ರಾಷ್ಟ್ರೀಯ ಡೆಂಘೀ ದಿನಾಚರಣೆ ಹೊಸಪೇಟೆಯಲ್ಲಿ ಜಾಗೃತಿ ಜಾಥಾ

KannadaprabhaNewsNetwork |  
Published : May 17, 2024, 12:34 AM IST
16ಎಚ್‌ಪಿಟಿ4- ಹೊಸಪೇಟೆಯಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಸದಾಶಿವಪ್ರಭು ಬಿ. ಅವರು ಗುರುವಾರ ಚಾಲನೆ ನೀಡಿದರು.  ಡಿಎಚ್‌ಒ ಡಾ.ಶಂಕರ ನಾಯ್ಕ ಮತ್ತಿತರರಿದ್ದರು. | Kannada Prabha

ಸಾರಾಂಶ

ಡೆಂಘೀ ಜ್ವರವನ್ನು ಜನರು ನಿರ್ಲಕ್ಷಿಸದೇ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು. ಡೆಂಘೀ ಜ್ವರದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು.

ಹೊಸಪೇಟೆ: ರಾಷ್ಟ್ರೀಯ ಡೆಂಘೀ ದಿನಾಚರಣೆ ನಿಮಿತ್ತ ಜಿಲ್ಲಾಡಳಿತದಿಂದ ಸಮುದಾಯದೊಂದಿಗೆ ಸೇರಿ ಡೆಂಘೀ ನಿಯಂತ್ರಿಸೋಣ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ ನಗರದಲ್ಲಿ ಗುರುವಾರ ನಡೆಯಿತು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಸದಾಶಿವ ಪ್ರಭು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಡೆಂಘೀ ಜ್ವರವನ್ನು ಜನರು ನಿರ್ಲಕ್ಷಿಸದೇ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಬೇಕು. ಡೆಂಘೀ ಜ್ವರದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು. ಮುಂಗಾರು ಪೂರ್ವ, ಮುಂಗಾರು ಮತ್ತು ಮುಂಗಾರಿನ ನಂತರದ ಸಮಯದಲ್ಲಿ ಡೆಂಘೀ ಸೊಳ್ಳೆಗಳ ಸಂತತಿಯು ತೀವ್ರ ಪ್ರಮಾಣದಲ್ಲಿ ಇದ್ದು ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಶಂಕರ ನಾಯ್ಕ ಮಾತನಾಡಿ, ರೋಗಗಳು ಬಂದಮೇಲೆ ಚಿಕಿತ್ಸೆ ನೀಡುವ ಬದಲಿಗೆ ಬರುವ ಮುಂಚೆ ಅದರ ಮುಂಜಾಗ್ರತೆ ವಹಿಸುವುದು ಸೂಕ್ತ. ಜನರು ಮನೆಯಲ್ಲಿ ಶೇಖರಿಸಿದ ನೀರನ್ನು ಆಗಾಗ ಬದಲಾಯಿಸುತ್ತಿರಬೇಕು. ಈ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು ಹಾಗೂ ಡೆಂಘೀ ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಈ ವೇಳೆ ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ, ಬೆಳಗಾವಿಯ ಡಾ.ಸಿದ್ದಲಿಂಗಯ್ಯ, ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಈಡೀಸ್ ಈಜಿಪೈ ಸೊಳ್ಳೆಯ ಕಚ್ಚುವಿಕೆಯಿಂದ ಡೆಂಘೀ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನಭಿವೃದ್ಧಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ತಕ್ಷಣವೇ ಆಶಾ, ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಿರಿ ಎನ್ನುವ ಮಾಹಿತಿಯ ಕರಪತ್ರಗಳನ್ನು ಇದೇ ವೇಳೆ ಸಾರ್ವಜನಿಕರಿಗೆ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ