ಇಂದಿನಿಂದ ಪ್ರಾರಂಭಗೊಳ್ಳಲಿರುವ ರಾಷ್ಟ್ರೀಯ ನಾಟಕೋತ್ಸವಕ್ಕೆ ಸಾಣೇಹಳ್ಳಿ ನವ ವಧುವಿನಂತೆ ಶೃಂಗಾರಗೊಂಡಿದೆ.
ಹೊಸದುರ್ಗ: ಇಂದಿನಿಂದ ಪ್ರಾರಂಭಗೊಳ್ಳಲಿರುವ ರಾಷ್ಟ್ರೀಯ ನಾಟಕೋತ್ಸವಕ್ಕೆ ಸಾಣೇಹಳ್ಳಿ ನವ ವಧುವಿನಂತೆ ಶೃಂಗಾರಗೊಂಡಿದೆ.
ಶ್ರೀ ಮಠದ ಮುಖ್ಯ ರಸ್ತೆಯ ಉದ್ದಕ್ಕೂ ಬಣ್ಣಬಣ್ಣದ ವಿದ್ಯುತ್ ದೀಪಾಲಂಕಾರ ಹಾಗೂ ಹಸಿರು ತೋರಣಗಳಿಂದ ಶೃಂಗರಿಸಲಾಗಿದೆ. ಶಿವಕುಮಾರ ಬಯಲು ರಂಗಮಂದಿರ, ಎಸ್‌ಎಸ್ ಒಳಾಂಗಣ ರಂಗಮಂದಿರ ಹಾಗೂ ಅದರ ಸುತ್ತಾ ಇರುವ ಉದ್ಯಾನವನ ಬಣ್ಣ ಬಣ್ಣ ಕಣ್ಮನತಣಿಸುವ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.ಶ್ರೀ ಮಠದಿಂದ ಬಯಲು ರಂಗಮಂದಿರದವರೆಗೂ ವಚನಗಳ ಭಿತ್ತಿ ಫಲಕಗಳು, ಪುಸ್ತಕ ಬಂಡಾರ, ಆರೋಗ್ಯ ಮಾರ್ಗದರ್ಶಿ ಸೇರಿದಂತೆ ವಿವಿಧ ವಸ್ತುಗಳ ಮಾರಾಟದ ಮಳಿಗೆಗಳು ತೆರೆದುಕೊಂಡಿವೆ.ಪ್ರತಿ ವರ್ಷದಂತೆ ಈ ಬಾರಿ ಯುಗದ ಉತ್ಸಾಹವ ನೋಡಿರೇ ಎಂಬ ಆಶಯದೊಂದಿಗೆ ಜನರ ಮನಸ್ಸನ್ನು ಚಿಂತನೆಗೆ ಒಳಪಡಿಸುವ, ಸೃಜನಾಶೀಲತೆಯನ್ನು ಹುಟ್ಟುಹಾಕುವ, ಬಂಡಾಯದ ಗುಣ ಬೆಳಸುವ, ಸ್ವ ವಿಮರ್ಶೆ ಮಾಡಿಕೊಳ್ಳುವ ಹಲವು ಬಗೆಯಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವಂತಹ ನಾಟಕ ಹಾಗೂ ವಿಚಾರ ಸಂಕಿರಣಗಳು ನಡೆಯಲಿವೆ.ಶಿವಕುಮಾರ ಬಯಲು ರಂಗಮಂದಿರದಲ್ಲಿ ಮುಖ್ಯ ವೇದಿಕೆ ಕಾರ್ಯಕ್ರಮ ಮತ್ತು ನಾಟಕಗಳ ಪ್ರದರ್ಶನ ನಡೆಯಲಿದ್ದು, ಶಿವಕುಮಾರ ರಂಗಮಂದಿರದಲ್ಲಿ ಪ್ರತಿದಿನ ಬೆಳಗ್ಗೆ ಪ್ರಾರ್ಥನಾ ಕಾರ್ಯಕ್ರಮಗಳು ಜರುಗಲಿವೆ.ನಾಟಕೋತ್ಸವ ಪ್ರಮುಖವಾಗಿ ಕನ್ನಡ ರಾಜ್ಯೋತ್ಸವ, ವಿಚಾರ ಮಾಲಿಕೆ, ವಿಚಾರ ಸಂಕಿರಣ, ಶ್ರೀ ಶಿವಕುಮಾರ ಪ್ರಶಸ್ತಿ ಪ್ರದಾನ, ಕೃತಿಗಳ ಲೋಕಾರ್ಪಣೆ, ಸಾಮೂಹಿಕ ಪ್ರಾರ್ಥನೆ, ಶಿವಮಂತ್ರ ಲೇಖನ, ಚಿಂತನ, ವಚನಗೀತೆ, ನೃತ್ಯ ರೂಪಕಗಳು, ಉಪನ್ಯಾಸ, ಅಭಿನಂದನೆ, ಆಶೀರ್ವಚನ, ನಾಟಕ ಪ್ರದರ್ಶನಗಳನ್ನು ಒಳಗೊಂಡಿದೆ.ನಾಟಕೋತ್ಸವದಲ್ಲಿ ಶಿವಸಂಚಾರದ ಜಂಗಮದೆಡೆಗೆ, ಕಳ್ಳರಸಂತೆ, ಶಿವಯೋಗಿ ಸಿದ್ದರಾಮೇಶ್ವರ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಕಲಾವಿದರು ನಟಿಸುವರಾಳಿದ ಮಾಸ್ವಾಮಿಗಳು, ಚಾರುವಸಂತ, ಗಾಂಧೀ ಜಯಂತಿ ಸೇರಿದಂತೆ ಈ ಬಾರಿ ಒಟ್ಟು 6 ನಾಟಕಗಳು ಪ್ರದರ್ಶನಗೊಳ್ಳಲಿವೆ.ಈ ಬಾರಿಯ ರಾಷ್ಟ್ರೀಯ ನಾಟಕೋತ್ಸವವನ್ನು ಭಾರತ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಉದ್ಘಾಟಿಸುವರು. ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಶಿವಸಂಚಾರ ನಾಟಕಗಳನ್ನು ಹಾಗೂ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕನ್ನಡ ರಾಜ್ಯೋತ್ಸವ ಉದ್ಘಾಟಿಸುವರು. ಶೇಗುಣಸಿ ವಿರಕ್ತ ಮಠದ ಮಹಾಂತಪ್ರಭು ಸ್ವಾಮೀಜಿ ಸಾನಿಧ್ಯವಹಿಸುವರು. ಸಂಸದ ಗೋವಿಂದ ಕಾರಜೋಳ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಉದ್ಯಮಿ ರುದ್ರೇಗೌಡ, ಹೊಳಲ್ಕೆರೆ ಶಾಸಕ ಚಂದ್ರಪ್ಪ, ದಾವಣಗೆರೆ ಎಸ್.ಪಿ.ಉಮಾ ಪ್ರಶಾಂತ್, ನಿಗಮ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್ ಪಾಲ್ಗೊಳ್ಳಲಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.