ರಾಷ್ಟ್ರ ಮಟ್ಟದ ಕಾರ್ಯಾಗಾರ ಉದ್ಘಾಟನೆ

KannadaprabhaNewsNetwork |  
Published : Oct 15, 2025, 02:08 AM IST
ಚಿತ್ರ :  11ಎಂಡಿಕೆ3 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಗ್ರಂಥಾಲಯದ ವತಿಯಿಂದ ಒಂದು ದಿನದ ರಾಷ್ಟ್ರ ಮಟ್ಟದ ಕಾರ್ಯಾಗಾರ ನಡೆಯಿತು. | Kannada Prabha

ಸಾರಾಂಶ

ಫೀಲ್ದ್‌ ಮಾರ್ಷಲ್‌ ಕೆ ಎಂ ಕಾರ್ಯಪ್ಪ ಕಾಲೇಜಿನ ಗ್ರಂಥಾಲಯದ ವತಿಯಿಂದ ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಗ್ರಂಥಾಲಯದ ವತಿಯಿಂದ ಒಂದು ದಿನದ ರಾಷ್ಟ್ರ ಮಟ್ಟದ ಕಾರ್ಯಾಗಾರ ನಡೆಯಿತು.

ಕಾಲೇಜಿನ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಶಕ್ತಿ ದಿನಪತ್ರಿಕೆಯ ಸಲಹಾ ಸಂಪದಕರಾದ ಬಿ.ಜಿ.ಅನಂತಶಯನ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಓದು ಹಾಗೂ ಸಾಕ್ಷರತೆಯ ಮಹತ್ವದ ಕುರಿತು ವಿವರಿಸಿದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪಂಜಾಬ್ ಅಮೃತಸರ್ ಗುರುನಾನಕ್‌ದೇವ್ ವಿಶ್ವವಿದ್ಯಾಲಯದ ಗ್ರಂಥಾಲಯ ಮಾಹಿತಿ ವಿಜ್ಞಾನ ವಿಭಾಗದ ಪ್ರೊ.ಎಂ.ಪಿ.ಸತೀಜ ಹಾಗೂ ಬೆಂಗಳೂರು ಇಂಡಿಯನ್ ಸ್ಟೇಟಿಸ್ಟಿಕಲ್ ಇನ್ಸ್ಸ್ಟಿಟ್ಯೂಟ್ (ಐ.ಎಸ್.ಐ) ಡಾಕ್ಯುಮೆಂಟೇಶನ್ ಮತ್ತು ರಿಸರ್ಚ್ ಟ್ರೆöÊನಿಂಗ್ ಸೆಂಟರ್ ಮುಖ್ಯಸ್ಥರಾದ ಡಾ.ಕೃಷ್ಣಮೂರ್ತಿ ಮಾತನಾಡಿ ಸಾಕ್ಷರತೆ, ಓದು ಹಾಗೂ ಸಂಶೋಧನಾ ಪ್ರಬಂಧ, ಬರವಣಿಗೆಯ ಮಹತ್ವ, ಬರವಣಿಗೆಯಲ್ಲಿ ಪಾಲಿಸಬೇಕಾದ ನೀತಿ ನಿಯಮಗಳ ಬಗ್ಗೆ ತಾಂತ್ರಿಕ ಉಪನ್ಯಾಸ ನೀಡಿದರು. ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ, ಕಾಲೇಜಿನ ಗ್ರಂಥಾಲಯದ ಡಿಜಿಟಲೀಕರಣ, ಇ-ಬುಕ್ ವ್ಯವಸ್ಥೆ, ಇ.ಲರ್ನಿಂಗ್, ವಿದ್ಯಾರ್ಥಿಗಳಿಗೆ ದೈನಂದಿನ ಬಳಕೆಗೆ ಸುಲಭವಾದ ವ್ಯವಸ್ಥೆಗಳು ಹಾಗೂ ವಿದ್ಯಾರ್ಥಿಗಳಲ್ಲಿ ಓದಿನ ಮಹತ್ವದ ಬಗ್ಗೆ ತಿಳಿಸಿದರು. ರಾಜ್ಯದ ವಿವಿಧ ಭಾಗಗಳ ಗ್ರಂಥಪಾಲಕರು, ಸ್ಥಳೀಯ ಗ್ರಂಥಪಾಲಕರು ಮತ್ತು ಉಪನ್ಯಾಸಕರು ಸೇರಿ ಒಟ್ಟು 62 ಮಂದಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಭೋದಕೇತರರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಕಾರ್ಯಾಗಾರದ ಆಯೋಜಕರು ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಗ್ರಂಥಪಾಲಕಿ ಡಾ. ಸಿ.ವಿಜಯಲತ ಸ್ವಾಗತಿಸಿದರು, ವಾಣಿಜ್ಯ ಶಾಸ್ತ್ರ ವಿಭಾಗದ ಡಾ.ಶೈಲಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳಾದ ಸ್ವಪ್ನ, ಚೊಂದಮ್ಮ ಪ್ರಾರ್ಥಿಸಿದರು. ಸಮಾಜಶಾಸ್ತ್ರ ವಿಭಾಗದ ಡಾ. ಎ.ಎನ್.ಗಾಯತ್ರಿ ವಂದಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಗುಂಪು ಚರ್ಚೆ ನಡೆಸಿ, ಭಾಗವಹಿಸಿದವರಿಗೆ ಪ್ರಮಾಣ ಪತ್ರ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!