ಹಾರೋಹಳ್ಳಿ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ವೈದ್ಯರ ದಿನ

KannadaprabhaNewsNetwork |  
Published : Jul 03, 2026, 01:15 AM IST
2ಕೆಆರ್ ಎಂಎನ್ 5.ಜೆಪಿಜಿಹಾರೋಹಳ್ಳಿಯ  ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ವೈದ್ಯರ ದಿನ ಆಚರಿಸಲಾಯಿತು. | Kannada Prabha

ಸಾರಾಂಶ

ಹಾರೋಹಳ್ಳಿ: ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಮಾರ್ಡರ್ನ್ ಆಂಗ್ಲ ಶಾಲೆಯ ವತಿಯಿಂದ ರಾಷ್ಟ್ರೀಯ ವೈದ್ಯರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು

ಹಾರೋಹಳ್ಳಿ: ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಮಾರ್ಡರ್ನ್ ಆಂಗ್ಲ ಶಾಲೆಯ ವತಿಯಿಂದ ರಾಷ್ಟ್ರೀಯ ವೈದ್ಯರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ದೈಹಿಕ ಶಿಕ್ಷಣ ಶಿಕ್ಷಕಿ ರೇಖಾ ಮಾತನಾಡಿ, ವೈದ್ಯರು ಸಮಾಜದ ನಿಜವಾದ ಜೀವ ರಕ್ಷಕರು. ತಮ್ಮ ವೈಯಕ್ತಿಕ ಸುಖ-ಸೌಕರ್ಯಗಳನ್ನು ಬದಿಗೊತ್ತಿ, ಹಗಲು-ರಾತ್ರಿ ಎನ್ನದೆ ರೋಗಿಗಳ ಸೇವೆಯಲ್ಲಿ ತೊಡಗಿರುತ್ತಾರೆ. ವೈದ್ಯರ ಸೇವೆ ಮಾನವೀಯತೆಯ ಅತ್ಯುನ್ನತ ಉದಾಹರಣೆ. ಪ್ರತಿಯೊಬ್ಬರೂ ಅವರ ಸೇವೆಯನ್ನು ಗೌರವಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವೈದ್ಯರ ಸಲಹೆಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಆರೋಗ್ಯಕರ ಜೀವನಶೈಲಿಯ ಅಗತ್ಯ, ರೋಗಗಳ ತಡೆಗಟ್ಟುವಿಕೆ ಹಾಗೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯಬೇಕು. ಶಾಲೆಯ ಪ್ರತಿನಿಧಿಗಳು ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಕೊಡುಗೆ ಅನನ್ಯವಾಗಿದ್ದು, ಅವರ ನಿಸ್ವಾರ್ಥ ಸೇವೆ ಸದಾ ಸ್ಮರಣೀಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಡಾ. ಸೋನಿಯಾ, ಸಾವಿತ್ರಿ, ಸೀತಾ, ಅರ್ಚನಾ, ಶ್ರೀವತ್ಸ ಹಾಗೂ ಮಾರ್ಡರ್ನ್ ಆಂಗ್ಲ ಶಾಲೆಯ ಕಾರ್ಯದರ್ಶಿ ಶ್ರೀಮತಿ ಉಷಾ ರಘುರಾಮ್ ಗೌಡ, ಟ್ರಸ್ಟಿ ಚಂದ್ರುಮುಖ್ಯ ಶಿಕ್ಷಕಿ ಪುಷ್ಪಲತಾ , ಸಹ ಶಿಕ್ಷಕರಾದ ನಂದಿತಾ ಸೌಜನ್ಯ ಉಪಸ್ಥಿತರಿದ್ದರು.2ಕೆಆರ್ ಎಂಎನ್ 5.ಜೆಪಿಜಿ

ಹಾರೋಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ವೈದ್ಯರ ದಿನ ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಂಪೇಗೌಡ ಜಯಂತಿ ವೇಳೆ ಗದ್ದಲ: ಸಂಸದ ಸುಧಾಕರ್‌ ವಿರುದ್ಧ ತನಿಖೆಗೆ ಆಗ್ರಹ
ಫ.ಗು. ಹಳಕಟ್ಟಿ ಸೇವೆ ಅವಿಸ್ಮರಣೀಯ: ಅಪರ ಡಿಸಿ ಡಾ. ಭಾಸ್ಕರ್