ನರೇಂದ್ರ ಮೋದಿ ಕೊಡುಗೆ ದೇಶಕ್ಕೆ ಶೂನ್ಯ

KannadaprabhaNewsNetwork |  
Published : Apr 11, 2024, 12:45 AM IST
ನರೇಂದ್ರಮೋದಿ ಕೊಡುಗೆ ದೇಶಕ್ಕೆ ಶೂನ್ಯ : ಪಿ.ಮರಿಸ್ವಾಮಿ | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷವು ರೈತರು, ಬಡವರು, ಮಹಿಳೆಯರು, ಯುವಕರ ಪರ ಕೆಲಸ ಮಾಡುತ್ತಿದ್ದು, ನುಡಿದಂತೆ ನಡೆಯುತ್ತಿದೆ. ಆದರೆ ದೇಶದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನುಡಿದಂತೆ ನಡೆಯುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅವರ ಕೊಡುಗೆ ದೇಶಕ್ಕೆ ಶೂನ್ಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಡಾಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕಾಂಗ್ರೆಸ್ ಪಕ್ಷವು ರೈತರು, ಬಡವರು, ಮಹಿಳೆಯರು, ಯುವಕರ ಪರ ಕೆಲಸ ಮಾಡುತ್ತಿದ್ದು, ನುಡಿದಂತೆ ನಡೆಯುತ್ತಿದೆ. ಆದರೆ ದೇಶದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನುಡಿದಂತೆ ನಡೆಯುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಅವರ ಕೊಡುಗೆ ದೇಶಕ್ಕೆ ಶೂನ್ಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಡಾಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಎನ್‌ಎಸ್‌ಯುಐ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಪೂರ್ವ ಮೋದಿಯವರು ದೇಶದ ಪ್ರತಿಯೊಬ್ಬರ ಖಾತೆಗೆ ಹೊರದೇಶದಲ್ಲಿ ಕಪ್ಪುಹಣವನ್ನು ತಂದು ೧೫ ಲಕ್ಷ ಹಾಕುವುದಾಗಿ, ಪ್ರತಿ ವರ್ಷ ೨ ಕೋಟಿ ಯವಕರಿಗೆ ಉದ್ಯೋಗ ಕೊಡಿಸುವುದಾಗಿ ಹೇಳಿದ್ದರು, ಆದರೆ ಯಾರ ಖಾತೆಗೂ ನಯಾಪೈಸೆ ಜಮಾ ಮಾಡಲಿಲ್ಲಿ. ಒಂದು ಉದ್ಯೋಗ ಕೊಟ್ಟಿಲ್ಲ. ಮನಮೋಹನ್ ಸಿಂಗ್ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ದೇಶದಲ್ಲಿ ೭೨ ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದೆ. ಆದರೆ ಕಳೆದ ೧೦ ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಅದಾನಿ, ಅಂಬಾನಿ, ಶ್ರೀಮಂತರ ಸಾಲಮನ್ನಾ ಮಾಡುವ ಮೂಲಕ ರೈತರಿಗೆ ಮೋಸ ಮಾಡಿದೆ ದೂರಿದರು. ಜಿಲ್ಲೆಯಲ್ಲಿ ಎನ್‌ಎಸ್‌ಯುಐ ಜಿಲ್ಲಾ ಘಟಕ, ಯುವ ಘಟಕ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಇದರಿಂದ ಜಿಲ್ಲಾ ಕಾಂಗ್ರೆಸ್ ಸದೃಢವಾಗಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು, ಯುವಕರನ್ನು ಸಂಘಟಿಸಬೇಕು ಏ.೨೬ ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್‌ರನ್ನು ಅತ್ಯಧಿಕ ಮತಗಳಿಂದ ಜಯಶೀಲರನ್ನಾಗಿ ಮಾಡಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.

ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು:

ಎನ್‌ಯುಎಸ್‌ಐ ರಾಜ್ಯ ಉಪಾಧ್ಯಕ್ಷ ರಫೀಕ್ ಅಲಿ ಮಾತನಾಡಿ, ಬಿಜೆಪಿ ಸರ್ಕಾರ ಹಾಲು, ಮೊಸರು, ರಸಗೊಬ್ಬರ ಸೇರಿದಂತೆ ಇನ್ನಿತರ ವಸ್ತುಗಳ ಮೇಲೆ ಜಿಎಸ್‌ಟಿ ತಂದು ಜನರಿಗೆ ಅನ್ಯಾಯ ಮಾಡಿದೆ. ಇಡಿ, ಐಟಿ ಅಸ್ತ್ರ ಬಳಸಿಕೊಂಡು ಕಾಂಗ್ರೆಸ್ ನಾಯಕರ ಮೇಲೆ ಗಧಾಪ್ರಹಾರ ಮಾಡುತ್ತಿದೆ. ಒಂದು ಸುಳ್ಳುನ್ನು ೧೦ ಬಾರಿ ಹೇಳಿ ಸುಳ್ಳನ್ನು ನಿಜ ಮಾಡಲು ಹೊರಟಿದ್ದು, ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಬ್ಲಾಕ್ ಅಧ್ಯಕ್ಷರಾದ ಮಹಮದ್‌ ಅಸ್ಗರ್, ಅರಕಲವಾಡಿ ಗುರುಸ್ವಾಮಿ, ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಎನ್. ಲೋಕೇಶ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ದೊರೆರಾಜು, ಜಿಲ್ಲಾ ಕಾರ್ಯಾಧ್ಯಕ್ಷ ಹೊಸಹಳ್ಳಿ ಮಧುಸೂದನ್, ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರನಾಯಕ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೈಯದ್ ಮುಸೇಬ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಮೋಹನ್ ನಾಗು, ಜಿಲ್ಲಾ ಉಪಾಧ್ಯಕ್ಷ ಅಕ್ಷಯ್‌ಕುಮಾರ್, ಮುತ್ತುರಾಮು, ದತ್ತಗಿರ್, ಪ್ರಶಾಂತ್, ಶಿವರಾಜ್, ಭೋಗಾಪುರ ಪ್ರಜ್ವಲ್, ದರ್ಶನ್, ಪ್ರದೀಪ್, ನಾಗವಳ್ಳಿಹಾಲೇಶ್, ಅಪ್ಪು, ಆನಂತ್ ಹಾಜರಿದ್ದರು. ಎನ್‌ಎಸ್‌ಯುಐ ಜಿಲ್ಲಾ ಘಟಕ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ