ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಮತ್ತು ಹೊರ ರಾಜ್ಯಗಳ ನಾಲ್ವರು ವಿದ್ಯಾರ್ಥಿಗಳು ತಂಡಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ವಿದ್ಯಾರ್ಥಿಗಳು -ಲ್‌ಸ್ಟಾಕ್ ಡೆವಲಪ್‌ಮೆಂಟ್ ಮತ್ತು ಸೈಬರ್ ಸೆಕ್ಯೂರಿಟಿ ತಂತ್ರಜನ ವಿಷಯಗಳಿಗೆ ಸಂಬಂಧಿಸಿದಂತೆ ತಮ್ಮ ತಾಂತ್ರಿಕ ಪರಿಣಿತಿಯನ್ನು ಹೊಸ ಆವಿಷ್ಕಾರಗಳನ್ನು ಮಂಡಿಸಲಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದ ತಂಡಗಳಿಗೆ ಕಾಲೇಜಿನ ವತಿಯಿಂದ ೩೦ ಸಾವಿರ ನಗದು ಬಹುಮಾನ ವಿತರಿಸಲಾಗುವುದು. ರ್‍ಯಾಂಕ್ ಬುಕ್ ಲರ್ನಿಂಗ್ ಅಂಡ್ ಸಾ-ವೇರ್ ಸೆಲ್ಯೂಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್ನ್‌ಶಿಪ್ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಕಂಪನಿಗಳಲ್ಲಿ ಉದ್ಯೋಗಾವಕಾಶಕ್ಕಾಗಿ ಪ್ರೋತ್ಸಾಹ ನೀಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಾಗುವುದು ಎಂದರು.ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಿಂದ ಮತ್ತು ಹೊರ ರಾಜ್ಯಗಳಿಂದ ೨೪೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುಮಾರು ೬೦ ತಂಡಗಳಲ್ಲಿ ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯ ಹೊರಬರಲು ಇದೊಂದು ಸೂಕ್ತ ವೇದಿಕೆ ಎಂದರು.
ಕಾಲೇಜಿನ ಪ್ರಾಧ್ಯಾಪಕರಾದ ಡಾ.ಬಿ.ಸಿ.ಸಿದ್ದರಾಜು, ಪ್ರೊ.ಅಮೋಸ್ ಅವರು ಗೋಷ್ಠಿಯಲ್ಲಿದ್ದರು.