ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿನ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಅಧ್ಯಕ್ಷತೆಯಲ್ಲಿ ನಡೆದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.
ಸಂಸದ ಕ್ಯಾ. ಬ್ರಿಜೇಶ್ ಚೌಟರವರು ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಗಳ ನಿರ್ಮಾಣದ ಬಗ್ಗೆ ವಿಚಾರಿಸಿದಾಗ, ಪ್ರತಿಕ್ರಿಯಿಸಿದ ಎನ್‌ಎಚ್‌ಎಐನ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ ಉತ್ತರಿಸಿದರು.ಕಲ್ಲಡ್ಕ ಮೇಲ್ಸೇತುವೆ ಏಪ್ರಿಲ್‌ಗೆ ಮುಕ್ತ:
ಪಂಪ್‌ವೆಲ್‌ನಿಂದ ಗೋರಿಗುಡ್ಡ ಹೋಗುವ ಇಕ್ಕೆಲಗಳ ಸರ್ವಿಸ್ ರಸ್ತೆಯ ಅಗಲೀಕರಣ, ಒಳಚರಂಡಿ, ಫುಟ್‌ಪಾತ್ ಕಾಮಗಾರಿ 4 ಕೋಟಿ ರು. ವೆಚ್ಚದಲ್ಲಿ ಮುಂದಿನ ವಾರದಿಂದ ಆರಂಭವಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಶಾಸಕರಾದ ವೇದವ್ಯಾಸ್ ಕಾಮತ್, ಭಾಗೀರಥಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಜಿ.ಪಂ. ಸಿಇಒ ಡಾ. ಆನಂದ್, ಜಿಲ್ಲಾ ಅರಣ್ಯ ಉಪ ಸಂಕ್ಷಣಾಧಿಕಾರಿ ಆ್ಯಂಟನಿ ಮರಿಯಪ್ಪ, ಡಿಸಿಪಿ ಸಿದ್ಧಾರ್ಥ್ ಗೋಯಲ್ ಇದ್ದರು.ಖಂಡೇವು ನದಿ ನೀರು ಕಲುಷಿತ: ಕ್ರಮಕ್ಕೆ ಗಡುವುಇತಿಹಾಸ ಪ್ರಸಿದ್ಧ ಖಂಡೇವು ನಂದಿನಿ ನದಿಗೆ ಸಮೀಪದ ಮೆಡಿಕಲ್ ಕಾಲೇಜು ಹಾಗೂ ಪಾಲಿಕೆಯ ಚೇಳ್ಯಾರು ತ್ಯಾಜ್ಯ ಘಟಕದಿಂದ ಒಳಚರಂಡಿ ನೀರು ಸೇರುತ್ತಿದ್ದು, ನೀರು ಕಲುಷಿತಗೊಂಡು ಕಪ್ಪು ಬಣ್ಣಕ್ಕೆ ತಿರುಗಿದೆ. ಇದರ ವಿರುದ್ಧ ಸ್ಥಳೀಯರು ಮಾ. 4 ರಂದು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಈ ಬಗ್ಗೆ ತಕ್ಷಣ ಕ್ರಮ ವಹಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಆಗ್ರಹಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯ ಅಪಾರ್ಟ್‌ಮೆಂಟ್‌ಗಳಿಂದ ತ್ಯಾಜ್ಯ ನೀರು ಬಿಡುತ್ತಿರುವುದು ಕಂಡು ಬಂದಿದೆ. ಪಾಲಿಕೆ ಹಾಗೂ ಸ್ಥಳೀಯ ಮೆಡಿಕಲ್ ಕಾಲೇಜಿನಿಂದ ಸಂಸ್ಕರಣೆ ನೀರು ಬಿಡಲಾಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಹೇಳಿದಾಗ, ಅಸಮಾಧಾನಗೊಂಡ ಶಾಸಕ ಉಮಾನಾಥ ಕೋಟ್ಯಾನ್, ನದಿ ನೋಡುವಾಗಲೇ ಅದು ಎಷ್ಟು ಪರಿಶುದ್ಧ ಎಂದು ತಿಳಿಯುತ್ತದೆ. ಶುದ್ಧವಾಗಿದ್ದರೆ ಒಂದು ಲೋಟ ನೀರನ್ನು ಕುಡಿದು ತೋರಿಸಿ ಎಂದು ಸವಾಲೆಸೆದರು.
ಶಾಸಕ ಹರೀಶ್ ಪೂಂಜಾ ಮಾತನಾಡಿ, ಗುರುವಾಯನಕೆರೆಗೂ ಸ್ಥಳೀಯ ಕಾಲೇಜಿನ ತ್ಯಾಜ್ಯ ನೀರನ್ನು ಸಂಸ್ಕರಿಸದೆ ಹರಿಸಲಾಗುತ್ತಿದೆ ಎಂದು ಆರೋಪಿಸಿದಾಗ ಸಂಬಂಧಪಟ್ಟವರಿಗೆ ನೋಟೀಸು ನೀಡಿ ಕ್ರಮ ವಹಿಸುವುದಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ತಿಳಿಸಿದರು.ಶಾಖಾಘಾತ ತಡೆಗೆ ಕರೆಂಟ್ ಕಟ್!
ಮೆಸ್ಕಾಂ ಹಿರಿಯ ಅಧಿಕಾರಿ ರವಿಕಾಂತ್ ಪ್ರತಿಕ್ರಿಯಿಸಿ, ಕಳೆದ ಕೆಲವು ದಿನಗಳಿಂದ ದ.ಕ. ಜಿಲ್ಲೆಯಲ್ಲಿಯೂ ಬಿಸಿಗಾಳಿಯು ತೀವ್ರವಾಗಿದೆ. ಇದರಿಂದ ವಿದ್ಯುತ್ ಉಪಕರಣಗಳೂ ಶಾಖಾಘಾತಕ್ಕೆ ಒಳಗಾಗಿ ತೊಂದರೆಯಾಗುವ ಆತಂಕ ಎದುರಾಗಿದ್ದು, ಅವುಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತ ಆಗುತ್ತಿದ್ದು, ಈ ಸಮಸ್ಯೆ ಶೀಘ್ರವೇ ಬಗೆಹರಿಯಲಿದೆ ಎಂದರು.