ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ಹೊಸಪೇಟೆಯ ಪುನೀತ್ ರಾಜ್‌ಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಏ.28ರಂದು ಮಧ್ಯಾಹ್ನ 4 ಗಂಟೆಗೆ ಬಹಿರಂಗ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಈ ಭಾಗದಲ್ಲಿ ಬಿಜೆಪಿ ಪರ ಅಲೆ ಎಬ್ಬಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿದರು.
ಯಾದಗಿರಿಯ ಸುರಪುರದಲ್ಲಿ ಅಧಿಕಾರಿಗಳು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರೋಡ್ ಶೋ ನಡೆಸಲು ಅನುಮತಿ ನೀಡುತ್ತಿಲ್ಲ. ಕಾಂಗ್ರೆಸ್‌ಗೆ ನೀಡಿದ ಅನುಮತಿ, ಬಿಜೆಪಿಗೆ ಯಾಕೆ ಇಲ್ಲ? ಚುನಾವಣೆ ನೀತಿ ಸಂಹಿತೆ ಎಲ್ಲರಿಗೂ ಒಂದೇ ಆಗಿದೆ ಎಂದು ಯಾದಗಿರಿ ಎಸ್ಪಿಗೆ ತರಾಟೆ ತೆಗೆದುಕೊಂಡರು.
ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮೊಬೈಲ್ ಮೂಲಕ ಯಾದಗಿರಿ ಎಸ್ಪಿಗೆ ಕರೆ ಮಾಡಿ ಮಾತನಾಡಿದರು.ಕಾಂಗ್ರೆಸ್‌ಗೆ ಅನುಮತಿ ಕೊಡ್ತೀರಾ? ಬಿಜೆಪಿಗೆ ಅನುಮತಿ ಏಕೆ ಇಲ್ಲ ಅಂತಿದ್ದಾರೆ? ಪೊಲೀಸ್ ಇಲಾಖೆ ಅನುಮತಿ ಕೊಡಲ್ಲ ಅಂದರೆ ನಿಮಗೆ ಏನ್ ಹೇಳಬೇಕು? ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡಬಾರದು ಎಂದರು.
ಎಂಎಲ್ಸಿ ವೈ.ಎಂ. ಸತೀಶ್, ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತ, ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮತ್ತಿತರರಿದ್ದರು.