ರಾಷ್ಟ್ರೀಯ ಲೋಕ ಅದಾಲತ್: ₹50.88 ಕೋಟಿ ಪಾವತಿ

KannadaprabhaNewsNetwork |  
Published : Sep 22, 2026, 02:15 AM IST
ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. | Kannada Prabha

ಸಾರಾಂಶ

ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಒಟ್ಟು 37 ಕುಟುಂಬದ ಆಸ್ತಿ ವಿಭಜನೆಯ ಪ್ರಕರಣಗಳು ಹಾಗೂ 432 ಚೆಕ್ ಬೌನ್ಸ್ ಪ್ರಕರಣಗಳು ಮತ್ತು 35 ಮೋಟಾರು ಅಪಘಾತ ಪರಿಹಾರ ಪ್ರಕರಣಗಳು ರಾಜಿಯಾಗಿ ಇತ್ಯರ್ಥಗೊಂಡಿರುವುದು ವಿಶೇಷವಾಗಿದೆ.

ಕಾರವಾರ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಂತೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ್ವಯ ಪರಿಹಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಇತ್ಯರ್ಥಪಡಿಸಲು ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 46,129 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 18,740 ಸಿವಿಲ್ ಪ್ರಕರಣಗಳು ಹಾಗೂ 27,389 ಕ್ರಿಮಿನಲ್ ಪ್ರಕರಣಗಳು, ಪ್ರಸ್ತುತ ಹಂತದ ಪ್ರಕರಣಗಳಲ್ಲಿ 15,245 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳಿದ್ದು, ಅವುಗಳ ಪೈಕಿ 10,842 ರಾಜೀ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು.

ರಾಜೀ ಸಂಧಾನಕ್ಕಾಗಿ ತೆಗೆದುಕೊಂಡ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ 6,041 ಪ್ರಕರಣಗಳು ಹಾಗೂ 1,41,697 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ. ಸದರಿ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಾಲ ಮರುಪಾವತಿ, ಪರಿಹಾರ, ದಂಡ ಹಾಗೂ ಇತ್ಯಾದಿ ಹಣಕಾಸಿನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು ₹50,88,22,367 ಹಣ ಸಂಗ್ರಹ ಮತ್ತು ಪಾವತಿಯಾಗಿದೆ.ನ್ಯಾಯಾಲಯದ ಮೆಟ್ಟಿಲೇರಿದ ಕಾರವಾರ, ಕುಮಟಾ, ಸಿದ್ದಾಪುರ ಮತ್ತು ಮುಂಡಗೋಡದ ಒಟ್ಟು 4 ಕೌಟುಂಬಿಕ ಪ್ರಕರಣ ರಾಜಿಯಾಗಿ ದಂಪತಿಗಳು ಒಟ್ಟಿಗೆ ಜೀವನ ನಡೆಸಲು ಒಪ್ಪಿಕೊಂಡು ಕೂಡಿ ಹೋಗಿರುವ ಒಳ್ಳೆಯ ಬೆಳವಣಿಗೆಯು ಕೂಡ ನ್ಯಾಯಾಲಯದ ಲೋಕ ಅದಾಲತನಲ್ಲಿ ನಡೆಯಿತು. ಜೀವನಾಂಶಕ್ಕಾಗಿ ಸಲ್ಲಿಸಿದ್ದ ಸುಮಾರು 29 ಪ್ರಕರಣಗಳು ರಾಜಿಯಾಗಿವೆ. ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಒಟ್ಟು 37 ಕುಟುಂಬದ ಆಸ್ತಿ ವಿಭಜನೆಯ ಪ್ರಕರಣಗಳು ಹಾಗೂ 432 ಚೆಕ್ ಬೌನ್ಸ್ ಪ್ರಕರಣಗಳು ಮತ್ತು 35 ಮೋಟಾರು ಅಪಘಾತ ಪರಿಹಾರ ಪ್ರಕರಣಗಳು ರಾಜಿಯಾಗಿ ಇತ್ಯರ್ಥಗೊಂಡಿರುವುದು ವಿಶೇಷವಾಗಿದೆ.ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣಗಳು ರಾಜಿಯಾಗಲು ಸಹಕರಿಸಿದವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಅಭಿನಂದನೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋದಿ ಜನ್ಮದಿನ: ನಾಳೆ ಬೃಹತ್ ರಕ್ತದಾನ ಶಿಬಿರ
ಸಮಾಜಮುಖಿ ಚಿಂತನೆ, ಅಭಿವೃದ್ಧಿಗೆ ಸದಾಕಾಲ ಮನ್ನಣೆ: ಸಂಸದ ಬೊಮ್ಮಾಯಿ