ಕನ್ನಡಪ್ರಭ ವಾರ್ತೆ ಕಾಗವಾಡ
ತಾಲೂಕಿನ ಉಗಾರ ಗ್ರಾಮದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೆಹಲಿ ಸಭೆಯಲ್ಲಿ ಕೇಂದ್ರ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಎಂಎಸ್‌ಪಿ ಮತ್ತು ಎಫ್‌ಆರ್‌ಪಿ ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳ ಕುರಿತು ಚರ್ಚೆ ನಡೆಯಲಿದ್ದು, ರೈತರ ಪರವಾಗಿ ಸೂಕ್ತ ಹಾಗೂ ಸಕಾರಾತ್ಮಕ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದರೆ ಅ.13ರಿಂದ ಹೆದ್ದಾರಿ ತಡೆ ಚಳವಳಿ ತೀವ್ರಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಸರ್ಕಾರ ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಬ್ಬಿಗೆ ನ್ಯಾಯಯುತ ಬೆಲೆಗೆ ಆಗ್ರಹ:ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಮಾತನಾಡಿದ ರೈತ ಮುಖಂಡರಾದ ಶಶಿಕಾಂತ ಗುರೂಜಿ ಹಾಗೂ ಚನ್ನಪ್ಪ ಪೂಜಾರಿ, ರಸಗೊಬ್ಬರ, ಕೂಲಿ ಮತ್ತು ಸಾಗಾಣಿಕೆ ವೆಚ್ಚಗಳು ಗಣನೀಯವಾಗಿ ಹೆಚ್ಚಾಗಿರುವುದರಿಂದ ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವ ಅಗತ್ಯವಿದೆ ಎಂದರು.
ಎಫ್‌ಆರ್‌ಪಿ, ಎಸ್‌ಎಂಪಿ ಹಾಗೂ ಸಕ್ಕರೆ ಇಳುವರಿ ಲೆಕ್ಕಾಚಾರದಲ್ಲಿ ರೈತರಿಗೆ ತಾರತಮ್ಯವಾಗುತ್ತಿದೆ. ಸಕ್ಕರೆ ಕಾರ್ಖಾನೆಗಳು ಕಬ್ಬಿನ ಇಳುವರಿ ಲೆಕ್ಕಾಚಾರದಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುತ್ತಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಮುಖಂಡರು ಆರೋಪಿಸಿದರು.
ಡಾ.ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಉತ್ಪಾದನಾ ವೆಚ್ಚಕ್ಕೆ ಶೇ.50ರಷ್ಟು ಲಾಭ ಸೇರಿಸಿ ಕಬ್ಬಿನ ಬೆಲೆ ನಿಗದಿಪಡಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.ದೆಹಲಿ ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರೆಯದಿದ್ದರೆ ಅ.13ರಿಂದ ಹೆದ್ದಾರಿ ತಡೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಶಶಿಕಾಂತ ಗುರೂಜಿ ಹಾಗೂ ಚನ್ನಪ್ಪ ಪೂಜಾರಿ ಎಚ್ಚರಿಸಿದರು.
ಪ್ರಸಕ್ತ ಸಾಲಿನಲ್ಲಿ ಬರಗಾಲ, ನೀರಿನ ಕೊರತೆ, ಮಳೆ ಅಭಾವ ಹಾಗೂ ಕಬ್ಬಿಗೆ ರೋಗಬಾಧೆಯಿಂದ ಇಳುವರಿ ಕಡಿಮೆಯಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲವನ್ನು ತಕ್ಷಣ ಮನ್ನಾ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರೈತ ಮುಖಂಡರು ಒತ್ತಾಯಿಸಿದರು.