- ಶೀಘ್ರ ನ್ಯಾಯ ಪಡೆಯಲು ರಾಜಿ ಸಂಧಾನ ಸೂಕ್ತ: ನ್ಯಾ.ರಾಜೇಶ್ವರಿ ಎನ್. ಹೆಗಡೆ ಸಲಹೆ - - - ಕನ್ನಡಪ್ರಭ ವಾರ್ತೆ, ದಾವಣಗೆರೆ
ಮಂಗಳವಾರ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 13ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಲೋಕ್ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ವಾಜ್ಯಪೂರ್ವ ಪ್ರಕರಣಗಳು:ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಮೇಂಟನೆನ್ಸ್ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು (ರಾಜಿ ಆಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ) ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ರಾಜಿ ಆಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ಬಗೆಹರಿಸಲಾಗುವುದು. ಈ ದಿನಾಂಕಗಳ ಹೊರತಾಗಿಯೂ ಸತತವಾಗಿ ನಡೆಯುವ ಲೋಕ್ ಅದಾಲತ್ ಮುಖಾಂತರ ಕೂಡ ಕಕ್ಷಿದಾರರು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಜಿಲ್ಲಾಮಟ್ಟದಲ್ಲಿ ನ್ಯಾಯಾಧೀಶರು ವಕೀಲರ ಸಹಕಾರದೊಂದಿಗೆ ಕಲಾಪ ನಡೆಸುವರು. ಇದೇ ರೀತಿ ತಾಲೂಕು ಮಟ್ಟದಲ್ಲೂ ಅದಾಲತ್ ನಡೆಯಲಿದೆ. ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಳ್ಳಲು ಲೋಕ್ ಅದಾಲತ್ ಸದುಪಯೋಗ ಪಡೆಯಬಹುದು ಎಂದರು.
- - -
- - - ಬಾಕ್ಸ್-2* ಸುಪ್ರೀಂ ಕೋರ್ಟಿನಲ್ಲಿ ವಿಶೇಷ ಲೋಕ್ ಅದಾಲತ್ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಮತ್ತು ರಾಜಿ ಆಗಬಲ್ಲ ಪ್ರಕರಣಗಳ ಬಗ್ಗೆ ಜು.29ರಿಂದ ಆ.3 ರವರೆಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಶೇಷ ಲೋಕ್ ಅದಾಲತ್ ಆಯೋಜಿಸಲಾಗಿದೆ. ಬೇರೆ ಬೇರೆ ತಾಲೂಕಿನಿಂದ 31 ಪ್ರಕರಣಗಳಿವೆ. ಅದಾಲತ್ತಿಗೆ ಅನುಕೂಲ ಆಗಲೆಂದು ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ರಾಜಿಪೂರ್ವ ಸಮಾಲೋಚನೆಗಳ ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಆಸ್ತಿ ತೆರಿಗೆ ಪಾವತಿಸಲು ಅನುಕೂಲ ಆಗಲೆಂದು 5% ರಿಯಾಯಿತಿಯನ್ನು ಸರ್ಕಾರ ಆದೇಶದ ಮೂಲಕ ಜಾರಿಗೊಳಿಸಿದೆ. ಈ ಸದಾವಕಾಶ ಸಾರ್ವಜನಿಕರು ಬಳಸಿಕೊಳ್ಳಬಹುದು ಎಂದರು.
- - - -9ಕೆಡಿವಿಜಿ32ಃ: