ಜಿಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್

KannadaprabhaNewsNetwork |  
Published : Mar 09, 2025, 01:45 AM IST
ಜಿಲ್ಲೆಯ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್  | Kannada Prabha

ಸಾರಾಂಶ

ಚಾಮರಾಜನಗರದ ಜಿಲ್ಲಾ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜೀ ಆಗಬಹುದಾದ ಹಲವು ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.ಜಿಲ್ಲೆಯ ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ, ಗುಂಡ್ಲುಪೇಟೆ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ರಾಜಿಯಾಗಬಲ್ಲ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಕಕ್ಷಿದಾರರ ಸಮ್ಮುಖದಲ್ಲಿ ಬ್ಯಾಂಕ್ ವ್ಯವಹಾರ, ಕೌಟುಂಬಿಕ ಸಂಬಂಧಪಟ್ಟ ಪ್ರಕರಣಗಳು ಸಾಲ ವಸೂಲಾತಿ, ಮೋಟಾರು ವಿವಾದಗಳು, ಭೂಮಿ ಸ್ವಾಧೀನ ಪ್ರಕರಣಗಳು ಸೇರಿದಂತೆ ಇತರೆ ಹಲವು ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಒಂದಾದ ದಂಪತಿ:ಗುಂಡ್ಲುಪೇಟೆಯ ಅನಿಲ್ ರಾಜ್ ಹಾಗೂ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ಭಾಗೀರಥಿ ಎಂಬ ದಂಪತಿ ಜೀವನಾಂಶ, ವಿವಾಹ ವಿಚ್ಚೇದನಕ್ಕೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ಕಳೆದ ೫ ವರ್ಷಗಳಿಂದಲೂ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿತ್ತು. ಲೋಕ ಅದಾಲತ್‌ನಲ್ಲಿ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಮುಕ್ತಾಯಗೊಳಿಸಿಲಾಯಿತು, ಅವರು ಮುತ್ತೆ ಒಂದಾಗಿದ್ದಾರೆ. ಭಾಗೀರಥಿ ಪರವಾಗಿ ವಕೀಲರಾದ ನಂಜಯ್ಯ ಹಾಗೂ ಅನಿಲ್ ರಾಜ್ ಪರವಾಗಿ ವಕೀಲ ಸಿದ್ದರಾಜು ವಾದ ಮಂಡಿಸುತ್ತಿದ್ದರು. ಎರಡು ಕಡೆಯ ವಕೀಲರ ಸಮ್ಮುಖದಲ್ಲಿ ರಾಜೀ ಸಂಧಾನದ ಮೂಲಕ ದಂಪತಿ ಒಂದಾದರು. ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರಾದ ಬಿ.ಎಸ್.ಭಾರತಿ, ಕೃಷ್ಣ, ಲೋಕಪ್ಪ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಂಜಯ್ಯ, ಪ್ರಧಾನ ಕಾರ್ಯದರ್ಶಿ ದೊಡ್ಡಮೋಳೆ ರಂಗಸ್ವಾಮಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!