ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಆಚರಣೆ

KannadaprabhaNewsNetwork |  
Published : Dec 16, 2024, 12:47 AM IST
ನಗರದ ಮಹಾತ್ಮ ಗಾಂಧಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಾದ್ಯಂತ ೧ ರಿಂದ ೧೯ ವರ್ಷದ ಎಲ್ಲ ಮಕ್ಕಳಿಗೆ ಅಂಗನವಾಡಿ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಜಂತುಹುಳ ನಾಶಕ ಮಾತ್ರೆಯನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತದೆ. ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದಂದು ಜಂತುಹುಳು ನಾಶಕ ಮಾತ್ರೆ ನೀಡದೇ ಬಾಕಿ ಇರುವ ಮಕ್ಕಳಿಗೆ ಡಿ.೧೬ ರಂದು ಮಾಪ-ಆಫ್ ದಿನದಂದು ಮಾತ್ರೆಗಳನ್ನು ನೀಡಲಾಗುತ್ತದೆ. ಎಲ್ಲ ಮಕ್ಕಳು ಸದರಿ ಮಾತ್ರೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಕೆ.ಡಿ.ಗುಂಡಬಾವಡಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಾದ್ಯಂತ ೧ ರಿಂದ ೧೯ ವರ್ಷದ ಎಲ್ಲ ಮಕ್ಕಳಿಗೆ ಅಂಗನವಾಡಿ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಜಂತುಹುಳ ನಾಶಕ ಮಾತ್ರೆಯನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತದೆ. ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದಂದು ಜಂತುಹುಳು ನಾಶಕ ಮಾತ್ರೆ ನೀಡದೇ ಬಾಕಿ ಇರುವ ಮಕ್ಕಳಿಗೆ ಡಿ.೧೬ ರಂದು ಮಾಪ-ಆಫ್ ದಿನದಂದು ಮಾತ್ರೆಗಳನ್ನು ನೀಡಲಾಗುತ್ತದೆ. ಎಲ್ಲ ಮಕ್ಕಳು ಸದರಿ ಮಾತ್ರೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಕೆ.ಡಿ.ಗುಂಡಬಾವಡಿ ಹೇಳಿದರು.

ನಗರದ ಮಹಾತ್ಮ ಗಾಂಧಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಂತುಹುಳು ಭಾದೆಯಿಂದ ಮಕ್ಕಳು ಅಪೌಷ್ಟಿಕತೆ, ರಕ್ತಹೀನತೆ, ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಮಕ್ಕಳ ಮತ್ತು ಹದಿಹರೆಯದವರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿ ಆರು ತಿಂಗಳಿಗೊಮ್ಮೆ ಅಲ್ಬೆಂಡೊಝೋಲ್ ಮಾತ್ರೆಯನ್ನು ಕಡ್ಡಾಯವಾಗಿ ಸೇವಿಸಬೇಕು ಎಂದು ಹೇಳಿದರು.

ಡಾ.ಮಂಜುನಾಥ ಪೋಳ ಜಂತು ಹುಳು ಸೋಂಕಿನ ಲಕ್ಷಣ ಹಾಗೂ ದುಷ್ಟಪರಿಣಾಮಗಳ ಬಗ್ಗೆ ತಿಳಿಸಿದರು.

ಅಧ್ಯಕ್ಷತೆ ಮಹಾತ್ಮ ಗಾಂಧಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಅಧ್ಯಕ್ಷ ಎಸ್.ಟಿ.ಪೋಳ ವಹಿಸಿದ್ದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಮಾಹದೇವ ನೀಲಂಗಿ, ಎನ್.ಬಿ.ಚೌಧರಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ ಶಾಲಾ ಶಿಕ್ಷಕರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಸಾವಿತ್ರಿ ಹಿಪ್ಪರಗಿ ನಿರೂಪಿಸಿದರು ಮತ್ತು ಪಿ.ಬಿ ಜೋಗಣ್ಣವರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ