ರಾಯಚೂರು: ಪರಿಶೀಲನೆ, ಸ್ವಚ್ಚಗೊಳಿಸಿ, ಮುಚ್ಚಿಡಿ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ರಾಷ್ಟ್ರೀಯ ಡೆಂಘೀ ದಿನ ಆಚರಿಸಲಾಗುತ್ತಿದೆ ಎಂದು ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಗಣೇಶ ತಿಳಿಸಿದರು.
ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಆಯೋಜಿಸಿರುವ ಜಾಥಾವು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ ಪ್ರಾರಂಭವಾಗಿ ಭಗತ್ಸಿಂಗ್ ವೃತ್ತದ ಮಾರ್ಗವಾಗಿ ತಿನ್ಕಂದಿಲ್, ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಮೂಲಕ ಮಹಾವಿರ ವೃತ್ತದವರೆಗೆ ಸಾಗಿತು.
ಈ ವೇಳೆ ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿ ಡಾ.ಎಂ.ಡಿ.ಶಾಕೀರ್, ಮನೋರೊಗ ತಜ್ಞರಾದ ಡಾ.ಮನೊಹರ್ ಪತ್ತಾರ್, ಸಂಧ್ಯಾ ನಾಯಕ ಸೇರಿದಂತೆ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿ ಇದ್ದರು. ಧ್ವನಿವರ್ಧಕಗಳ ಮೂಲಕ ಜಾಗೃತಿರ್ಯಾಯಲ್ಲಿ ಡೆಂಘೀ, ಚಿಕುನ್ಗುನ್ಯ ಅರಿವು ಮೂಡಿಸುವ ಫಲಕಗಳು ಗಮನ ಸೆಳೆದವು. ಡೆಂಘೀ ರೋಗವು ಈಡೀಸ್ ಈಜಿಪ್ತಿ ಸೊಳ್ಳೆಗಳಿಂದ ಹರಡುತ್ತದೆ. ಇದೊಂದು ಮಾರಣಾಂತಿಕ ಕಾಯಿಲೆಯಾಗಿದೆ. ಜ್ವರ ಬಂದ ಕೂಡಲೇ ರಕ್ತ ತಪಾಸಣೆ ಮಾಡಿಸಬೇಕು. ಮನೆಯ ಸುತ್ತ-ಮುತ್ತ ಕಲುಷಿತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಿರ್ಮೂಲನೆಗೊಳಿಸಿ, ಸೊಳ್ಳೆಗಳ ಬೆಳವಣಿಗೆ ನಿಯಂತ್ರಿಸಿದಲ್ಲಿ ಡೆಂಘೀ ಹಾಗೂ ಇತರ ಸೊಳ್ಳೆ ಜನಿತ ರೋಗಗಳಾದ ಚಿಕುನ್ ಗುನ್ಯ, ಆನೆ ಕಾಲು ರೋಗ, ಮಲೇರಿಯಾ ರೋಗಗಳನ್ನು ನಿಯಂತ್ರಿಸಬಹುದು ಎನ್ನುವ ಮಾಹಿತಿಯನ್ನು ಧ್ವನಿವರ್ಧಕಗಳ ಮೂಲಕ ನೀಡಲಾಯಿತು.ಡೆಂಘೀ ನಿಯಂತ್ರಣಕ್ಕೆ ಎಲ್ಲರಸಹಕಾರ ಅಗತ್ಯ: ಯಲ್ಲಾಲಿಂಗಸಿರವಾರ: ಮಳೆಗಾಲ ಪ್ರಾರಂಭವಾಗಿದ್ದು, ವಾರ್ಡ್‌ಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಿಬೇಕು ಇಲ್ಲವಾದರೆ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ ಹರಡುವ ಸಾಧ್ಯತೆ ಹೆಚ್ಚಾಗಿತ್ತದೆ, ಡೆಂಘೀ ಜ್ವರ ನಿಯಂತ್ರಣವು ಎಲ್ಲರ ಜವಾಬ್ದಾರಿಯಾಗಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಯಲ್ಲಾಲಿಂಗ ಪೂಜಾರಿ ಹೇಳಿದರು.ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ ಅಂಗವಾಗಿ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ನೀರಿನ ಸ್ವಚ್ಛತೆಯ ಬಗ್ಗೆ ಮತ್ತು ನೀರಿನಲ್ಲಿ ಉತ್ಪತ್ತಿ ಯಾಗುವ ಸೊಳ್ಳೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ನೀರು ಸಂಗ್ರಹ ಮಾಡುತ್ತಿರುವ ತೊಟ್ಟಿಗಳಲ್ಲಿ ಪ್ರತಿದಿನ ನೀರು ಬದಲಿಸಲು ಸೂಚಿಸಬೇಕು ಎಂದರು.ಆರೋಗ್ಯ ಶಿಕ್ಷಣಾಧಿಕಾರಿ ಶ್ರೀದೇವಿ ಮಾತನಾಡಿದರು. ನಂತರ ವಿವಿಧ ವಾರ್ಡ್‌ಗಳಲ್ಲಿ ಜಾಗೃತಿ ಕಾರ್ಯಕ್ರಮ ಮಾಡಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ನೀಲಮ್ಮ, ಶುಶ್ರೂಷಕಿ ರಂಗಮ್ಮ, ರಾಕೇಶ , ಜರೀನಾ, ಲೀಲಾವತಿ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಮತ್ತು ಮಕ್ಕಳು ಭಾಗವಹಿಸಿದ್ದರು.