- ಮಾನವ ಹಕ್ಕುಗಳು, ಮಾಹಿತಿ ಹಕ್ಕು ಕಾಯ್ದೆ, ಪ್ರಜಾಪ್ರಭುತ್ವ ವಿಷಯದ ಉಪನ್ಯಾಸ
ಕನ್ನಡಪ್ರಭ ವಾರ್ತೆ ದಾವಣಗೆರೆ
ಮಾನವ ಹಕ್ಕುಗಳು ವ್ಯಕ್ತಿಯ ಗೌರವ ಕಾಪಾಡುತ್ತವೆ. ಮಾಹಿತಿ ಹಕ್ಕು ನಾಗರೀಕರಿಗೆ ಅಧಿಕಾರ ನೀಡುತ್ತದೆ. ಪ್ರಜಾಪ್ರಭುತ್ವ ಜನರಿಗೆ ಆಡಳಿತದಲ್ಲಿ ಪಾಲ್ಗೊಳ್ಳುವ ಅವಕಾಶ ನೀಡುತ್ತದೆ. ಈ ಮೂರು ಅಂಶಗಳು ಬಲವಾಗಿ ಇದ್ದಾಗ ಮಾತ್ರ ನ್ಯಾಯಯುತ, ಪಾರದರ್ಶಕ ಮತ್ತು ಜವಾಬ್ದಾರಿಯುತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಿ.ರಂಗೇಗೌಡ ತಿಳಿಸಿದರು.ನಗರದ ಎವಿಕೆ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಗರದ ಎ.ವಿ.ಕಮಲಮ್ಮ ಮಹಿಳಾ ಕಾಲೇಜಿನ ಐಕ್ಯೂಎಸಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾನವ ಹಕ್ಕುಗಳು, ಮಾಹಿತಿ ಹಕ್ಕು ಕಾಯ್ದೆ ಹಾಗೂ ಸಮಾನ ಅವಕಾಶಗಳ ಕೋಶ ಮತ್ತು ರಾಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ನಡೆದ ಮಾನವ ಹಕ್ಕುಗಳು, ಮಾಹಿತಿ ಹಕ್ಕು ಕಾಯ್ದೆ ಮತ್ತು ಪ್ರಜಾಪ್ರಭುತ್ವ ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎವಿಕೆ ಕಾಲೇಜಿನ ಪ್ರಾಚಾರ್ಯೆ ಪ್ರೊ. ಜೆ.ಅನಿತಾ ಕುಮಾರಿ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕರಾದ ಡಾ. ಬಿ.ಜೆ.ರುದ್ರೇಶ್, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಜಿ.ಇ.ಗಣೇಶಪ್ಪ, ಎಸ್.ಚಿತ್ರ, ಸಹಾಯಕ ಪ್ರಾಧ್ಯಾಪಕ ಡಾ.ವಿಶ್ವನಾಥ್, ಡಾ.ಆರ್.ಜಿ.ಕವಿತಾ, ಡಾ.ಕೆ.ಗುರುರಾಜ್ ಸೇರಿದಂತೆ ಬೋಧಕ, ಬೋಧಕೇತರ ವರ್ಗದವರು, ವಿದ್ಯಾರ್ಥಿನಿಯರು ಇದ್ದರು.
- - -
* ಹಕ್ಕುಗಳು, ಪ್ರಜಾಪ್ರಭುತ್ವ ಪರಿಣಾಮಕಾರಿ ಜಾರಿ ಅಗತ್ಯ
- - -
ದಾವಣಗೆರೆಯ ಎವಿಕೆ ಮಹಿಳಾ ಕಾಲೇಜಿನಲ್ಲಿ ನಡೆದ ಮಾನವ ಹಕ್ಕುಗಳು, ಮಾಹಿತಿ ಹಕ್ಕು ಕಾಯ್ದೆ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನ್ಯಾಯಾಧೀಶ ಸಿ.ರಂಗೇಗೌಡ ಉದ್ಘಾಟಿಸಿದರು.