ಮತ್ತೊಮ್ಮೆ ಮೋದಿಗಾಗಿ ನಾರಿ ಶಕ್ತಿ ಮ್ಯಾರಾಥಾನ್

KannadaprabhaNewsNetwork | Published : Mar 5, 2024 1:32 AM

ಸಾರಾಂಶ

ಮಹಿಳೆಯರು ಸಹ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಸೇವೆ ಜೊತೆಗೆ ಈ ದೇಶದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರವನ್ನು ವಹಿಸಬಹುದು, ಮಹಿಳೆಯರ ಸಬಲೀಕರಣಕ್ಕೆ ಶಕ್ತಿ ತುಂಬಿದ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗಬೇಕು.

ಕನ್ನಡಪ್ರಭ ವಾರ್ತೆ ಕನಕಪುರ

ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ತಂದು ಮಹಿಳಾ ಸಬಲೀಕರಣಕ್ಕೆ ಶಕ್ತಿ ತುಂಬಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಆಯ್ಕೆ ಮಾಡಬೇಕು ಎಂದು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ ಮನವಿ ಮಾಡಿದರು.

ನಗರದ ಚನ್ನಬಸಪ್ಪ ವೃತ್ತದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಆಯೋಜಿಸಿದ್ದ ನಾರಿ ಶಕ್ತಿ ವಂದನ್ ರಾಷ್ಟ್ರಕ್ಕಾಗಿ, ಮೋದಿಗಾಗಿ ಓಟ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಜೀಯವರು ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ತಂದುಕೊಟ್ಟು ಕೊಟ್ಟಿದ್ದಾರೆ, ಮಹಿಳೆಯರು ಸಹ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಸೇವೆ ಜೊತೆಗೆ ಈ ದೇಶದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರವನ್ನು ವಹಿಸಬಹುದು, ಮಹಿಳೆಯರ ಸಬಲೀಕರಣಕ್ಕೆ ಶಕ್ತಿ ತುಂಬಿದ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗಬೇಕು ಎಂದು ಕರೆ ನೀಡಿದರು.

ನಾರಿ ಶಕ್ತಿ ವಂದನ್ ಮ್ಯಾರಥಾನ್ ಮತ್ತು ರಾಷ್ಟ್ರಕ್ಕಾಗಿ ಮೋದಿಗಾಗಿ ಓಟ ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು, ಮುಖಂಡರು ನಗರದ ಅಯ್ಯಪ್ಪ ಸ್ವಾಮಿ ದೇವಾಲಯದಿಂದ ಚನ್ನಬಸಪ್ಪ ವೃತ್ತದವರೆಗೂ ಜಾಥಾ ನಡೆಸಿ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಹಾಗೂ ಮೋದಿ ಪರ ಘೋಷಣೆಗಳನ್ನು ಕೂಗಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಗ್ರಾಮಾಂತರ ಮಹಿಳಾ ಘಟಕದ ಅಧ್ಯಕ್ಷೆ ಮಮತಾ, ಬಿಜೆಪಿ ನಗರ ಘಟಕದ ಅಧ್ಯಕ್ಷ ಮಂಜುನಾಥ್, ಗ್ರಾಮಾಂತರ ಮಂಡಲ ಅಧ್ಯಕ್ಷ ಮುರಳೀಧರ್, ಜಿಲ್ಲಾ ಉಪಾಧ್ಯಕ್ಷ ಕೋಟೆ ರಾಜೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಜಿಲ್ಲಾ ಯುವ ಮೋರ್ಚ ಅಧ್ಯಕ್ಷ ಜಗನ್ನಾಥ್, ಜಿಲ್ಲಾ ರೈತ ಮೋರ್ಚಾ ಪ್ರ. ಕಾರ್ಯದರ್ಶಿ ನಾಗನಂದ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್, ರಾಜೇಶ್ ,ಯುವ ಮೋರ್ಚ ಸುನಿಲ್, ಶಿವಮುತ್ತು ಆಟೋ ಕುಮಾರ್, ರಾಯಸಂದ್ರ ಮರಿಗೌಡ ,ಕೋಟೆ ಕೃಷ್ಣಪ್ಪ, ಸಾಮಾಜಿಕ ಜಾಲತಾಣ ಸಂಚಾಲಕ ಡಿಕೆ ಭರತ್ ಸೇರಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

Share this article