಂದು ಜಿಲ್ಲಾ ಪಂಜಾಯತ್‌ ಸಿಇಒ ಪ್ರಭು ಹರ್ಷ ವ್ಯಕ್ತಪಡಿಸಿದ್ದಾರೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ