ಕನ್ನಡಪ್ರಭ ವಾರ್ತೆ ಕೊರಟಗೆರೆ
ದೇಶದ ರಾಜಕೀಯ ವ್ಯವಸ್ಥೆಯಲ್ಲಿ ನರೇಂದ್ರ ಮೋದಿ ೩ನೇ ಬಾರಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಹೊಸ ಸಂಚಲನವನ್ನೇ ಸೃಷ್ಠಿಸಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಎಚ್ ಅನಿಲ್‌ಕುಮಾರ್ ತಿಳಿಸಿದರು.ತಾಲೂಕಿನ ಕೋಳಾಲ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ವತಿಯಿಂದ ೩ನೇ ಬಾರಿ ಪ್ರಧಾನಿಯಾಗಿ ಮತ್ತು ಕರ್ನಾಟಕ ೫ಮಂದಿ ನೂತನ ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕರಿಸುತ್ತಿರುವ ವಿಜಯೋತ್ಸವ ಸಂಭ್ರಮದಲ್ಲಿ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ಮಾಜಿ ಪ್ರಧಾನಿ ಜವಹಾರ್‌ಲಾಲ್ ಬಳಿಕ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವಲ್ಲಿ ಮೋದಿಜೀ ಅವರು ಮೊದಲಿಗರಾಗಿದ್ದಾರೆ. ಇತ್ತೀಚಿಗೆ ಸಂಸದರಾಗಿ ಆಯ್ಕೆ ಆಗಿರುವ ವಿ.ಸೋಮಣ್ಣ ಮೊದಲ ಬಾರಿ ಕೇಂದ್ರ ಸಚಿವರಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. ಈ ಹಿನ್ನೆಲೆ ಈ ಹೋಬಳಿಯಲ್ಲಿ ೨ಕ್ವಿಂಟಾಲ್ ಬೂಂದಿ ಲಾಡು ವಿತರಣೆ ಮಾಡುವ ಮೂಲಕ ವಿಜಯೋತ್ಸವದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.ಬಿಜೆಪಿ ಮಂಡಲ ತಾಲೂಕು ಅಧ್ಯಕ್ಷ ದರ್ಶನ್ ಮಾತನಾಡಿ, ವಿಶ್ವನಾಯಕ ಮೋದಿಗೆ ೩ನೇ ಬಾರಿ ಪ್ರಧಾನ ಮಂತ್ರಿಯಾಗಿ ಮತ್ತು ೭೨ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಮತ್ತು ಸೋಮಣ್ಣ ಕೇಂದ್ರ ಸಚಿವರಾಗಿ ಆಯ್ಕೆಯಾಗಿರುವುದು ಇನ್ನಷ್ಟು ಖುಷಿಯ ವಿಚಾರವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಸಮನ್ವಯದಿಂದ ಇದೆಲ್ಲವೂ ನಡೆದಿದೆ. ಕೊರಟಗೆರೆ-ಮಧುಗಿರಿ ಈ ಭಾಗಕ್ಕೆ ನೀರಾವರಿ ಸೌಲಭ್ಯವನ್ನು ಹೆಚ್ಚಿನ ಪ್ರಮಾನದಲ್ಲಿ ಕಲ್ಪಿಸುವಂತೆ ಸಚಿವರಲ್ಲಿ ಮನವಿ ಮಾಡುತ್ತ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹೇಳಿದರು.
ಕೋಳಾಲ ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಪಕ್ಷ ಮೈತ್ರಿಯಿಂದಾಗಿ ಅನೇಕ ಕಡೆ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದು, ನಮ್ಮ ನಾಯಕರ ಆದೇಶದಂತೆ ತುಮಕೂರು ಲೋಕಸಭಾ ಕ್ಷೇತ್ರದ ಆಭ್ಯರ್ಥಿ ವಿ.ಸೋಮಣ್ಣ ಸಂಸದರಾಗಿ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದರು.ಜೆಡಿಎಸ್ ಕಾರ್ಯಾಧ್ಯಕ್ಷ ನರಸಿಂಹರಾಜು, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥರಿತರಿದ್ದರು.