ಮದ್ದೂರಿನಲ್ಲಿ ನಾರಿ ಶಕ್ತಿ ವಂದನಾ ಕಾರ್ಯಕ್ರಮ ಯಶಸ್ವಿ

KannadaprabhaNewsNetwork |  
Published : Mar 07, 2024, 01:49 AM IST
6ಕೆಎಂಎನ್ ಡಿ19 | Kannada Prabha

ಸಾರಾಂಶ

ಸರ್ವರಿಗೂ ಸಮಪಾಲು. ಸರ್ವರಿಗೂ ಸಮಬಾಳು ಎಂಬ ಆದರ್ಶ ಸಿದ್ಧಾಂತವನ್ನು ಅಳವಡಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬಡವರ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಲು ಮಹತ್ವಪೂರ್ಣ ಹೆಜ್ಜೆ ಇಟ್ಟಿದ್ದಾರೆ. ಕೇಂದ್ರ ಕೇಂದ್ರ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸುವ ಉದ್ದೇಶದಿಂದ ನಾರಿಶಕ್ತಿ ವಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸುವ ನಾರಿ ಶಕ್ತಿ ವಂದನಾ ಕಾರ್ಯಕ್ರಮ ಬುಧವಾರ ಯಶಸ್ವಿಯಾಗಿ ಜರುಗಿತು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಡಲ ಘಟಕ ಹಾಗೂ ಮಹಿಳಾ ಮೋರ್ಚಾದಿಂದ ನಡೆದ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಪಾಲ್ಗೊಂಡು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಹತ್ತು ವರ್ಷಗಳ ಸಾಧನೆ ಕುರಿತು ವರ್ಚುಯಲ್ ಮೂಲಕ ಮಾಡಿದ ಭಾಷಣವನ್ನು ವೀಕ್ಷಿಸಿದರು.

ಕಾರ್ಯಕ್ರಮಕ್ಕೆ ಜಂಟಿ ಚಾಲನೆ ನೀಡಿದ ರಾಜ್ಯ ಹಾಲು ಪ್ರಕೋಸ್ಟದ ಸಹ ಸಂಚಾಲಕಿ ರೂಪ ಹಾಗೂ ಮಂಡಲದ ಅಧ್ಯಕ್ಷ ಸಿ.ಕೆ. ಸತೀಶ್ ಮಾತನಾಡಿ, ಸರ್ವರಿಗೂ ಸಮಪಾಲು. ಸರ್ವರಿಗೂ ಸಮಬಾಳು ಎಂಬ ಆದರ್ಶ ಸಿದ್ಧಾಂತವನ್ನು ಅಳವಡಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಬಡವರ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜನರಿಗೆ ತಲುಪಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಲು ಮಹತ್ವಪೂರ್ಣ ಹೆಜ್ಜೆ ಇಟ್ಟಿದ್ದಾರೆ ಎಂದು ಬಣ್ಣಿಸಿದರು.

ಕೇಂದ್ರ ಕೇಂದ್ರ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸುವ ಉದ್ದೇಶದಿಂದ ನಾರಿಶಕ್ತಿ ವಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರಿಗೆ ಬಿಜೆಪಿ ಮಂಡಲದ ವತಿಯಿಂದ ಪ್ರಧಾನಿ ಮೋದಿ ಜಾರಿಗೆ ತಂದಿರುವ ಭಾರತ್ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಲಲಿತಮ್ಮ ಸಿದ್ದರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಂಧು, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷ ಶ್ವೇತಾ ಅಶೋಕ್, ಮಹಿಳಾ ಘಟಕದ ಪೂರ್ಣಿಮಾ, ಕೋಮಲ, ಸವಿತಾ, ಶಶಿಕಲಾ, ಪ್ರಮೀಳಾ, ಹೇಮಾ, ಮಮತಾ ರಾಂಕ, ಎಂ.ಸಿ.ಸಿದ್ದು, ಬುಲೆಟ್ ಬಸವರಾಜು, ತ್ರಿವೇಣಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ
ತೈಲ ಕೊರತೆ ವದಂತಿ: ಖರೀದಿಗೆ ಮುಗಿಬಿದ್ದ ಜನ-ಬಂಕ್‌ಗಳಲ್ಲಿ ಭಾರೀ ರಷ್‌