ಕನ್ನಡಪ್ರಭ ವಾರ್ತೆ ಉಡುಪಿ
ಗುಜರಾತ್ ಅಹಮದಾಬಾದ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಖಾತೆ ಸಚಿವ ಪರ್ಷೋತ್ತಮ ರೂಪಾಲ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಸಮಾರಂಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಅರ್. ಪಟೇಲ್, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ ರಾಜ್ಯ ಸಚಿವ ಎಲ್.ಮುರುಗನ್, ಡಾ.ಸಂಜೀವ್ ಬಲ್ಯಾನ್, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಇದ್ದರು.ಮೀನು ಮಾರಾಟ ಫೆಡರೇಶನ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 85 ಸಾವಿರ ಸದಸ್ಯರು ಹಾಗೂ 73 ಸದಸ್ಯ ಸಹಕಾರಿ ಸಂಸ್ಥೆಗಳನ್ನು ಒಳಗೊಂಡಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೀನುಗಾರಿಕೆಗೆ ಸಂಬಂಧಿ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನ, ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ - ವಿದ್ಯಾರ್ಥಿ ವೇತನ, ಆರೋಗ್ಯ ವಿಮೆ, ಮೀನುಗಾರಿಕೆ ಚಟುವಟಿಕೆಗಳಿಗೆ ಪ್ರೋತ್ಸಾಹ, ಮತ್ಸ್ಯಮೇಳ ಆಯೋಜನೆ ಮೂಲಕ ಮೀನುಗಾರಿಕೆ ಉತ್ನನ್ನಗಳಿಗೆ ಪ್ರೋತ್ಸಾಹ ಸಹಿತ ಸಮಾಜಮುಖಿ ಕಾರ್ಯಕ್ರಮಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.